1 Samuel 24:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದಾವೀದನು ಈ ಮಾತುಗಳನ್ನು ಹೇಳಿದಾಗ ಸೌಲನು, “ನನ್ನ ಮಗನಾದ ದಾವೀದನೇ, ಇದು ನಿನ್ನ ಧ್ವನಿಯೇ?” ಎಂದು ಕೇಳಿದನು. ನಂತರ ಸೌಲನು ಅಳಲಾರಂಭಿಸಿದನು. ಸೌಲನು ಬಹಳ ಅತ್ತನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದಾವೀದನ ಮಾತುಗಳು ಮುಗಿದ ನಂತರ ಸೌಲನು, “ದಾವೀದನೇ, ನನ್ನ ಮಗನೇ, ಇದು ನಿನ್ನ ಸ್ವರವೋ?” ಅಂದು ಗಟ್ಟಿಯಾಗಿ ಅತ್ತನು.
Kannada BSI Bible 2016
ದಾವೀದನು ಈ ಮಾತುಗಳನ್ನು ಸೌಲನಿಗೆ ಹೇಳಿ ತೀರಿಸಿದಾಗ ಸೌಲನು--ನನ್ನ ಕುಮಾರನಾದ ದಾವೀದನೇ, ಇದು ನಿನ್ನ ಸ್ವರವಲ್ಲವೋ ಅಂದನು; ಸೌಲನು ಸ್ವರವೆತ್ತಿ ಗಟ್ಟಿಯಾಗಿ ಅತ್ತನು.
Kannada BSI JV (ಕನ್ನಡ ಸತ್ಯವೇದವು J.V. (BSI))
ದಾವೀದನ ಮಾತುಗಳು ಮುಗಿದನಂತರ ಸೌಲನು - ದಾವೀದನೇ, ನನ್ನ ಮಗನೇ, ಇದು ನಿನ್ನ ಸ್ವರವೋ ಅಂದು ಗಟ್ಟಿಯಾಗಿ ಅತ್ತನು.
Kannada Bible (KNCL) BSI 2016
ದಾವೀದನ ಮಾತುಗಳು ಮುಗಿದನಂತರ ಸೌಲನು, “ದಾವೀದನೇ, ನನ್ನ ಮಗನೇ, ಇದು ನಿಜವಾಗಿಯೂ ನಿನ್ನ ಸ್ವರವೇ?” ಎಂದು ಗಟ್ಟಿಯಾಗಿ ಅತ್ತನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದಾವೀದನ ಮಾತುಗಳು ಮುಗಿದ ನಂತರ, ಸೌಲನು ದಾವೀದನಿಗೆ, “ದಾವೀದನೇ, ನನ್ನ ಮಗನೇ, ಇದು ನಿನ್ನ ಸ್ವರವೋ?” ಎಂದು ಗಟ್ಟಿಯಾಗಿ ಅತ್ತನು.