1 Samuel 23:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸೌಲನು ಯುದ್ಧಕ್ಕಾಗಿ ತನ್ನ ಸೈನ್ಯವನ್ನೆಲ್ಲ ಒಟ್ಟಿಗೆ ಕರೆದನು. ದಾವೀದನನ್ನೂ ಅವನ ಜನರನ್ನೂ ಆಕ್ರಮಿಸಲು ಕೆಯೀಲಾಕ್ಕೆ ಹೋಗಲು ಅವರೆಲ್ಲ ಸಿದ್ಧಗೊಂಡರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕೆಯೀಲದಲ್ಲಿದ್ದ ದಾವೀದನನ್ನೂ, ಅವನ ಜನರನ್ನೂ ಹಿಡಿಯಲು ಹೋಗುವುದಕ್ಕೋಸ್ಕರ ಸೈನ್ಯವನ್ನು ಕೂಡಿಸಿದನು.
Kannada BSI Bible 2016
ಸೌಲನು ದಾವೀದನನ್ನೂ ಅವನ ಮನುಷ್ಯರನ್ನೂ ಮುತ್ತಿಕೊಳ್ಳುವ ಹಾಗೆ ತನ್ನವರನೆಲ್ಲಾ ಕೆಯಾಲಾಕ್ಕೆ ಯುದ್ಧಕ್ಕೆ ಹೋಗಲು ಕರೆದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕೆಯೀಲದಲ್ಲಿದ್ದ ದಾವೀದನನ್ನೂ ಅವನ ಜನರನ್ನೂ ಹಿಡಿಯ ಹೋಗುವದಕ್ಕೋಸ್ಕರ ಸೈನ್ಯವನ್ನು ಕೂಡಿಸಿದನು.
Kannada Bible (KNCL) BSI 2016
ಕೆಯೀಲಾದಲ್ಲಿದ್ದ ದಾವೀದನನ್ನೂ ಅವನ ಜನರನ್ನೂ ಹಿಡಿಯುವುದಕ್ಕಾಗಿ ಸೈನ್ಯವನ್ನು ಕೂಡಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಸೌಲನು ದಾವೀದನನ್ನೂ, ಅವನ ಜನರನ್ನೂ ಮುತ್ತಿಕೊಳ್ಳಲು ತನ್ನ ಸೈನಿಕರನ್ನು ಯುದ್ಧಕ್ಕೆ ಹೋಗಲು ಕೆಯೀಲಾ ನಗರಕ್ಕೆ ಕರೆದನು.