1 Samuel 24:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಒಬ್ಬ ಮನುಷ್ಯನು ತನ್ನ ಶತ್ರುವನ್ನು ಹಿಡಿದುಕೊಂಡರೆ, ಅವನಿಗೆ ಕೇಡನ್ನು ಮಾಡದೆ ಕಳುಹಿಸಿಬಿಡುವನೇ? ಅವನು ಶತ್ರುವಿಗೆ ಒಳ್ಳೆಯದನ್ನು ಮಾಡುವುದಿಲ್ಲ. ನೀನು ನನಗೆ ಈ ದಿನ ಒಳ್ಳೆಯದನ್ನು ಮಾಡಿರುವುದರಿಂದ ಯೆಹೋವನು ನಿನಗೆ ಒಳ್ಳೆಯದನ್ನು ಮಾಡಲಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾವನಾದರೂ ತನ್ನ ಕೈಗೆ ಸಿಕ್ಕಿದ ವೈರಿಯನ್ನು ಸುಕ್ಷೇಮದಿಂದ ಕಳುಹಿಸಿಬಿಡುವನೋ? ನೀನು ಈ ಹೊತ್ತು ನನಗೆ ಉಪಕಾರಮಾಡಿದ್ದಕ್ಕಾಗಿ ಯೆಹೋವನು ನಿನಗೆ ಉಪಕಾರ ಮಾಡಲಿ.
Kannada BSI Bible 2016
ಯಾವನಾದರೂ ತನ್ನ ಶತ್ರು ವನ್ನು ಹಿಡಿದುಕೊಂಡರೆ ಅವನನ್ನು ಸುರಕ್ಷಿತವಾಗಿ ಬಿಟ್ಟುಬಿಡುವನೋ? ಆದದರಿಂದ ಈ ಹೊತ್ತು ನೀನು ನನಗೆ ಮಾಡಿದ್ದಕ್ಕೆ ಬದಲಾಗಿ ದೇವರು ನಿನಗೆ ಒಳ್ಳೇ ದನ್ನು ಮಾಡಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾವನಾದರೂ ತನ್ನ ಕೈಗೆ ಸಿಕ್ಕಿದ ವೈರಿಯನ್ನು ಸುಕ್ಷೇಮದಿಂದ ಕಳುಹಿಸಿಬಿಡುವನೋ? ನೀನು ಈಹೊತ್ತು ನನಗೆ ಉಪಕಾರಮಾಡಿದ್ದಕ್ಕಾಗಿ ಯೆಹೋವನು ನಿನಗೆ ಉಪಕಾರಮಾಡಲಿ.
Kannada Bible (KNCL) BSI 2016
ಯಾವನಾದರೂ ತನ್ನ ಕೈಗೆ ಸಿಕ್ಕಿದ ವೈರಿಯನ್ನು ಸುಕ್ಷೇಮದಿಂದ ಕಳುಹಿಸಿಬಿಡುತ್ತಾನೆಯೇ? ನೀನು ಈ ದಿನ ನನಗೆ ಮಾಡಿದ ಉಪಕಾರಕ್ಕಾಗಿ ಸರ್ವೇಶ್ವರ ನಿನಗೆ ಪ್ರತ್ಯುಪಕಾರಮಾಡಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ಯಾವನಾದರೂ ತನ್ನ ಶತ್ರುವನ್ನು ಹಿಡಿದುಕೊಂಡರೆ, ಅವನನ್ನು ಸುರಕ್ಷಿತನಾಗಿ ಬಿಟ್ಟುಬಿಡುವನೋ? ಈ ಹೊತ್ತು ನೀನು ನನಗೆ ಒಳ್ಳೆಯದನ್ನು ಮಾಡಿದ್ದರಿಂದ ಯೆಹೋವ ದೇವರು ನಿನಗೆ ಒಳ್ಳೆಯದನ್ನು ಮಾಡಲಿ.