1 Samuel 22:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದ್ದರಿಂದ ರಾಜನು ದೋಯೇಗನಿಗೆ, “ನೀನು ಹೋಗಿ ಯಾಜಕರನ್ನು ಕೊಂದುಹಾಕು” ಎಂದು ಹೇಳಿದನು. ಆದ್ದರಿಂದ ಎದೋಮ್ಯನಾದ ದೋಯೇಗನು ಹೋಗಿ ಆ ದಿನ ಎಂಭತ್ತೈದು ಮಂದಿ ಯಾಜಕರನ್ನು ಕೊಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದ್ದರಿಂದ ಸೌಲನು ಎದೋಮ್ಯನಾದ ದೋಯೇಗನಿಗೆ, “ನೀನು ಹೋಗಿ ಅವರನ್ನು ಕೊಲ್ಲು” ಎಂದು ಆಜ್ಞಾಪಿಸಲು, ಅವನು ನಾರು ಬಟ್ಟೆಯ ಎಪೋದನ್ನು ಧರಿಸಿಕೊಂಡಿದ್ದ ಎಂಭತ್ತೈದು ಯಾಜಕರನ್ನು ಆ ದಿನ ಕೊಂದುಹಾಕಿದನು.
Kannada BSI Bible 2016
ಅರಸನು ದೋಯೇಗನಿಗೆ--ನೀನು ತಿರುಗಿಕೊಂಡು ಯಾಜಕರ ಮೇಲೆ ಬೀಳು ಅಂದನು. ಆಗ ಎದೋಮ್ಯನಾದ ದೋಯೇಗನು ತಿರುಗಿಕೊಂಡು ಯಾಜಕರ ಮೇಲೆ ಬಿದ್ದು ನಾರುಬಟ್ಟೆಯ ಎಫೋದನ್ನು ಧರಿಸಿಕೊಳ್ಳುವವರಾದ ಎಂಭತ್ತೈದು ಜನರನ್ನು ಆ ದಿನದಲ್ಲಿ ಕೊಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದದರಿಂದ ಸೌಲನು ಎದೋಮ್ಯನಾದ ದೋಯೇಗನಿಗೆ - ನೀನು ಹೋಗಿ ಅವರನ್ನು ಕೊಲ್ಲು ಎಂದು ಆಜ್ಞಾಪಿಸಲು ಅವನು ನಾರು ಬಟ್ಟೆಯ ಏಫೋದನ್ನು ಧರಿಸಿಕೊಂಡಿದ್ದ ಎಂಭತ್ತೈದು ಮಂದಿ ಯಾಜಕರನ್ನು ಆ ದಿವಸ ಕೊಂದುಹಾಕಿದನು.
Kannada Bible (KNCL) BSI 2016
ಆದುದರಿಂದ ಸೌಲನು ಎದೋಮ್ಯನಾದ ದೋಯೇಗನಿಗೆ, “ನೀನು ಹೋಗಿ ಅವರನ್ನು ಕೊಲ್ಲು,” ಎಂದು ಆಜ್ಞಾಪಿಸಿದನು. ಅವನು ನಾರುಮಡಿಯ ಏಫೋದನ್ನು ಧರಿಸಿಕೊಂಡಿದ್ದ ಎಂಬತ್ತೈದು ಮಂದಿ ಯಾಜಕರನ್ನು ಆ ದಿವಸ ಕೊಂದುಹಾಕಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅರಸನು ದೋಯೇಗನಿಗೆ, “ನೀನು ತಿರುಗಿಕೊಂಡು ಯಾಜಕರ ಮೇಲೆ ಬೀಳು,” ಎಂದನು. ಆಗ ಎದೋಮ್ಯನಾದ ದೋಯೇಗನು ತಿರುಗಿಕೊಂಡು ಯಾಜಕರ ಮೇಲೆ ಬಿದ್ದು, ನಾರುಬಟ್ಟೆಯ ಏಫೋದನ್ನು ಧರಿಸಿಕೊಳ್ಳುವವರಾದ ಎಂಬತ್ತೈದು ಯಾಜಕರನ್ನು ಆ ದಿನದಲ್ಲಿ ಕೊಂದನು.