1 Samuel 23:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ದಾವೀದನ ಜನರು ಅವನಿಗೆ, “ನೋಡು, ನಾವು ಯೆಹೂದದಲ್ಲಿದ್ದರೂ ಹೆದರಿರುವೆವು. ಫಿಲಿಷ್ಟಿಯರ ಸೈನ್ಯವೆಲ್ಲಿದೆಯೊ ಅಲ್ಲಿಗೆ ನಾವು ಹೋದರೆ, ಇನ್ನೆಷ್ಟು ಹೆದರುತ್ತೇವೆ ಎಂಬುದನ್ನು ಯೋಚಿಸು” ಎಂದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ದಾವೀದನ ಸೈನಿಕರು ಅವನಿಗೆ, “ನಮಗೆ ಯೆಹೂದ ಸೀಮೆಯಲ್ಲಿಯೇ ಇಷ್ಟು ಭಯವಿರುವಾಗ ಫಿಲಿಷ್ಟಿಯ ಸೈನ್ಯದೊಡನೆ ಯುದ್ಧಮಾಡುವುದಕ್ಕೆ ಕೆಯೀಲಕ್ಕೆ ಹೋದರೆ ಅಲ್ಲಿ ಇನ್ನೂ ಹೆಚ್ಚು ಭಯ ಉಂಟಾಗುತ್ತದೆ” ಅಂದರು.
Kannada BSI Bible 2016
ಆಗ ದಾವೀದನ ಮನುಷ್ಯರು ಅವನಿಗೆಇಗೋ, ನಾವು ಇಲ್ಲಿ ಯೆಹೂದದಲ್ಲಿರುವಾಗಲೇ ಭಯಪಡುತ್ತೇವೆ; ಆದರೆ ನಾವು ಫಿಲಿಷ್ಟಿಯರ ಸೈನ್ಯ ಗಳಿಗೆ ವಿರೋಧವಾಗಿ ಕೆಯಾಲಾಕ್ಕೆ ಹೋದರೆ ಎಷ್ಟು ಅಧಿಕವಾದ ಭಯವಾಗುವದು ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ದಾವೀದನ ಸೈನಿಕರು ಅವನಿಗೆ - ನಮಗೆ ಯೆಹೂದ ಸೀಮೆಯಲ್ಲಿಯೇ ಇಷ್ಟು ಭಯವಿರುವಲ್ಲಿ ಫಿಲಿಷ್ಟಿಯ ಸೈನ್ಯದೊಡನೆ ಯುದ್ಧಮಾಡುವದಕ್ಕಾಗಿ ಕೆಯೀಲಕ್ಕೆ ಹೋದರೆ ಅಲ್ಲಿ ಎಷ್ಟೋ ಅಧಿಕವಾದ ಭಯವುಂಟಾಗುವದಲ್ಲವೇ ಅಂದರು.
Kannada Bible (KNCL) BSI 2016
ಆದರೆ ದಾವೀದನ ಸೈನಿಕರು ಅವನಿಗೆ, “ನಮಗೆ ಯೆಹೂದ ನಾಡಿನಲ್ಲಿಯೇ ಇಷ್ಟು ಆಪತ್ತುಗಳು ಇರುವಲ್ಲಿ ಫಿಲಿಷ್ಟಿಯ ಸೈನ್ಯದೊಡನೆ ಯುದ್ಧಮಾಡುವುದಕ್ಕಾಗಿ ಕೆಯೀಲಾಕ್ಕೆ ಹೋದರೆ ಅಲ್ಲಿ ಎಷ್ಟೋ ಅಧಿಕವಾದ ಗಂಡಾಂತರಗಳು ಕಾದಿರಬಹುದಲ್ಲವೆ?” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ದಾವೀದನ ಜನರು ಅವನಿಗೆ, “ಇಗೋ, ನಾವು ಇಲ್ಲಿ ಯೆಹೂದದಲ್ಲಿರುವಾಗಲೇ ಭಯಪಡುತ್ತೇವೆ. ಆದರೆ ನಾವು ಫಿಲಿಷ್ಟಿಯರ ಸೈನ್ಯಗಳಿಗೆ ವಿರೋಧವಾಗಿ ಕೆಯೀಲಾ ನಗರಕ್ಕೆ ಹೋದರೆ ಎಷ್ಟು ಅಧಿಕವಾದ ಭಯವಾಗುವುದು,” ಎಂದರು.