1 Samuel 23:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹೋಗಿ, ಅವನ ಬಗ್ಗೆ ಹೆಚ್ಚು ತಿಳಿದುಕೊಳ್ಳಿ. ದಾವೀದನು ಎಲ್ಲಿ ನೆಲೆಸಿದ್ದಾನೆಂಬುದನ್ನೂ ಅವನನ್ನು ನೋಡಿದವರು ಯಾರೆಂಬುದನ್ನೂ ಕಂಡುಹಿಡಿಯಿರಿ. ಅವನು ಬಹಳ ಯುಕ್ತಿವಂತನಾಗಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ದಯವಿಟ್ಟು ಹೋಗಿ ಅವನು ಅಡಗಿಕೊಂಡಿರುವ ಸ್ಥಳವನ್ನು, ಅಲ್ಲಿ ಅವನನ್ನು ಕಂಡವರನ್ನೂ ಸೂಕ್ಷ್ಮವಾಗಿ ವಿಚಾರಿಸಿ, ತಿಳಿದುಕೊಳ್ಳಿರಿ. ಅವನು ಬಹು ಯುಕ್ತಿವಂತನೆಂದು ಕೇಳಿದ್ದೇನೆ.
Kannada BSI Bible 2016
ನೀವು ದಯಮಾಡಿ ಹೋಗಿ ಅವನ ಹೆಜ್ಜೆ ಇಡುವ ಸ್ಥಳವನ್ನೂ ಅಲ್ಲಿ ಅವನನ್ನು ನೋಡಿದವರು ಯಾರು ಎಂಬದನ್ನೂ ಇನ್ನೂ ಸೂಕ್ಷ್ಮವಾಗಿ ತಿಳುಕೊಂಡು ನೋಡಿರಿ;
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ದಯವಿಟ್ಟು ಹೋಗಿ ಅವನು ತಿರುಗಾಡುವ ಸ್ಥಳವನ್ನೂ ಅಲ್ಲಿ ಅವನ ಗುರುತು ಕಂಡಿರುವವರನ್ನೂ ಸೂಕ್ಷ್ಮವಾಗಿ ವಿಚಾರಿಸಿ ಗೊತ್ತುಮಾಡಿಕೊಳ್ಳಿರಿ. ಅವನು ಬಹುಯುಕ್ತಿವಂತನೆಂದು ಕೇಳಿದ್ದೇನೆ.
Kannada Bible (KNCL) BSI 2016
ನೀವು ದಯವಿಟ್ಟು ಹೋಗಿ ಅವನು ತಿರುಗಾಡುವ ಸ್ಥಳವನ್ನೂ ಅಲ್ಲಿ ಅವನ ಗುರುತು ಕಂಡಿರುವವರನ್ನೂ ಸೂಕ್ಷ್ಮವಾಗಿ ವಿಚಾರಿಸಿ ಗೊತ್ತುಮಾಡಿಕೊಳ್ಳಿ. ಅವನು ಬಹಳ ಯುಕ್ತಿವಂತನೆಂದು ಕೇಳಿದ್ದೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ದಯಮಾಡಿ ಹೋಗಿ ಅವನು ಹೆಜ್ಜೆ ಇಡುವ ಸ್ಥಳವನ್ನೂ, ಅಲ್ಲಿ ಅವನನ್ನು ನೋಡಿದವರು ಯಾರು ಎಂಬುದನ್ನೂ ಇನ್ನೂ ಸೂಕ್ಷ್ಮವಾಗಿ ತಿಳಿದುಕೊಂಡು ನೋಡಿರಿ. ಏಕೆಂದರೆ ಅವನು ಬಹು ಉಪಾಯದಿಂದ ಪ್ರವರ್ತಿಸುತ್ತಾನೆಂದು ನನಗೆ ಹೇಳುತ್ತಾರೆ.