1 Samuel 25:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸಮುವೇಲನು ಮರಣಹೊಂದಿದನು. ಇಸ್ರೇಲರೆಲ್ಲರೂ ಒಟ್ಟಾಗಿ ಸೇರಿ ಸಮುವೇಲನ ಮರಣಕ್ಕಾಗಿ ಗೋಳಾಡಿದರು. ಅವರು ಸಮುವೇಲನನ್ನು ಅವನ ನಿವಾಸವಿದ್ದ ರಾಮದಲ್ಲಿ ಸಮಾಧಿಮಾಡಿದರು. ನಂತರ ದಾವೀದನು ಪಾರಾನ್ ಮರಳುಗಾಡಿಗೆ ಹೋದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಮುವೇಲನು ಮರಣಹೊಂದಿದನು. ಇಸ್ರಾಯೇಲ್ಯರೆಲ್ಲರೂ ಒಟ್ಟಾಗಿ ಬಂದು ಅವನಿಗಾಗಿ ಗೋಳಾಡುತ್ತಾ ಅವನ ಶವವನ್ನು ರಾಮದಲ್ಲಿದ್ದ ಅವನ ಮನೆಯ ನಿವೇಶನದಲ್ಲಿ ಸಮಾಧಿಮಾಡಿದರು. ದಾವೀದನು ಹೊರಟು ಪಾರಾನ್ ಮರುಭೂಮಿಗೆ ಹೋದನು.
Kannada BSI Bible 2016
ಸಮುವೇಲನು ಸತ್ತುಹೋದನು; ಇಸ್ರಾಯೇಲ್ಯರೆಲ್ಲರೂ ಕೂಡಿಬಂದು ಅವನಿ ಗೋಸ್ಕರ ಗೋಳಾಡಿ ರಾಮದಲ್ಲಿರುವ ಅವನ ಮನೆ ಯಲ್ಲಿ ಅವನನ್ನು ಹೂಣಿಟ್ಟರು. ದಾವೀದನು ಎದ್ದು ಪಾರಾನ್ ಅರಣ್ಯಕ್ಕೆ ಹೋದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸಮುವೇಲನು ಮೃತಿಹೊಂದಿದನು. ಇಸ್ರಾಯೇಲ್ಯರೆಲ್ಲರೂ ಕೂಡಿ ಬಂದು ಅವನಿಗೋಸ್ಕರ ಗೋಳಾಡುತ್ತಾ ಅವನ ಶವವನ್ನು ರಾಮದಲ್ಲಿದ್ದ ಅವನ ಮನೆಯ ನಿವೇಶನದಲ್ಲಿ ಸಮಾಧಿಮಾಡಿದರು. ದಾವೀದನು ಹೊರಟು ಪಾರಾನ್ ಅರಣ್ಯಕ್ಕೆ ಹೋದನು.
Kannada Bible (KNCL) BSI 2016
ಸಮುವೇಲನು ಮರಣಹೊಂದಿದನು. ಇಸ್ರಯೇಲರೆಲ್ಲರೂ ಕೂಡಿಬಂದು ಅವನಿಗಾಗಿ ಸಂತಾಪಸೂಚಿಸುತ್ತಾ ಅವನ ಶವವನ್ನು ರಾಮಾದಲ್ಲಿದ್ದ ಅವನ ಮನೆಯ ಅಂಗಳದಲ್ಲೇ ಸಮಾಧಿಮಾಡಿದರು. ದಾವೀದನು ಹೊರಟು ಪಾರಾನ್ ಮರುಭೂಮಿಗೆ ಹೋದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸಮುಯೇಲನು ಮರಣಹೊಂದಿದನು. ಇಸ್ರಾಯೇಲರೆಲ್ಲರು ಕೂಡಿಬಂದು ಅವನಿಗೋಸ್ಕರ ಗೋಳಾಡಿ, ರಾಮದಲ್ಲಿರುವ ಅವನ ಮನೆಯ ಅಂಗಳದಲ್ಲಿ ಅವನನ್ನು ಸಮಾಧಿಮಾಡಿದರು. ಅನಂತರ ದಾವೀದನು ಹೊರಟು ಪಾರಾನ್ ಮರುಭೂಮಿಗೆ ಹೋದನು.