1 Samuel 22:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದಾವೀದನ ಜೊತೆ ಅನೇಕ ಜನರು ಸೇರಿಕೊಂಡರು. ತೊಂದರೆಯಲ್ಲಿರುವವರು, ಸಾಲಗಾರರು ಮತ್ತು ಅತೃಪ್ತರಾದವರು ದಾವೀದನನ್ನು ಆಶ್ರಯಿಸಿಕೊಂಡರು. ದಾವೀದನು ಅವರಿಗೆಲ್ಲಾ ನಾಯಕನಾದನು. ದಾವೀದನೊಂದಿಗೆ ನಾನೂರು ಜನರಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ಕುಗ್ಗಿದವರೂ, ಸಾಲಗಾರರೂ, ಮನನೊಂದವರೂ, ಆಗಿರುವ ಸರ್ವಜನರೂ ಬಂದು ಅವನನ್ನು ಆಶ್ರಯಿಸಿಕೊಳ್ಳಲು, ಅವನು ಸುಮಾರು ನಾನೂರು ಜನರಿಗೆ ನಾಯಕನಾದನು.
Kannada BSI Bible 2016
ಇದಲ್ಲದೆ ಶ್ರಮೆಪಟ್ಟವರೂ ಸಾಲಗಾರರೂ ತೃಪ್ತಿಯಿಲ್ಲದವರೂ ಅವನ ಸಂಗಡ ಕೂಡಿಕೊಂಡರು. ಆಗ ಅವರಿಗೆ ದಾವೀದನು ಅಧಿಪತಿಯಾದನು, ಹೆಚ್ಚು ಕಡಿಮೆ ನಾನೂರು ಜನರು ಅವನ ಬಳಿಯಲ್ಲಿ ಇದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಕುಗ್ಗಿದವರೂ ಸಾಲಗಾರರೂ ಮನನೊಂದವರೂ ಆಗಿರುವ ಸರ್ವಜನರೂ ಬಂದು ಅವನನ್ನು ಆಶ್ರಯಿಸಿಕೊಳ್ಳಲು ಅವನು ಸುಮಾರು ನಾನೂರು ಜನರಿಗೆ ನಾಯಕನಾದನು.
Kannada Bible (KNCL) BSI 2016
ಇದಲ್ಲದೆ ಶೋಷಿತರು, ಸಾಲಗಾರರು ಹಾಗು ಮನನೊಂದವರು ಆಗಿದ್ದ ಜನಸಾಮಾನ್ಯರು ಬಂದು ಅವನನ್ನು ಆಶ್ರಯಿಸಿಕೊಂಡರು. ಹೀಗೆ ಅವನು ಸುಮಾರು ನಾನೂರು ಜನರಿಗೆ ನಾಯಕನಾದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಶ್ರಮಪಟ್ಟವರೂ, ಸಾಲಗಾರರೂ, ಅಸಂತುಷ್ಟರೂ ಅವನ ಸಂಗಡ ಕೂಡಿಕೊಂಡರು. ಆಗ ದಾವೀದನು ಅವರಿಗೆ ಅಧಿಪತಿಯಾದನು. ಹೆಚ್ಚು ಕಡಿಮೆ ನಾನೂರು ಜನರು ಅವನ ಬಳಿಯಲ್ಲಿ ಇದ್ದರು.