1 Samuel 25:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ನಾಬಾಲನು ಅವರನ್ನು ಕೀಳಾಗಿ ಕಂಡು, “ದಾವೀದನು ಯಾರು? ಈ ಇಷಯನ ಮಗನೆಂಬವನು ಯಾರು? ಇತ್ತೀಚಿನ ದಿನಗಳಲ್ಲಿ ತಮ್ಮ ಒಡೆಯರ ಹತ್ತಿರದಿಂದ ಓಡಿ ಹೋಗಿರುವ ಅನೇಕ ಗುಲಾಮರುಗಳಿದ್ದಾರೆ!
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾಬಾಲನು ಅವರಿಗೆ, “ದಾವೀದನಾರು? ಇಷಯನ ಮಗನಾರು? ಯಜಮಾನರನ್ನು ಬಿಟ್ಟು ಹೋದ ಸೇವಕರು ಈಗಿನ ಕಾಲದಲ್ಲಿ ಎಷ್ಟು ಮಂದಿಯಿಲ್ಲ.
Kannada BSI Bible 2016
ನಾಬಾಲನು ದಾವೀದನ ಸೇವಕರಿಗೆ ಪ್ರತ್ಯುತ್ತರವಾಗಿ--ದಾವೀದನು ಯಾರು? ಇಷಯನ ಮಗನು ಯಾರು? ತಮ್ಮ ಯಜಮಾನನನ್ನು ಬಿಟ್ಟು ಅಗಲಿ ಹೋಗುವ ಸೇವಕರು ಈ ದಿವಸಗಳಲ್ಲಿ ಅನೇಕರು ಇದ್ದಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾಬಾಲನು ಅವರಿಗೆ - ದಾವೀದನಾರು? ಇಷಯನ ಮಗನಾರು? ಯಜಮಾನರನ್ನು ಬಿಟ್ಟು ಓಡಿಹೋದ ಸೇವಕರು ಈಗಿನ ಕಾಲದಲ್ಲಿ ಎಷ್ಟು ಮಂದಿಯಿಲ್ಲ!
Kannada Bible (KNCL) BSI 2016
ನಾಬಾಲನು ಅವರಿಗೆ, “ದಾವೀದನಾರು? ಜೆಸ್ಸೆಯನ ಮಗನಾರು? ಯಜಮಾನರನ್ನು ಬಿಟ್ಟು ಓಡಿಹೋದ ಗುಲಾಮರು ಈಗಿನ ಕಾಲದಲ್ಲಿ ಎಷ್ಟುಮಂದಿಯಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾಬಾಲನು ದಾವೀದನ ಸೇವಕರಿಗೆ ಉತ್ತರವಾಗಿ, “ದಾವೀದನು ಯಾರು? ಇಷಯನ ಮಗನು ಯಾರು? ತಮ್ಮ ಯಜಮಾನನನ್ನು ಬಿಟ್ಟು ಅಗಲಿ ಹೋಗುವ ಸೇವಕರು ಈ ದಿವಸಗಳಲ್ಲಿ ಅನೇಕರು ಉಂಟು.