1 Samuel 23:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸೌಲನು ಕೆಯೀಲಾಕ್ಕೆ ಬರುತ್ತಾನೆಯೇ? ಕೆಯೀಲಾದ ಜನರು ನನ್ನನ್ನು ಸೌಲನಿಗೆ ಒಪ್ಪಿಸುತ್ತಾರೆಯೇ? ಇಸ್ರೇಲರ ದೇವರಾದ ಯೆಹೋವನೇ, ನಾನು ನಿನ್ನ ಸೇವಕ! ದಯವಿಟ್ಟು ನನಗೆ ತಿಳಿಸು!” ಎಂದು ಪ್ರಾರ್ಥಿಸಿದನು. ಯೆಹೋವನು, “ಸೌಲನು ಬರುತ್ತಾನೆ” ಎಂದು ಉತ್ತರಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಕೇಳಿದ ಸುದ್ದಿಯಂತೆ ಅವನು ನಿಜವಾಗಿ ಬರುವನೋ ಕೆಯೀಲಾ ಊರಿನವರು ನನ್ನನ್ನು ಅವನ ಕೈಗೆ ಒಪ್ಪಿಸುವರೋ? ಇಸ್ರಾಯೇಲರ ದೇವರಾದ ಯೆಹೋವನೇ ಈ ವಿಷಯದಲ್ಲಿ ಉತ್ತರ ದಯಪಾಲಿಸು” ಎಂದು ಪ್ರಾರ್ಥಿಸಲು ಅವನು ಬರುವನೆಂಬುದಾಗಿ ಯೆಹೋವನಿಂದ ಉತ್ತರ ಸಿಕ್ಕಿತು.
Kannada BSI Bible 2016
ಕೆಯಾಲಾ ಪಟ್ಟಣದವರು ನನ್ನನ್ನು ಅವನ ಕೈಯಲ್ಲಿ ಒಪ್ಪಿಸಿಕೊಡುವರೋ? ನಿನ್ನ ಸೇವಕನು ಕೇಳಿದ ಹಾಗೆ ಸೌಲನು ಇಲ್ಲಿಗೆ ಬರುವನೋ? ಇಸ್ರಾಯೇಲಿನ ದೇವರಾದ ಕರ್ತನೇ, ದಯ ಮಾಡಿ ಇದನ್ನು ನಿನ್ನ ಸೇವಕನಿಗೆ ತಿಳಿಸು ಅಂದನು. ಅದಕ್ಕೆ ಕರ್ತನು--ಅವನು ಬರುವನು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಕೇಳಿದ ಸುದ್ದಿಯಂತೆ ಅವನು ನಿಜವಾಗಿ ಬರುವನೋ? ಕೆಯೀಲಾ ಊರಿನವರು ನನ್ನನ್ನು ಅವನ ಕೈಗೆ ಒಪ್ಪಿಸುವರೋ? ಇಸ್ರಾಯೇಲ್‍ದೇವರಾದ ಯೆಹೋವನೇ, ಈ ವಿಷಯದಲ್ಲಿ ಉತ್ತರ ದಯಪಾಲಿಸು ಎಂದು ಪ್ರಾರ್ಥಿಸಲು ಅವನು ಬರುವನೆಂಬದಾಗಿ ಯೆಹೋವನಿಂದ ಉತ್ತರಸಿಕ್ಕಿತು.
Kannada Bible (KNCL) BSI 2016
ನಾನು ಕೇಳಿದ ಸುದ್ದಿಯಂತೆ ಅವನು ನಿಜವಾಗಿ ಬರುವನೇ? ಕೆಯೀಲಾ ಪುರಜನರು ನನ್ನನ್ನು ಅವನ ಕೈಗೆ ಒಪ್ಪಿಸುವರೇ? ಇಸ್ರಯೇಲ ದೇವರಾದ ಸರ್ವೇಶ್ವರಾ, ಈ ವಿಷಯದಲ್ಲಿ ಉತ್ತರ ದಯಪಾಲಿಸಿ,” ಎಂದು ಪ್ರಾರ್ಥಿಸಿದನು. ಸೌಲನು ಬರುವನೆಂಬುದಾಗಿ ಸರ್ವೇಶ್ವರನಿಂದ ಉತ್ತರ ಸಿಕ್ಕಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕೆಯೀಲಾ ಪಟ್ಟಣದವರು ನನ್ನನ್ನು ಅವನ ಕೈಯಲ್ಲಿ ಒಪ್ಪಿಸಿಕೊಡುವರೋ? ನಿಮ್ಮ ಸೇವಕನು ಕೇಳಿದ ಹಾಗೆ ಸೌಲನು ಇಲ್ಲಿಗೆ ಬರುವನೋ? ಇಸ್ರಾಯೇಲಿನ ದೇವರಾದ ಯೆಹೋವ ದೇವರೇ, ದಯಮಾಡಿ ಇದನ್ನು ನಿಮ್ಮ ಸೇವಕನಿಗೆ ತಿಳಿಸಿರಿ,” ಎಂದನು. ಅದಕ್ಕೆ ಯೆಹೋವ ದೇವರು, “ಅವನು ಬರುವನು,” ಎಂದರು.