1 Samuel 24:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸೌಲನು ರಸ್ತೆಯ ಪಕ್ಕದ ಕುರಿದೊಡ್ಡಿಗೆ ಬಂದನು. ಅಲ್ಲಿಗೆ ಸಮೀಪದಲ್ಲಿ ಒಂದು ಗವಿಯಿದ್ದಿತು. ಸೌಲನು ಶೌಚಕ್ಕೋಸ್ಕರ ಗವಿಯ ಒಳಗಡೆಗೆ ಹೋದನು. ದಾವೀದನೂ ಅವನ ಜನರೂ ಅದೇ ಗವಿಯ ಹಿಂದಗಡೆ ಅಡಗಿಕೊಂಡಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಮಾರ್ಗದಲ್ಲಿ ಕುರಿಹಟ್ಟಿಗಳ ಬಳಿಯಲ್ಲಿ ಒಂದು ಗವಿಯನ್ನು ಕಂಡು ಶೌಚಕ್ಕೋಸ್ಕರ ಅದರೊಳಗೆ ಪ್ರವೇಶಿಸಿದನು. ದಾವೀದನೂ ಅವನ ಜನರೂ ಅದೇ ಗವಿಯ ಹಿಂಭಾಗದಲ್ಲಿ ಅಡಗಿಕೊಂಡಿದ್ದರು.
Kannada BSI Bible 2016
ಅವನು ಮಾರ್ಗದಲ್ಲಿ ಕುರಿ ಹಟ್ಟಿಗಳು ಇರುವ ಗವಿಯ ಬಳಿಗೆ ಬಂದು ಅದರಲ್ಲಿ ಅವನು ತನ್ನ ಕಾಲುಗಳನ್ನು ಮುಚ್ಚಿಕೊಳ್ಳಲು ಪ್ರವೇಶಿಸಿದನು. ಆದರೆ ದಾವೀದನೂ ಅವನ ಮನುಷ್ಯರೂ ಆ ಗವಿಯ ಪಕ್ಕ ದಲ್ಲಿ ಇದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಮಾರ್ಗದಲ್ಲಿ ಕುರಿಹಟ್ಟಿಗಳ ಬಳಿಯಲ್ಲಿ ಒಂದು ಗವಿಯನ್ನು ಕಂಡು ಶೌಚಕ್ಕೋಸ್ಕರ ಅದರೊಳಗೆ ಪ್ರವೇಶಿಸಿದನು. ದಾವೀದನೂ ಅವನ ಜನರೂ ಅದೇ ಗವಿಯ ಹಿಂಗಡೆಯಲ್ಲಿ ಅಡಗಿಕೊಂಡಿದ್ದರು.
Kannada Bible (KNCL) BSI 2016
ಮಾರ್ಗದಲ್ಲಿ ಕುರಿಹಟ್ಟಿಗಳ ಬಳಿಯಲ್ಲಿ ಒಂದು ಗವಿಯನ್ನು ಕಂಡು ಶೌಚಕ್ಕಾಗಿ ಅದರೊಳಗೆ ಪ್ರವೇಶಿಸಿದನು. ದಾವೀದನೂ ಅವನ ಜನರೂ ಅದೇ ಗವಿಯ ಹಿಂಗಡೆಯಲ್ಲಿ ಅಡಗಿಕೊಂಡಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸೌಲನು ಮಾರ್ಗದಲ್ಲಿ ಕುರಿಹಟ್ಟಿಗಳು ಇರುವ ಗವಿಯ ಬಳಿಗೆ ಬಂದು, ಅದರಲ್ಲಿ ಅವನು ಶೌಚಕ್ಕಾಗಿ ಹೋದನು. ಆದರೆ ದಾವೀದನೂ, ಅವನ ಜನರೂ ಅದೇ ಗವಿಯ ಹಿಂದೆ ಅಡಗಿಕೊಂಡಿದ್ದರು.