1 Samuel 24:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇಸ್ರೇಲಿನ ಮೂರು ಸಾವಿರ ಜನರನ್ನು ಸೌಲನು ಆರಿಸಿದನು. ಸೌಲನು ಈ ಜನರೊಂದಿಗೆ ದಾವೀದನನ್ನು ಮತ್ತು ಅವನ ಜನರನ್ನು ಹುಡುಕಲು ಆರಂಭಿಸಿದನು. ಅವರು ಕಾಡು ಹೋತದ ಬಂಡೆಗಳ ಹತ್ತಿರ ಹುಡುಕಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಅವನು ಎಲ್ಲಾ ಇಸ್ರಾಯೇಲರಲ್ಲಿ ಶ್ರೇಷ್ಠರಾದ ಮೂರು ಸಾವಿರ ಮಂದಿ ಸೈನಿಕರನ್ನು ಆರಿಸಿಕೊಂಡು ಕಾಡುಗುರಿಬಂಡೆಗಳಲ್ಲಿದ್ದ ದಾವೀದನನ್ನೂ, ಅವನ ಜನರನ್ನೂ ಹುಡುಕುವುದಕ್ಕೋಸ್ಕರ ಹೊರಟನು.
Kannada BSI Bible 2016
ಆಗ ಸೌಲನು ಎಲ್ಲಾ ಇಸ್ರಾಯೇಲಿನಲ್ಲಿ ಆದುಕೊಳ್ಳಲ್ಪಟ್ಟ ಮೂರು ಸಾವಿರ ಜನರನ್ನು ತಕ್ಕೊಂಡು ದಾವೀದನನ್ನೂ ಅವನ ಮನುಷ್ಯರನ್ನೂ ಹುಡುಕಲು ಕಾಡು ಮೇಕೆಗಳಿರುವ ಬಂಡೆಗಳಿಗೆ ಹೋದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಅವನು ಎಲ್ಲಾ ಇಸ್ರಾಯೇಲ್ಯರಲ್ಲಿ ಶ್ರೇಷ್ಠರಾದ ಮೂರು ಸಾವಿರ ಮಂದಿ ಸೈನಿಕರನ್ನು ಆರಿಸಿಕೊಂಡು ಕಾಡು ಗುರಿಬಂಡೆಗಳಲ್ಲಿದ್ದ ದಾವೀದನನ್ನೂ ಅವನ ಜನರನ್ನೂ ಹುಡುಕುವದಕ್ಕೋಸ್ಕರ ಹೊರಟನು.
Kannada Bible (KNCL) BSI 2016
ಆಗ ಅವನು ಇಸ್ರಯೇಲರಲ್ಲಿ ಶ್ರೇಷ್ಠರಾದ ಮೂರು ಸಾವಿರ ಮಂದಿ ಸೈನಿಕರನ್ನು ಆರಿಸಿಕೊಂಡು ಕಾಡುಗುರಿಬಂಡೆಗಳಲ್ಲಿದ್ದ ದಾವೀದನನ್ನೂ ಅವನ ಜನರನ್ನೂ ಹುಡುಕುವುದಕ್ಕಾಗಿ ಹೊರಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಸೌಲನು ಸಮಸ್ತ ಇಸ್ರಾಯೇಲಿನಲ್ಲಿ ಶ್ರೇಷ್ಠರಾದ ಮೂರು ಸಾವಿರ ಸೈನಿಕರನ್ನು ತೆಗೆದುಕೊಂಡು ದಾವೀದನನ್ನೂ, ಅವನ ಜನರನ್ನೂ ಹುಡುಕಲು ಕಾಡುಮೇಕೆಗಳಿರುವ ಬಂಡೆಗಳಿಗೆ ಹೋದನು.