1 Samuel 23:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದ್ದರಿಂದ ದಾವೀದನು ಮತ್ತು ಅವನ ಜನರು ಕೆಯೀಲಾವನ್ನು ಬಿಟ್ಟುಹೋದರು. ದಾವೀದನ ಜೊತೆಯಲ್ಲಿ ಸುಮಾರು ಆರುನೂರು ಜನರಿದ್ದರು. ದಾವೀದನು ಮತ್ತು ಅವನ ಜನರು ಸ್ಥಳದಿಂದ ಸ್ಥಳಕ್ಕೆ ಹೋಗುತ್ತಿದ್ದರು. ದಾವೀದನು ಕೆಯೀಲಾದಿಂದ ತಪ್ಪಿಸಿಕೊಂಡು ಹೋದನೆಂಬುದು ಸೌಲನಿಗೆ ತಿಳಿಯಿತು. ಆದ್ದರಿಂದ ಸೌಲನು ಆ ನಗರಕ್ಕೆ ಹೋಗಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ದಾವೀದನು ತನ್ನ ಸಂಗಡ ಇದ್ದ ಆರುನೂರು ಜನರ ಸಹಿತವಾಗಿ ಕೆಯೀಲಾ ಊರನ್ನು ಬಿಟ್ಟು ಮನಬಂದ ಕಡೆಗೆ ಅಲೆದಾಡಿದರು. ದಾವೀದನು ಕೆಯೀಲದಿಂದ ತಪ್ಪಿಸಿಕೊಂಡನೆಂದು ಸೌಲನಿಗೆ ಗೊತ್ತಾಗಲು ಅವನು ಹೊರಡುವುದನ್ನು ನಿಲ್ಲಿಸಿಬಿಟ್ಟನು.
Kannada BSI Bible 2016
ಆದದರಿಂದ ದಾವೀದನು ಹೆಚ್ಚು ಕಡಿಮೆ ಆರು ನೂರು ಮಂದಿಯಾದ ತನ್ನ ಜನರು ಎದ್ದು ಕೆಯಾಲಾವನ್ನು ಬಿಟ್ಟು ಹೊರಟು ತಾವು ಹೋಗಬೇಕಾದಲ್ಲಿಗೆ ಹೋದರು. ದಾವೀದನು ಕೆಯಾಲಾದಿಂದ ತಪ್ಪಿಸಿಕೊಂಡು ಹೋದನೆಂದು ಸೌಲನಿಗೆ ತಿಳಿಸಲ್ಪಟ್ಟಾಗ ಅವನು ಹೊರಡುವದನ್ನು ನಿಲ್ಲಿಸಿಬಿಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ದಾವೀದನು ತನ್ನ ಸಂಗಡ ಇದ್ದ ಆರುನೂರು ಜನರ ಸಹಿತವಾಗಿ ಕೆಯೀಲಾ ಊರನ್ನು ಬಿಟ್ಟು ಎಲ್ಲೆಲ್ಲಿಯೋ ಅಲೆದಾಡಿದನು. ದಾವೀದನು ಕೆಯೀಲದಿಂದ ತಪ್ಪಿಸಿಕೊಂಡನೆಂದು ಸೌಲನಿಗೆ ಗೊತ್ತಾಗಲು ಅವನು ಹೊರಡುವದನ್ನು ನಿಲ್ಲಿಸಿಬಿಟ್ಟನು.
Kannada Bible (KNCL) BSI 2016
ಆಗ ದಾವೀದನು ತನ್ನ ಸಂಗಡ ಇದ್ದ ಆರುನೂರು ಜನರ ಸಹಿತವಾಗಿ ಕೆಯೀಲಾ ಊರನ್ನು ಬಿಟ್ಟು ಎಲ್ಲೆಲ್ಲಿಯೋ ಅಲೆದಾಡಿದನು. ದಾವೀದನು ಕೆಯೀಲಾದಿಂದ ತಪ್ಪಿಸಿಕೊಂಡನು ಎಂದು ಸೌಲನಿಗೆ ಗೊತ್ತಾಗಲು ಅವನು ಪ್ರಯಾಣವನ್ನು ನಿಲ್ಲಿಸಿಬಿಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ದಾವೀದನೂ, ಹೆಚ್ಚು ಕಡಿಮೆ ಆರುನೂರು ಮಂದಿಯಿದ್ದ ತನ್ನ ಜನರೂ ಎದ್ದು ಕೆಯೀಲಾವನ್ನು ಬಿಟ್ಟು ವಿವಿಧ ಕಡೆಗಳಲ್ಲಿ ಅಲೆದಾಡಿದರು. ದಾವೀದನು ಕೆಯೀಲಾದಿಂದ ತಪ್ಪಿಸಿಕೊಂಡು ಹೋದನೆಂದು ಸೌಲನಿಗೆ ಗೊತ್ತಾಗಲು ಅವನು ಪ್ರಯಾಣವನ್ನು ನಿಲ್ಲಿಸಿಬಿಟ್ಟನು.