1 Samuel 24:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದಾವೀದನು ಗವಿಯಿಂದ ಹೊರಗೆ ಬಂದನು. ದಾವೀದನು ಸೌಲನಿಗೆ, “ಅರಸನೇ, ನನ್ನ ಒಡೆಯನೇ!” ಎಂದು ಕೂಗಿದನು. ಸೌಲನು ಹಿಂದಿರುಗಿ ನೋಡಿದಾಗ ದಾವೀದನು ಅವನಿಗೆ ಸಾಷ್ಟಾಂಗನಮಸ್ಕಾರಮಾಡಿ,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದಾವೀದನೂ ಹೊರಗೆ ಬಂದು, “ಅರಸನೇ ನನ್ನ ಒಡೆಯನೇ” ಎಂದು ಅವನನ್ನು ಕೂಗಿದನು. ಸೌಲನು ಹಿಂದಿರುಗಿ ನೋಡಲು ಅವನಿಗೆ ಸಾಷ್ಟಾಂಗ ನಮಸ್ಕಾರ ಮಾಡಿ,
Kannada BSI Bible 2016
ತರುವಾಯ ದಾವೀದನು ಎದ್ದು ಗವಿ ಯಿಂದ ಹೊರಟು ಸೌಲನ ಹಿಂದೆ--ಅರಸನಾದ ನನ್ನ ಒಡೆಯನೇ ಎಂದು ಕೂಗಿದನು. ಸೌಲನು ಹಿಂದಿರುಗಿ ನೋಡಿದಾಗ ದಾವೀದನು ನೆಲದ ವರೆಗೆ ಬೊಗ್ಗಿ ವಂದಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ದಾವೀದನೂ ಹೊರಗೆ ಬಂದು - ಅರಸನೇ, ನನ್ನ ಒಡೆಯನೇ ಎಂದು ಅವನನ್ನು ಕೂಗಿದನು. ಸೌಲನು ಹಿಂದಿರುಗಿ ನೋಡಲು ಅವನಿಗೆ ಸಾಷ್ಟಾಂಗ ನಮಸ್ಕಾರಮಾಡಿ -
Kannada Bible (KNCL) BSI 2016
ಸೌಲನು ಗವಿಯಿಂದ ಹೊರಗೆ ಬಂದು ಸ್ವಲ್ಪ ಮುಂದೆ ಹೋದಮೇಲೆ ದಾವೀದನೂ ಹೊರಗೆ ಬಂದು, “ಅರಸರೇ, ನನ್ನ ಒಡೆಯರೇ,” ಎಂದು ಅವನನ್ನು ಕೂಗಿದನು. ಸೌಲನು ಹಿಂದಿರುಗಿ ನೋಡಿದನು. ಆಗ ಅವನಿಗೆ ಸಾಷ್ಟಾಂಗ ನಮಸ್ಕಾರಮಾಡಿ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತರುವಾಯ ದಾವೀದನು ಎದ್ದು ಗವಿಯಿಂದ ಹೊರಗೆ ಬಂದು ಸೌಲನಿಗೆ, “ಅರಸನೇ, ನನ್ನ ಒಡೆಯನೇ,” ಎಂದು ಕೂಗಿದನು. ಸೌಲನು ಹಿಂದಿರುಗಿ ನೋಡಿದಾಗ, ದಾವೀದನು ನೆಲದವರೆಗೆ ಬಗ್ಗಿ ವಂದಿಸಿದನು.