1 Samuel 24:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಜನರು ದಾವೀದನಿಗೆ, “ಯೆಹೋವನು ಈ ದಿನವನ್ನೇ ಕುರಿತು ನಿನ್ನೊಂದಿಗೆ ಮಾತನಾಡಿದನು. ಯೆಹೋವನು ನಿನಗೆ, ‘ನಾನು ನಿನ್ನ ಶತ್ರುವನ್ನು ನಿನಗೆ ಒಪ್ಪಿಸುತ್ತೇನೆ. ನಿನ್ನ ಇಷ್ಟದಂತೆ ಶತ್ರುವಿಗೆ ಏನು ಬೇಕಾದರೂ ಮಾಡು’ ಎಂದು ಹೇಳಿದನು” ಎಂದರು. ನಂತರ ದಾವೀದನು ಸೌಲನ ಹತ್ತಿರಕ್ಕೆ ತೆವಳುತ್ತಾ ಹೋಗಿ ಸೌಲನ ಅಂಗಿಯ ಒಂದು ಮೂಲೆಯನ್ನು ಕತ್ತರಿಸಿದನು. ದಾವೀದನನ್ನು ಸೌಲನು ನೋಡಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಜನರು ದಾವೀದನಿಗೆ “ನಿನ್ನ ಶತ್ರುವನ್ನು ನಿನ್ನ ಕೈಗೆ ಒಪ್ಪಿಸಿಕೊಡುವೆನು, ಆಗ ನೀನು ಅವನನ್ನು ಮನಸ್ಸಿಗೆ ಬಂದಂತೆ ನಡೆಸಬಹುದು ಎಂದು ಯೆಹೋವನು ನಿನಗೆ ಹೇಳಿದ ಮಾತು ನೆರವೇರುವ ದಿನ ಇದೇ” ಅಂದಾಗ ಅವನೆದ್ದು ಮೆಲ್ಲನೆ ಹೋಗಿ ಸೌಲನ ನಿಲುವಂಗಿಯ ತುದಿಯನ್ನು ಕತ್ತರಿಸಿಕೊಂಡನು.
Kannada BSI Bible 2016
ದಾವೀದನ ಜನರು ಅವನಿಗೆ--ಇಗೋ, ನಾನು ನಿನ್ನ ಶತ್ರುವನ್ನು ನಿನ್ನ ಕಣ್ಣುಗಳಿಗೆ ಸರಿತೋರುವ ಹಾಗೆ ಮಾಡುವದಕ್ಕೆ ಅವನನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಡುವೆನೆಂದು ಕರ್ತನು ನಿನಗೆ ಹೇಳಿದ ದಿವಸವು ಇದೇ ಅಂದರು. ಆಗ ದಾವೀದನು ಎದ್ದು ಹೋಗಿ ಏಕಾಂತವಾಗಿ ಸೌಲನ ನಿಲುವಂಗಿಯ ಅಂಚನ್ನು ಕತ್ತರಿಸಿಕೊಂಡನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಜನರು ದಾವೀದನಿಗೆ - ನಿನ್ನ ಶತ್ರುವನ್ನು ನಿನ್ನ ಕೈಗೆ ಒಪ್ಪಿಸಿಕೊಡುವೆನು; ಆಗ ನೀನು ಅವನನ್ನು ಮನಸ್ಸಿಗೆ ಬಂದಂತೆ ನಡಿಸಬಹುದು ಎಂದು ಯೆಹೋವನು ನಿನಗೆ ಹೇಳಿದ ಮಾತು ನೆರವೇರುವ ದಿವಸ ಇದೇ ಅಂದಾಗ ಅವನೆದ್ದು ಮೆಲ್ಲಗೆ ಹೋಗಿ ಸೌಲನ ನಿಲುವಂಗಿಯ ಮೂಲೆಯನ್ನು ಕತ್ತರಿಸಿಕೊಂಡನು.
Kannada Bible (KNCL) BSI 2016
ಜನರು ದಾವೀದನಿಗೆ, “’ನಿನ್ನ ಶತ್ರುವನ್ನು ನಿನ್ನ ಕೈಗೆ ಒಪ್ಪಿಸಿಕೊಡುವೆನು; ಆಗ ನೀನು ಅವನನ್ನು ನಿನ್ನ ಇಷ್ಟಾನುಸಾರ ನಡೆಸಬಹುದು,’ ಎಂದು ಸರ್ವೇಶ್ವರ ನಿನಗೆ ಹೇಳಿದ ಮಾತು ನೆರವೇರುವ ಸುದಿನವಿದು,” ಎಂದರು. ಅವನೆದ್ದು ಮೆಲ್ಲಗೆ ಹೋಗಿ ಸೌಲನ ನಿಲುವಂಗಿಯ ಮೂಲೆಯನ್ನು ಕತ್ತರಿಸಿಕೊಂಡನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ದಾವೀದನ ಜನರು ಅವನಿಗೆ, “ ‘ನಾನು ನಿನ್ನ ಶತ್ರುವನ್ನು ನಿನ್ನ ಕೈಗೆ ಒಪ್ಪಿಸಿಕೊಡುವೆನು. ಆಗ ನೀನು ನಿನ್ನ ಇಷ್ಟಾನುಸಾರ ಅವನಿಗೆ ಮಾಡಬಹುದು,’ ಎಂದು ಯೆಹೋವ ದೇವರು ನಿನಗೆ ಹೇಳಿದ ದಿನವು ಇದೇ,” ಎಂದರು. ಆಗ ದಾವೀದನು ಎದ್ದು ಹೋಗಿ ರಹಸ್ಯವಾಗಿ ಸೌಲನ ನಿಲುವಂಗಿಯ ಮೂಲೆಯನ್ನು ಕತ್ತರಿಸಿಕೊಂಡನು.