1 Samuel 23:28 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ದಾವೀದನನ್ನು ಅಟ್ಟಿಸಿಕೊಂಡು ಹೋಗುವುದನ್ನು ಸೌಲನು ನಿಲ್ಲಿಸಿ ಫಿಲಿಷ್ಟಿಯರೊಡನೆ ಹೋರಾಡಲು ಹೋದನು. ಆದ್ದರಿಂದಲೇ ಜನರು ಆ ಜಾಗವನ್ನು “ಜಾರುಬಂಡೆ” ಎಂದು ಕರೆಯುತ್ತಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ದಾವೀದನನ್ನು ಹಿಡಿಯುವ ಕೆಲಸವನ್ನು ಬಿಟ್ಟು ಫಿಲಿಷ್ಟಿಯರ ವಿರುದ್ಧ ಯುದ್ಧಮಾಡಲು ಹೊರಟನು. ಆದುದರಿಂದ ಆ ಬೆಟ್ಟಕ್ಕೆ “ಮಕ್ಹೆಲೋಕೆತ್” ಎಂದರೆ “ಪಾರಾದ ಬಂಡೆ” ಎಂದು ಹೆಸರಾಯಿತು.
Kannada BSI Bible 2016
ಸೌಲನು ದಾವೀದನನ್ನು ಹಿಂದಟ್ಟುವದನ್ನು ಬಿಟ್ಟು ಫಿಲಿಷ್ಟಿಯ ರಿಗೆ ಎದುರಾಗಿ ಹೋದನು. ಆದಕಾರಣ ಆ ಸ್ಥಳಕ್ಕೆ ಶಿಲಾಹಮಹ್ಲೆಕೋತ್ ಎಂದು ಹೆಸರಿಟ್ಟರು.ದಾವೀದನು ಆ ಸ್ಥಳವನ್ನು ಬಿಟ್ಟುಹೋಗಿ ಏಂಗೆದಿ ಯಲ್ಲಿರುವ ಬಲವಾದ ಗವಿಗಳಲ್ಲಿ ವಾಸಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ದಾವೀದನನ್ನು ಹಿಡಿಯುವ ಕೆಲಸದಿಂದ ಹಿಂದಿರುಗಿ ಫಿಲಿಷ್ಟಿಯರಿಗೆ ವಿರೋಧವಾಗಿ ಹೊರಟನು. ಆದದರಿಂದ ಆ ಬೆಟ್ಟಕ್ಕೆ ತಡೆಬೆಟ್ಟ ಎಂದು ಹೆಸರಾಯಿತು.
Kannada Bible (KNCL) BSI 2016
ಆದ್ದರಿಂದ ಅವನು ದಾವೀದನನ್ನು ಹಿಡಿಯುವ ಕೆಲಸವನ್ನು ಬಿಟ್ಟು ಫಿಲಿಷ್ಟಿಯರಿಗೆ ವಿರುದ್ಧ ಯುದ್ಧಕ್ಕೆ ಹೊರಟನು. ಈ ಕಾರಣ ಆ ಬೆಟ್ಟಕ್ಕೆ’ಅಡ್ಡಬೆಟ್ಟ’ ಎಂದು ಹೆಸರಾಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ಸೌಲನು ದಾವೀದನನ್ನು ಹಿಂದಟ್ಟುವುದನ್ನು ಬಿಟ್ಟು, ಫಿಲಿಷ್ಟಿಯರಿಗೆ ಎದುರಾಗಿ ಹೋದನು. ಆದಕಾರಣ ಆ ಸ್ಥಳಕ್ಕೆ ಸೇಲಾ ಅಮ್ಮಾಲೆಕೋತ್ ಎಂದರೆ, ಅಡ್ಡ ಬೆಟ್ಟ ಎಂದು ಹೆಸರಿಟ್ಟರು.