1 Samuel 22:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಗಾದ್ ಪ್ರವಾದಿಯು ದಾವೀದನಿಗೆ, “ನೀನು ಕೋಟೆಯಲ್ಲಿರಬೇಡ. ಯೆಹೂದ್ಯರ ದೇಶಕ್ಕೆ ಹೋಗು” ಎಂದು ಹೇಳಿದನು. ಆದ್ದರಿಂದ ದಾವೀದನು ಹೆರೆತ್ ಅರಣ್ಯಕ್ಕೆ ಹೊರಟುಹೋದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಗಾದ್ ಪ್ರವಾದಿಯು ದಾವೀದನಿಗೆ, “ನೀನು ಈ ದುರ್ಗದಲ್ಲಿರಬಾರದು, ಇದನ್ನು ಬಿಟ್ಟು ಯೆಹೂದ ದೇಶಕ್ಕೆ ಹೋಗು” ಎಂದು ಹೇಳಿದ್ದರಿಂದ ಅವನು ಹೆರೆತ್ ಅರಣ್ಯಕ್ಕೆ ಹೋದನು.
Kannada BSI Bible 2016
ಆದರೆ ಗಾದ್ ಪ್ರವಾದಿಯು ದಾವೀದನಿಗೆ--ನೀನು ಗವಿಯಲ್ಲಿರದೆ ಯೆಹೂದ ದೇಶಕ್ಕೆ ಹೊರಟು ಬಾ ಅಂದನು. ಆಗ ದಾವೀದನು ಹೊರಟು ಹೆರೆತ್ ಎಂಬ ಅರಣ್ಯಕ್ಕೆ ಬಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಗಾದ್‍ಪ್ರವಾದಿಯು ದಾವೀದನಿಗೆ - ನೀನು ಈ ದುರ್ಗದಲ್ಲಿರಬಾರದು; ಇದನ್ನು ಬಿಟ್ಟು ಯೆಹೂದ ದೇಶಕ್ಕೆ ಹೋಗು ಎಂದು ಹೇಳಿದದರಿಂದ ಅವನು ಹೆರೆತ್ ಅರಣ್ಯಕ್ಕೆ ಹೋದನು.
Kannada Bible (KNCL) BSI 2016
ಗಾದ್ ಪ್ರವಾದಿಯು ದಾವೀದನಿಗೆ, “ನೀನು ಈ ದುರ್ಗದಲ್ಲಿರಬಾರದು; ಇದನ್ನು ಬಿಟ್ಟು ಯೆಹೂದ ನಾಡಿಗೆ ಹೋಗು,” ಎಂದು ಹೇಳಿದ್ದರಿಂದ ಅವನು ಹೆರೆತ್ ಮರುಭೂಮಿಗೆ ಹೋದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಗಾದನೆಂಬ ಪ್ರವಾದಿಯು ದಾವೀದನಿಗೆ, “ನೀನು ಗವಿಯಲ್ಲಿರದೆ ಯೆಹೂದ ದೇಶಕ್ಕೆ ಹೊರಟು ಬಾ,” ಎಂದನು. ಆಗ ದಾವೀದನು ಹೊರಟು ಹೆರೆತ್ ಎಂಬ ಅರಣ್ಯಕ್ಕೆ ಬಂದನು.