1 Samuel 22:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸೌಲನು ತನ್ನ ಸುತ್ತಲೂ ನಿಂತಿದ್ದ ಅಧಿಕಾರಿಗಳಿಗೆ, “ಬೆನ್ಯಾಮೀನನ ಜನರೇ, ಕೇಳಿ! ಇಷಯನ ಮಗನಾದ ದಾವೀದನು ನಿಮಗೆ ಹೊಲಗಳನ್ನೂ ದ್ರಾಕ್ಷಿತೋಟಗಳನ್ನೂ ಕೊಡುತ್ತಾನೆಂದು ತಿಳಿದಿರುವಿರಾ? ದಾವೀದನು ನಿಮಗೆ ಸಹಸ್ರಾಧಿಪತಿಗಳಾಗಿ ಮತ್ತು ಶತಾಧಿಪತಿಗಳಾಗಿ ಬಡ್ತಿ ನೀಡುತ್ತಾನೆಂದು ನೀವು ತಿಳಿದಿರುವಿರಾ?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಅವನು ತನ್ನ ಸುತ್ತಲೂ ನಿಂತಿದ್ದ ಪರಿವಾರದವರಿಗೆ, “ಬೆನ್ಯಾಮೀನನ ಮಕ್ಕಳೇ ಕೇಳಿರಿ. ನೀವೆಲ್ಲರೂ ನನಗೆ ಒಳಸಂಚು ಮಾಡುವುದೇಕೆ? ಇಷಯನ ಮಗನು ನಿಮ್ಮೆಲ್ಲರಿಗೂ ಹೊಲಗಳನ್ನು, ದ್ರಾಕ್ಷಿತೋಟಗಳನ್ನು ಕೊಡುವನೋ? ಎಲ್ಲರನ್ನು ಸಹಸ್ರಾಧಿಪತಿಗಳನ್ನಾಗಲಿ, ಶತಾಧಿಪತಿಗಳನ್ನಾಗಲಿ ಮಾಡುವನೋ?
Kannada BSI Bible 2016
ಆಗ ಸೌಲನು ಸುತ್ತಲೂ ನಿಂತಿದ್ದ ಸೇವಕರಿಗೆ--ಬೆನ್ಯಾವಿಾನನ ಮಕ್ಕಳೇ, ಕೇಳಿರಿ; ನೀವೆಲ್ಲರೂ ನನಗೆ ವಿರೋಧವಾಗಿ ಒಳಸಂಚು ನಡಿಸು ವಂತೆ ಇಷಯನ ಮಗನು ನಿಮ್ಮೆಲ್ಲರಿಗೂ ಹೊಲ ಗಳನ್ನೂ ದ್ರಾಕ್ಷೇತೋಟಗಳನ್ನೂ ಕೊಡುವನೋ? ನಿಮ್ಮೆಲ್ಲರನ್ನೂ ಸಾವಿರಕ್ಕೆ ಯಜಮಾನರಾಗಿಯೂ ನೂರಕ್ಕೆ ಯಜಮಾನರಾಗಿಯೂ ಇಡುವನೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಅವನು ತನ್ನ ಸುತ್ತಲೂ ನಿಂತಿದ್ದ ಪರಿವಾರದವರಿಗೆ - ಬೆನ್ಯಾಮೀನನ ಮಕ್ಕಳೇ, ಕೇಳಿರಿ; ನೀವೆಲ್ಲರೂ ನನಗೆ ವಿರೋಧವಾಗಿ ಒಳಸಂಚು ಮಾಡುವದೇಕೆ? ಇಷಯನ ಮಗನು ನಿಮ್ಮೆಲ್ಲರಿಗೂ ಹೊಲಗಳನ್ನೂ ದ್ರಾಕ್ಷೇತೋಟಗಳನ್ನೂ ಕೊಡುವನೋ ಎಲ್ಲರನ್ನೂ ಸಹಸ್ರಾಧಿಪತಿಗಳನ್ನಾಗಲಿ ಶತಾಧಿಪತಿಗಳನ್ನಾಗಲಿ ಮಾಡುವನೋ?
Kannada Bible (KNCL) BSI 2016
ಆಗ ಅವನು ತನ್ನ ಸುತ್ತಲೂ ನಿಂತಿದ್ದ ಪರಿವಾರದವರಿಗೆ, “ಬೆನ್ಯಾಮೀನನ ಕುಲಪುತ್ರರೇ ಕೇಳಿ; ನೀವೆಲ್ಲರೂ ನನಗೆ ವಿರೋಧವಾಗಿ ಒಳಸಂಚು ಮಾಡುವುದೇಕೆ? ಜೆಸ್ಸೆಯನ ಮಗನು ನಿಮ್ಮೆಲ್ಲರಿಗೂ ಹೊಲಗಳನ್ನೂ ದ್ರಾಕ್ಷಿತೋಟಗಳನ್ನೂ ಕೊಡುತ್ತಾನೆಯೇ? ಎಲ್ಲರನ್ನು ಸಹಸ್ರಾಧಿಪತಿಗಳನ್ನಾಗಲಿ, ಶತಾಧಿಪತಿಗಳನ್ನಾಗಲಿ ಮಾಡುತ್ತಾನೆಯೆ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಸೌಲನು ಸುತ್ತಲು ನಿಂತಿದ್ದ ಸೇವಕರಿಗೆ, “ಬೆನ್ಯಾಮೀನನ ಮಕ್ಕಳೇ, ಕೇಳಿರಿ. ನೀವೆಲ್ಲರೂ ನನಗೆ ವಿರೋಧವಾಗಿ ಒಳಸಂಚು ನಡೆಸುವಂತೆ ಇಷಯನ ಮಗನು ನಿಮ್ಮೆಲ್ಲರಿಗೆ ಹೊಲಗಳನ್ನೂ, ದ್ರಾಕ್ಷಿತೋಟಗಳನ್ನೂ ಕೊಡುವನೋ? ನಿಮ್ಮೆಲ್ಲರನ್ನು ಸಾವಿರಕ್ಕೆ ನಾಯಕರಾಗಿಯೂ, ನೂರಕ್ಕೆ ನಾಯಕರಾಗಿಯೂ ಮಾಡುವನೋ?