1 Samuel 23:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದಾವೀದನು ಜೀಫ್ ಅರಣ್ಯದಲ್ಲಿರುವ ಬೆಟ್ಟಪ್ರದೇಶವಾದ ಆಶ್ರಯಗಿರಿಗಳಲ್ಲಿ ಅಡಗಿಕೊಂಡಿದ್ದನು. ಸೌಲನು ಪ್ರತಿದಿನವೂ ದಾವೀದನಿಗಾಗಿ ಹುಡುಕುತ್ತಿದ್ದನು, ಆದರೆ ದಾವೀದನನ್ನು ಹಿಡಿಯಲು ಯೆಹೋವನು ಸೌಲನಿಗೆ ಅವಕಾಶ ಕೊಡಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅನಂತರ ದಾವೀದನು ಅರಣ್ಯದಲ್ಲಿರುವ ಆಯಾ ಆಶ್ರಯಗಿರಿಗಳಲ್ಲಿ ಇರುತ್ತಿದ್ದನು. ಅನಂತರ ಜೀಫ್ ಅರಣ್ಯದ ಪರ್ವತಪ್ರಾಂತ್ಯಕ್ಕೆ ಬಂದು ಅಲ್ಲಿ ವಾಸಮಾಡಿದನು. ಸೌಲನು ಪ್ರತಿದಿನ ಅವನನ್ನು ಹುಡುಕುತ್ತಿದ್ದರೂ ದೇವರು ಅವನನ್ನು ಸೌಲನ ಕೈಗೆ ಒಪ್ಪಿಸಲಿಲ್ಲ.
Kannada BSI Bible 2016
ದಾವೀದನು ಅರಣ್ಯದಲ್ಲಿರುವ ಬಲವಾದ ಕೋಟೆಗಳಲ್ಲಿಯೂ ಜೀಫ್ ಎಂಬ ಅರಣ್ಯದ ಬೆಟ್ಟದ ಲ್ಲಿಯೂ ವಾಸವಾಗಿದ್ದನು. ಸೌಲನು ದಿನಾಲು ಅವ ನನ್ನು ಹುಡುಕುತ್ತಿದ್ದನು; ಆದರೆ ದೇವರು ಅವನನ್ನು ಅವನ ಕೈಯಲ್ಲಿ ಒಪ್ಪಿಸಿಕೊಡಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅನಂತರ ದಾವೀದನು ಅರಣ್ಯದಲ್ಲಿರುವ ಆಯಾ ಆಶ್ರಯಗಿರಿಗಳಲ್ಲಿ ಇರುತ್ತಿದ್ದು ಕಡೆಗೆ ಜೀಫ್ ಅರಣ್ಯದ ಪರ್ವತ ಪ್ರಾಂತಕ್ಕೆ ಬಂದು ಅಲ್ಲಿ ವಾಸಮಾಡಿದನು. ಸೌಲನು ದಿನಂಪ್ರತಿಯೂ ಅವನನ್ನು ಹುಡುಕುತ್ತಿದ್ದರೂ ದೇವರು ಇವನ ಕೈಗೆ ಒಪ್ಪಿಸಲಿಲ್ಲ.
Kannada Bible (KNCL) BSI 2016
ಅನಂತರ ದಾವೀದನು ಮರುಭೂಮಿಯಲ್ಲಿರುವ ಆಯಾ ಆಶ್ರಯಗಿರಿಗಳಲ್ಲಿ ಇರುತ್ತಿದ್ದನು. ಕಡೆಗೆ ಜೀಫ್ ಮರುಭೂಮಿಯ ಪರ್ವತಪ್ರಾಂತ್ಯಕ್ಕೆ ಬಂದು ಅಲ್ಲಿ ವಾಸಮಾಡಿದನು. ದಿನಂಪ್ರತಿ ಹುಡುಕುತ್ತಿದ್ದರೂ ದೇವರು ಆತನನ್ನು ಸೌಲನ ಕೈಗೆ ಒಪ್ಪಿಸಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದಾವೀದನು ಅರಣ್ಯದಲ್ಲಿರುವ ಬಲವಾದ ಕೋಟೆಗಳಲ್ಲಿಯೂ, ಜೀಫ್ ಎಂಬ ಮರುಭೂಮಿಯ ಬೆಟ್ಟದಲ್ಲಿಯೂ ವಾಸವಾಗಿದ್ದನು. ಸೌಲನು ದಿನವೂ ಅವನನ್ನು ಹುಡುಕುತ್ತಿದ್ದನು. ಆದರೆ ದೇವರು ದಾವೀದನನ್ನು ಸೌಲನ ಕೈಯಲ್ಲಿ ಒಪ್ಪಿಸಿಕೊಡಲಿಲ್ಲ.