1 Samuel 23:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸೌಲನು ತನ್ನ ವಿರುದ್ಧವಾಗಿ ಉಪಾಯಗಳನ್ನು ಮಾಡುತ್ತಿದ್ದಾನೆಂಬುದು ದಾವೀದನಿಗೆ ತಿಳಿಯಿತು. ಆಗ ದಾವೀದನು ಯಾಜಕನಾದ ಎಬ್ಯಾತಾರನಿಗೆ, “ಎಫೋದನ್ನು ತೆಗೆದುಕೊಂಡು ಬಾ” ಎಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸೌಲನು ತನಗೆ ಕೇಡುಮಾಡಬೇಕೆಂದಿದ್ದಾನೆ ಎಂಬುದನ್ನು ದಾವೀದನು ತಿಳಿದು ಯಾಜಕನಾದ ಎಬ್ಯಾತಾರನಿಗೆ, “ಏಫೋದನ್ನು ಇಲ್ಲಿಗೆ ತೆಗೆದುಕೊಂಡು ಬಾ” ಎಂದನು.
Kannada BSI Bible 2016
ಸೌಲನು ತನಗೆ ಕೇಡನ್ನು ಮಾಡಲು ಗುಟ್ಟಾಗಿ ಯೋಚಿಸುತ್ತಿದ್ದಾನೆಂದು ದಾವೀದನು ತಿಳಿದಿ ದ್ದರಿಂದ ಯಾಜಕನಾದ ಎಬ್ಯಾತಾರನಿಗೆ--ಎಫೋದನ್ನು ಇಲ್ಲಿಗೆ ತಕ್ಕೊಂಡು ಬಾ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸೌಲನು ತನಗೆ ಕೇಡುಮಾಡಬೇಕೆಂದಿದ್ದಾನೆಂದು ದಾವೀದನು ತಿಳಿದು ಯಾಜಕನಾದ ಎಬ್ಯಾತಾರನಿಗೆ - ಏಫೋದನ್ನು ಇಲ್ಲಿಗೆ ತೆಗೆದುಕೊಂಡು ಬಾ ಎಂದು ಹೇಳಿ ತರಿಸಿ -
Kannada Bible (KNCL) BSI 2016
ಸೌಲನು ತನಗೆ ಕೇಡುಮಾಡಬೇಕೆಂದಿದ್ದಾನೆಂದು ದಾವೀದನು ತಿಳಿದು ಯಾಜಕನಾದ ಎಬ್ಯಾತಾರನಿಗೆ, “ಏಫೋದನ್ನು ಇಲ್ಲಿಗೆ ತೆಗೆದುಕೊಂಡು ಬಾ,” ಎಂದು ಹೇಳಿ ತರಿಸಿ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸೌಲನು ತನಗೆ ಕೇಡನ್ನು ಮಾಡಲು ಗುಟ್ಟಾಗಿ ಯೋಚಿಸುತ್ತಿದ್ದಾನೆಂದು ದಾವೀದನು ತಿಳಿದಿದ್ದರಿಂದ ಯಾಜಕನಾದ ಅಬಿಯಾತರನಿಗೆ, “ಏಫೋದನ್ನು ಇಲ್ಲಿಗೆ ತೆಗೆದುಕೊಂಡು ಬಾ,” ಎಂದನು.