1 Samuel 23:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹೀಗೆ ದಾವೀದನು ಮತ್ತು ಅವನ ಜನರು ಕೆಯೀಲಾಕ್ಕೆ ಹೋದರು. ದಾವೀದನ ಜನರು ಫಿಲಿಷ್ಟಿಯರೊಡನೆ ಹೋರಾಡಿ ಅವರನ್ನು ಸೋಲಿಸಿ ಅವರ ಹಸುಗಳನ್ನು ವಶಪಡಿಸಿಕೊಂಡರು. ದಾವೀದನು ಈ ರೀತಿಯಲ್ಲಿ ಕೆಯೀಲಾದ ಜನರನ್ನು ರಕ್ಷಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ದಾವೀದನು ತನ್ನ ಜನರೊಡನೆ ಕೆಯೀಲಕ್ಕೆ ಹೋಗಿ, ಫಿಲಿಷ್ಟಿಯರೊಡನೆ ಯುದ್ಧಮಾಡಿ, ಅವರನ್ನು ಸಂಪೂರ್ಣವಾಗಿ ಸೋಲಿಸಿ, ಅವರ ಪಶುಗಳನ್ನು ತೆಗೆದುಕೊಂಡು ಕೆಯೀಲದವರನ್ನು ರಕ್ಷಿಸಿದನು.
Kannada BSI Bible 2016
ಹಾಗೆಯೇ ದಾವೀದನೂ ತನ್ನ ಮನುಷ್ಯರೂ ಕೆಯಾಲಾಕ್ಕೆ ಹೋಗಿ ಫಿಲಿಷ್ಟಿಯರ ಸಂಗಡ ಯುದ್ಧಮಾಡಿ ಅವರ ದನಗಳನ್ನು ಹಿಡುಕೊಂಡು ಬಂದು ಅವರನ್ನು ಪೂರ್ಣವಾಗಿ ಸಂಹರಿಸಿದನು. ಈ ಪ್ರಕಾರ ದಾವೀದನು ಕೆಯಾಲಾದ ನಿವಾಸಿಗಳನ್ನು ರಕ್ಷಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ದಾವೀದನು ತನ್ನ ಜನರೊಡನೆ ಕೆಯೀಲಕ್ಕೆ ಹೋಗಿ ಫಿಲಿಷ್ಟಿಯರೊಡನೆ ಯುದ್ಧಮಾಡಿ ಅವರನ್ನು ಪೂರ್ಣವಾಗಿ ಸೋಲಿಸಿ ಅವರ ಪಶುಗಳನ್ನು ತೆಗೆದುಕೊಂಡು ಕೆಯೀಲದವರನ್ನು ರಕ್ಷಿಸಿದನು.
Kannada Bible (KNCL) BSI 2016
ಆಗ ದಾವೀದನು ತನ್ನ ಜನರೊಡನೆ ಕೆಯೀಲಾಕ್ಕೆ ಹೋಗಿ ಫಿಲಿಷ್ಟಿಯರೊಡನೆ ಯುದ್ಧಮಾಡಿದನು. ಅವರನ್ನು ಪೂರ್ಣವಾಗಿ ಸೋಲಿಸಿ, ಅವರ ಪಶುಗಳನ್ನು ತೆಗೆದುಕೊಂಡು ಕೆಯೀಲಾದವರನ್ನು ಕಾಪಾಡಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹಾಗೆಯೇ ದಾವೀದನೂ, ಅವನ ಜನರೂ ಎದ್ದು ಕೆಯೀಲಾ ನಗರಕ್ಕೆ ಹೋಗಿ, ಫಿಲಿಷ್ಟಿಯರ ಸಂಗಡ ಯುದ್ಧಮಾಡಿ, ಅವರ ಪಶುಗಳನ್ನು ಹಿಡಿದುಕೊಂಡು ಬಂದು, ಅವರನ್ನು ಪೂರ್ಣವಾಗಿ ಸೋಲಿಸಿದರು. ಈ ಪ್ರಕಾರ ದಾವೀದನು ಕೆಯೀಲಾ ನಗರದ ನಿವಾಸಿಗಳನ್ನು ರಕ್ಷಿಸಿದನು.