1 Samuel 23:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದಾವೀದನು ಈಗ ಕೆಯೀಲಾದಲ್ಲಿದ್ದಾನೆಂದು ಜನರು ಸೌಲನಿಗೆ ತಿಳಿಸಿದರು. ಸೌಲನು, “ದೇವರು ದಾವೀದನನ್ನು ನನಗೆ ಕೊಟ್ಟಿದ್ದಾನೆ! ದಾವೀದನು ತಾನಾಗಿಯೇ ಸಿಕ್ಕಿಹಾಕಿಕೊಂಡಿದ್ದಾನೆ. ಅವನು, ಬಾಗಿಲುಗಳಿರುವ ಹಾಗೂ ಕಬ್ಬಿಣದ ಸಲಾಕೆಗಳಿಂದ ಬೀಗ ಹಾಕಬಲ್ಲ ಬಾಗಿಲುಗಳಿರುವ ಪಟ್ಟಣದೊಳಕ್ಕೆ ಹೋಗಿದ್ದಾನೆ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದಾವೀದನು ಕೆಯೀಲದಲ್ಲಿದ್ದಾನೆಂಬ ವರ್ತಮಾನವು ಸೌಲನಿಗೆ ಮುಟ್ಟಿತು. ಆಗ ಅವನು, ದೇವರು ದಾವೀದನನ್ನು ನನ್ನ ಕೈಗೆ ಒಪ್ಪಿಸಿದನು. ಅವನು ಅಗುಳಿ ಬಾಗಿಲುಗಳಿಂದ ಭದ್ರವಾಗಿರುವ ಪಟ್ಟಣವನ್ನು ಪ್ರವೇಶಿಸಿದ್ದಾನಲ್ಲಾ ಅವನು ಅಲ್ಲಿಂದ ತಪ್ಪಿಸಿಕೊಳ್ಳಲಾರನು ಅಂದುಕೊಂಡು,
Kannada BSI Bible 2016
ದಾವೀದನು ಕೆಯಾಲಾಕ್ಕೆ ಬಂದಿದ್ದಾನೆಂದು ಸೌಲನಿಗೆ ತಿಳಿಸಲ್ಪಟ್ಟಾಗ ಸೌಲನು--ದೇವರು ಅವನನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಟ್ಟನು, ಯಾಕಂದರೆ ಅವನು ಬಾಗಲುಗಳೂ ಅಗುಳಿಗಳೂ ಇರುವ ಪಟ್ಟಣದ ಒಳಗೆ ಪ್ರವೇಶಿಸಿದ್ದರಿಂದ ಮುಚ್ಚಲ್ಪಟ್ಟಿ ದ್ದಾನೆ ಅಂದುಕೊಂಡನು.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವರು ದಾವೀದನನ್ನು ನನ್ನ ಕೈಗೆ ಒಪ್ಪಿಸಿದನು. ಅವನು ಅಗುಳಿಕದಗಳಿಂದ ಭದ್ರವಾಗಿರುವ ಪಟ್ಟಣವನ್ನು ಪ್ರವೇಶಿಸಿದ್ದಾನಲ್ಲಾ; ಅವನು ಅಲ್ಲಿಂದ ತಪ್ಪಿಸಿಕೊಳ್ಳಲಾರನು ಅಂದುಕೊಂಡು
Kannada Bible (KNCL) BSI 2016
ದಾವೀದನು ಕೆಯೀಲಾದಲ್ಲಿದ್ದಾನೆಂಬ ಸಮಾಚಾರ ಸೌಲನಿಗೆ ಮುಟ್ಟಿತು. ಆಗ ಅವನು, “ದೇವರು ದಾವೀದನನ್ನು ನನ್ನ ಕೈಗೆ ಒಪ್ಪಿಸಿದ್ದಾರೆ. ಅವನು ಅಗುಳಿಕದಗಳಿಂದ ಭದ್ರವಾಗಿರುವ ಕೋಟೆಯನ್ನು ಪ್ರವೇಶಿಸಿದ್ದಾನಲ್ಲವೆ? ಅವನು ಅಲ್ಲಿಂದ ತಪ್ಪಿಸಿಕೊಳ್ಳಲಾರನು,” ಎಂದುಕೊಂಡನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದಾವೀದನು ಕೆಯೀಲಾ ನಗರಕ್ಕೆ ಬಂದಿದ್ದಾನೆ ಎಂಬ ವಿಷಯ ಸೌಲನಿಗೆ ಮುಟ್ಟಿತು. ಆಗ ಅವನು, “ದೇವರು ಅವನನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಟ್ಟರು. ಏಕೆಂದರೆ ಅವನು ಬಾಗಿಲುಗಳೂ, ಅಗುಳಿಗಳೂ ಇರುವ ಪಟ್ಟಣದ ಒಳಗೆ ಪ್ರವೇಶಿಸಿದ್ದರಿಂದ ಈಗ ತಪ್ಪಿಸಿಕೊಳ್ಳಲಾರನು,” ಎಂದುಕೊಂಡನು.