1 Samuel 23:27 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಸೌಲನ ಬಳಿಗೆ ಒಬ್ಬ ಸಂದೇಶಕನು ಬಂದು, “ಫಿಲಿಷ್ಟಿಯರು ನಮ್ಮನ್ನು ಆಕ್ರಮಣ ಮಾಡುತ್ತಿದ್ದಾರೆ, ಬೇಗ ಬಾ!” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗಲೇ ಒಬ್ಬ ದೂತನು ಸೌಲನ ಬಳಿಗೆ ಬಂದು ಅವನಿಗೆ, “ಬೇಗ ಬಾ, ಫಿಲಿಷ್ಟಿಯರು ದೇಶದೊಳಗೆ ನುಗ್ಗಿದ್ದಾರೆ” ಎಂದು ತಿಳಿಸಿದನು.
Kannada BSI Bible 2016
ಆದರೆ ಒಬ್ಬ ದೂತನು ಸೌಲನ ಬಳಿಗೆ ಬಂದು--ನೀನು ತ್ವರೆಯಾಗಿ ಬಾ; ಯಾಕಂದರೆ ಫಿಲಿಷ್ಟಿಯರು ದೇಶದ ಮೇಲೆ ದಂಡೆತ್ತಿ ಬಂದಿದ್ದಾರೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗಲೇ ಒಬ್ಬ ದೂತನು ಸೌಲನ ಬಳಿಗೆ ಬಂದು ಅವನಿಗೆ - ಬೇಗ ಬಾ; ಫಿಲಿಷ್ಟಿಯರು ದೇಶದೊಳಕ್ಕೆ ನುಗ್ಗಿದ್ದಾರೆ ಎಂದು ತಿಳಿಸಿದ್ದರಿಂದ
Kannada Bible (KNCL) BSI 2016
ಅದೇ ವೇಳೆಗೆ ದೂತನೊಬ್ಬನು ಸೌಲನ ಬಳಿಗೆ ಬಂದು, “ಬೇಗ ಬನ್ನಿ, ಫಿಲಿಷ್ಟಿಯರು ನಾಡಿನೊಳಕ್ಕೆ ನುಗ್ಗಿದ್ದಾರೆ,” ಎಂದು ತಿಳಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಒಬ್ಬ ಸೇವಕನು ಸೌಲನ ಬಳಿಗೆ ಬಂದು, “ನೀನು ತ್ವರೆಯಾಗಿ ಬಾ. ಫಿಲಿಷ್ಟಿಯರು ದೇಶದ ಮೇಲೆ ದಂಡೆತ್ತಿ ಬಂದಿದ್ದಾರೆ,” ಎಂದನು.