1 Samuel 24:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀನು ಯಾರನ್ನು ಅಟ್ಟಿಸಿಕೊಂಡು ಹೋಗುತ್ತಿರುವೆ? ಇಸ್ರೇಲರ ರಾಜನಾದ ನೀನು ಯಾರೊಂದಿಗೆ ಹೋರಾಡಬೇಕೆಂದಿರುವೆ? ನಿನಗೆ ಕೇಡು ಮಾಡಬಹುದಾದವನನ್ನು ನೀನು ಅಟ್ಟಿಸಿಕೊಂಡು ಹೋಗುತ್ತಿಲ್ಲ! ನೀನು ಸತ್ತ ನಾಯಿಯನ್ನೋ ಇಲ್ಲವೆ ಚಿಟ್ಟೆಯನ್ನೋ ಅಟ್ಟಿಸಿಕೊಂಡು ಹೋಗುತ್ತಿರುವೆ!
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲರ ಅರಸನೇ ಯಾರನ್ನು ಹಿಂಬಾಲಿಸಿ ಹೊರಟಿರುವೇ? ಯಾರನ್ನು ಹಿಡಿಯಬೇಕೆಂದಿರುತ್ತೀ? ಸತ್ತ ನಾಯಿಯನ್ನೋ? ಒಂದು ಬಡ ನೊಣವನ್ನೋ?.
Kannada BSI Bible 2016
ಇಸ್ರಾಯೇಲಿನ ಅರಸನು ಯಾರನ್ನು ಬೆನ್ನಟ್ಟಿ ಹೊರಟನು? ಯಾರನ್ನು ನೀನು ಹಿಂದಟ್ಟುತ್ತೀ? ಸತ್ತನಾಯಿಯನ್ನೇ? ಒಂದು ಕೀಟವನ್ನೇ?
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ಯರ ಅರಸೇ, ಯಾರನ್ನು ಹಿಂದಟ್ಟ ಹೊರಟಿದ್ದೀ? ಯಾರನ್ನು ಹಿಡಿಯಬೇಕೆಂದಿರುತ್ತೀ? ಸತ್ತ ನಾಯಿಯನ್ನೇ, ಒಂದು ಬಡ ಸೊಳ್ಳೆಯನ್ನೇ.
Kannada Bible (KNCL) BSI 2016
ಇಸ್ರಯೇಲರ ಅರಸರೇ, ಯಾರನ್ನು ಹಿಂದಟ್ಟಿ ಹೊರಟಿದ್ದೀರಿ? ಯಾರನ್ನು ಹಿಡಿಯಬೇಕೆಂದಿರುತ್ತೀರಿ? ಸತ್ತ ನಾಯಿಯನ್ನೇ? ಒಂದು ಬಡ ಸೊಳ್ಳೆಯನ್ನೇ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಇಸ್ರಾಯೇಲಿನ ಅರಸನು ಯಾರನ್ನು ಹಿಂದಟ್ಟಿ ಹೊರಟನು? ಯಾರನ್ನು ಹಿಂದಟ್ಟುತ್ತೀ? ಸತ್ತ ನಾಯಿಯನ್ನೇ? ಒಂದು ನೊಣವನ್ನೇ?