1 Samuel 24:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಈಗ ನೀನು ನನಗೆ ಒಂದು ಪ್ರಮಾಣವನ್ನು ಮಾಡು. ನನ್ನ ಸಂತಾನದವರನ್ನು ನೀನು ಕೊಲ್ಲುವುದಿಲ್ಲವೆಂದು ಯೆಹೋವನ ಹೆಸರಿನಲ್ಲಿ ನನಗೆ ಪ್ರಮಾಣಮಾಡು. ನನ್ನ ತಂದೆಯ ಕುಲದಲ್ಲಿ ನನ್ನ ಹೆಸರನ್ನು ನಾಶಮಾಡುವುದಿಲ್ಲವೆಂದು ಪ್ರಮಾಣ ಮಾಡು” ಎಂದು ಬೇಡಿಕೊಂಡನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗಿರುವುದರಿಂದ ನೀನು ನನ್ನ ಸಂತಾನವನ್ನು ನಿರ್ಮೂಲಮಾಡುವುದಿಲ್ಲವೆಂದೂ, ನಮ್ಮ ಕುಲದಿಂದ ನನ್ನ ಹೆಸರನ್ನು ತೆಗೆದುಹಾಕುವುದಿಲ್ಲವೆಂದೂ ಯೆಹೋವನ ಹೆಸರಿನಲ್ಲಿ ಪ್ರಮಾಣ ಮಾಡು” ಎಂದು ಬೇಡಿಕೊಂಡ ಹಾಗೆ ದಾವೀದನು ಪ್ರಮಾಣಮಾಡಿದನು.
Kannada BSI Bible 2016
ಆದದರಿಂದ ನೀನು ನನ್ನ ತರುವಾಯ ನನ್ನ ಸಂತಾನವನ್ನು ನಿರ್ಮೂಲ ಮಾಡುವದಿಲ್ಲವೆಂದೂ ನನ್ನ ತಂದೆಯ ಮನೆಯಲ್ಲಿ ನನ್ನ ಹೆಸರನ್ನು ನಾಶ ಮಾಡುವದಿಲ್ಲವೆಂದೂ ನನಗೆ ಕರ್ತನ ಹೆಸರಿನಿಂದ ಪ್ರಮಾಣಮಾಡು ಅಂದನು.ಹಾಗೆಯೇ ದಾವೀ ದನು ಸೌಲನಿಗೆ ಪ್ರಮಾಣಮಾಡಿದನು. ಆಗ ಸೌಲನು ತನ್ನ ಮನೆಗೆ ಹೋದನು. ಆದರೆ ದಾವೀದನೂ ಅವನ ಜನರೂ ಭದ್ರವಾದ ಸ್ಥಳಕ್ಕೆ ಏರಿ ಹೋದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಿರುವದರಿಂದ ನೀನು ನನ್ನ ಸಂತಾನವನ್ನು ನಿರ್ಮೂಲ ಮಾಡುವದಿಲ್ಲವೆಂದೂ ನಮ್ಮ ಕುಲದಿಂದ ನನ್ನ ಹೆಸರನ್ನು ತೆಗೆದುಹಾಕುವದಿಲ್ಲವೆಂದೂ ಯೆಹೋವನ ಹೆಸರಿನಲ್ಲಿ ಪ್ರಮಾಣಮಾಡು ಎಂದು ಬೇಡಿಕೊಂಡ ಹಾಗೆ ದಾವೀದನು ಪ್ರಮಾಣಮಾಡಿದನು;
Kannada Bible (KNCL) BSI 2016
ಹೀಗಿರುವುದರಿಂದ ನೀನು ನನ್ನ ಸಂತಾನವನ್ನು ನಿರ್ಮೂಲಮಾಡುವುದು ಇಲ್ಲವೆಂದೂ ನಮ್ಮ ಕುಲದಿಂದ ನನ್ನ ಹೆಸರನ್ನು ತೆಗೆದು ಹಾಕುವುದಿಲ್ಲವೆಂದೂ ಸರ್ವೇಶ್ವರನ ಹೆಸರಿನಲ್ಲಿ ಪ್ರಮಾಣ ಮಾಡು,” ಎಂದು ಬೇಡಿಕೊಂಡನು. ಹಾಗೆಯೇ ದಾವೀದನು ಪ್ರಮಾಣ ಮಾಡಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ನೀನು ನನ್ನ ತರುವಾಯ ನನ್ನ ಸಂತಾನವನ್ನು ಕಡಿದುಬಿಡುವುದಿಲ್ಲವೆಂದೂ, ನನ್ನ ಗೋತ್ರದಿಂದ ನನ್ನ ಹೆಸರನ್ನು ತೆಗೆದುಹಾಕುವುದಿಲ್ಲವೆಂದೂ ನನಗೆ ಯೆಹೋವ ದೇವರ ಹೆಸರಿನಲ್ಲಿ ಪ್ರಮಾಣಮಾಡು,” ಎಂದನು.