1 Samuel 23:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದಾವೀದನು, “ಇಸ್ರೇಲರ ದೇವರಾದ ಯೆಹೋವನೇ, ಸೌಲನು ನನಗಾಗಿ ಕೆಯೀಲಾಕ್ಕೆ ಬರುತ್ತಾನೆಂಬುದೂ ಈ ಪಟ್ಟಣವನ್ನು ನಾಶಗೊಳಿಸುತ್ತಾನೆಂಬುದೂ ತಿಳಿಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ದಾವೀದನು, “ಇಸ್ರಾಯೇಲ್ಯರ ದೇವರಾದ ಯೆಹೋವನೇ ಸೌಲನು ಕೆಯೀಲಕ್ಕೆ ಬಂದು ನನ್ನ ನಿಮಿತ್ತವಾಗಿ ಪಟ್ಟಣವನ್ನು ಹಾಳು ಮಾಡಬೇಕೆಂದಿದ್ದಾನೆಂದು ನಿನ್ನ ಸೇವಕನಾದ ನನಗೆ ಸುದ್ದಿ ಬಂದಿತು.
Kannada BSI Bible 2016
ದಾವೀದನುಓ ಇಸ್ರಾಯೇಲ್ ದೇವರಾದ ಕರ್ತನೇ, ಸೌಲನು ಕೆಯಾಲಾಕ್ಕೆ ಬಂದು ನನ್ನ ನಿಮಿತ್ತ ಪಟ್ಟಣವನ್ನು ಕೆಡಿಸಲು ಹುಡುಕುತ್ತಿದ್ದಾನೆಂದು ನಿನ್ನ ಸೇವಕನು ಖಂಡಿತವಾಗಿ ಕೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್‍ದೇವರಾದ ಯೆಹೋವನೇ, ಸೌಲನು ಕೆಯೀಲಕ್ಕೆ ಬಂದು ನನ್ನ ನಿವಿುತ್ತವಾಗಿ ಪಟ್ಟಣವನ್ನು ಹಾಳುಮಾಡಬೇಕೆಂದಿದ್ದಾನೆಂದು ನಿನ್ನ ಸೇವಕನಾದ ನನಗೆ ಸುದ್ದಿ ಬಂದಿತು.
Kannada Bible (KNCL) BSI 2016
“ಇಸ್ರಯೇಲ್ ದೇವರಾದ ಸರ್ವೇಶ್ವರಾ, ಸೌಲನು ಕೆಯೀಲಾಕ್ಕೆ ಬಂದು ನನ್ನ ನಿಮಿತ್ತ ಪಟ್ಟಣವನ್ನು ಹಾಳುಮಾಡಬೇಕೆಂದಿದ್ದಾನೆ ಎಂದು ನಿಮ್ಮ ದಾಸನಾದ ನನಗೆ ಸುದ್ದಿಬಂದಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ದಾವೀದನು, “ಇಸ್ರಾಯೇಲ್ ದೇವರಾದ ಯೆಹೋವ ದೇವರೇ, ಸೌಲನು ಕೆಯೀಲಾ ನಗರಕ್ಕೆ ಬಂದು, ನನ್ನ ನಿಮಿತ್ತ ಪಟ್ಟಣವನ್ನು ಕೆಡಿಸಲು ಹುಡುಕುತ್ತಿದ್ದಾನೆಂದು ನಿಮ್ಮ ಸೇವಕನು ಖಂಡಿತವಾಗಿ ಕೇಳಿದನು.