1 Samuel 22:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದಾವೀದನ ಮತ್ತು ಅವನ ಜನರ ಬಗ್ಗೆ ಜನರು ತಿಳಿದಿದ್ದಾರೆಂಬುದು ಸೌಲನಿಗೆ ಗೊತ್ತಾಯಿತು. ಗಿಬೆಯ ಬೆಟ್ಟದ ಮೇಲಿನ ಮರದ ಕೆಳಗೆ ಸೌಲನು ಕುಳಿತಿದ್ದನು. ಸೌಲನ ಕೈಯಲ್ಲಿ ಭರ್ಜಿಯಿತ್ತು. ಸೌಲನ ಅಧಿಕಾರಿಗಳೆಲ್ಲ ಅವನ ಸುತ್ತಲೂ ನಿಂತಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಒಂದು ದಿನ ಸೌಲನು ತನ್ನ ಎಲ್ಲಾ ಪರಿವಾರದವರ ನಡುವೆ ಕೈಯಲ್ಲಿ ಬರ್ಜಿಯನ್ನು ಹಿಡಿದುಕೊಂಡು, ಗಿಬೆಯ ಗುಡ್ಡದ ಪಿಚುಲ ವೃಕ್ಷದ ಕೆಳಗೆ ಕುಳಿತುಕೊಂಡಿರಲು ದಾವೀದನೂ ಅವನ ಜನರೂ ಅಡಗಿಕೊಂಡಿರುವ ಸ್ಥಳವು ತಿಳಿದುಬಂದಿದೆ ಎಂಬ ಸುದ್ದಿಯು ಅವನಿಗೆ ಮುಟ್ಟಿತು.
Kannada BSI Bible 2016
ದಾವೀದನನ್ನು ಅವನ ಸಂಗಡವಿರುವ ಮನುಷ್ಯ ರನ್ನು ನೋಡಿದರೆಂಬ ವರ್ತಮಾನವನ್ನು ಸೌಲನು ಕೇಳಿದನು. (ಸೌಲನು ಗಿಬೆಯಲ್ಲಿರುವ ರಾಮದಲ್ಲಿ ಒಂದು ಮರದ ಕೆಳಗೆ ತನ್ನ ಈಟಿಯನ್ನು ಕೈಯಲ್ಲಿ ಹಿಡಿದು ಕುಳಿತುಕೊಂಡನು; ಅವನ ಸೇವಕರೆಲ್ಲರೂ ಸುತ್ತಲೂ ನಿಂತಿದ್ದರು.)
Kannada BSI JV (ಕನ್ನಡ ಸತ್ಯವೇದವು J.V. (BSI))
ಒಂದು ದಿವಸ ಸೌಲನು ತನ್ನ ಎಲ್ಲಾ ಪರಿವಾರದವರ ನಡುವೆ ಕೈಯಲ್ಲಿ ಬರ್ಜಿಯನ್ನು ಹಿಡಿದುಕೊಂಡು ಗಿಬೆಯ ಗುಡ್ಡದ ಪಿಚುಲವೃಕ್ಷದ ಕೆಳಗೆ ಕೂತುಕೊಂಡಿರಲು ದಾವೀದನೂ ಅವನ ಜನರೂ ಅಡಗಿಕೊಂಡಿರುವ ಸ್ಥಳವು ಗೊತ್ತಾಗಿದೆ ಎಂಬ ಸುದ್ದಿಯು ಅವನಿಗೆ ಮುಟ್ಟಿತು.
Kannada Bible (KNCL) BSI 2016
ಒಂದು ದಿನ ಸೌಲನು ತನ್ನ ಎಲ್ಲಾ ಪರಿವಾರದವರ ನಡುವೆ ಕೈಯಲ್ಲಿ ಭರ್ಜಿಯನ್ನು ಹಿಡಿದುಕೊಂಡು ಗಿಬೆಯ ಗುಡ್ಡದ ಪಿಚುಲವೃಕ್ಷದ ಕೆಳಗೆ ಕುಳಿತುಕೊಂಡನು. “ದಾವೀದನೂ ಅವನ ಜನರೂ ಅಡಗಿಕೊಂಡಿರುವ ಸ್ಥಳ ಗೊತ್ತಾಗಿದೆ,” ಎಂಬ ಸುದ್ದಿ ಅವನಿಗೆ ಮುಟ್ಟಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಒಂದು ದಿನ ದಾವೀದನೂ ಅವನ ಸಂಗಡ ಇದ್ದವರೂ ಅಡಗಿಕೊಂಡಿದ್ದಾರೆ ಎಂಬ ವರ್ತಮಾನವನ್ನು ಸೌಲನು ಕೇಳಿದನು. ಆಗ ಅವನು ಗಿಬೆಯದ ಗುಡ್ಡದಲ್ಲಿ ಒಂದು ಪಿಚುಲ ವೃಕ್ಷದ ಕೆಳಗೆ ತನ್ನ ಈಟಿಯನ್ನು ಕೈಯಲ್ಲಿ ಹಿಡಿದು ಕುಳಿತುಕೊಂಡನು. ಅವನ ಸೇವಕರೆಲ್ಲರು ಸುತ್ತಲೂ ನಿಂತಿದ್ದರು.