1 Samuel 25:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ದಾವೀದನು ತನ್ನ ಜನರಿಗೆ, “ನಿಮ್ಮ ಆಯುಧಗಳನ್ನು ಸೊಂಟಕ್ಕೆ ಕಟ್ಟಿಕೊಳ್ಳಿರಿ!” ಎಂದು ಹೇಳಿದನು. ದಾವೀದನು ಮತ್ತು ಅವನ ಜನರು ಆಯುಧಗಳನ್ನು ಕಟ್ಟಿಕೊಂಡರು. ದಾವೀದನ ಸಂಗಡ ಸುಮಾರು ನಾನೂರು ಜನರು ಹೋದರು; ಇನ್ನೂರು ಜನರು ಸರಕುಗಳ ಬಳಿಯಲ್ಲಿ ಉಳಿದುಕೊಂಡರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ತನ್ನ ಜನರಿಗೆ “ಕತ್ತಿಯನ್ನು ಸೊಂಟಕ್ಕೆ ಕಟ್ಟಿಕೊಳ್ಳಿರಿ” ಎಂದು ಆಜ್ಞಾಪಿಸಿದನು. ಅವರೆಲ್ಲರು ಕಟ್ಟಿಕೊಂಡರು. ದಾವೀದನೂ ಸೊಂಟಕ್ಕೆ ಕತ್ತಿಯನ್ನು ಕಟ್ಟಿಕೊಂಡನು. ಹೆಚ್ಚುಕಡಿಮೆ ನಾನೂರು ಮಂದಿ ದಾವೀದನ ಜೊತೆಯಲ್ಲಿ ಹೋದರು. ಇನ್ನೂರು ಮಂದಿ ಸಾಮಾನುಗಳ ಬಳಿಯಲ್ಲಿ ಇದ್ದರು.
Kannada BSI Bible 2016
ದಾವೀದನು ತನ್ನ ಮನುಷ್ಯ ರಿಗೆ--ನೀವು ಒಬ್ಬೊಬ್ಬನು ತನ್ನ ಕತ್ತಿಯನ್ನು ಸೊಂಟಕ್ಕೆ ಕಟ್ಟಿಕೊಳ್ಳಿರಿ ಅಂದನು. ಪ್ರತಿಯೊಬ್ಬನು ತನ್ನ ಕತ್ತಿಯನ್ನು ಸೊಂಟಕ್ಕೆ ಕಟ್ಟಿಕೊಂಡನು; ಹಾಗೆಯೇ ದಾವೀದನು ತನ್ನ ಕತ್ತಿಯನ್ನು ಸೊಂಟಕ್ಕೆ ಕಟ್ಟಿಕೊಂಡನು. ದಾವೀದನ ಹಿಂದೆ ಹೆಚ್ಚು ಕಡಿಮೆ ನಾನೂರು ಮಂದಿ ಹೋದರು; ಆದರೆ ಇನ್ನೂರು ಮಂದಿ ಸಾಮಗ್ರಿಗಳ ಬಳಿಯಲ್ಲಿ ನಿಂತರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ತನ್ನ ಜನರಿಗೆ - ಕತ್ತಿಯನ್ನು ಸೊಂಟಕ್ಕೆ ಕಟ್ಟಿಕೊಳ್ಳಿರಿ ಎಂದು ಆಜ್ಞಾಪಿಸಿದನು; ಅವರೆಲ್ಲರೂ ಕಟ್ಟಿಕೊಂಡರು. ದಾವೀದನೂ ಕಟ್ಟಿಕೊಂಡನು. ಹೆಚ್ಚುಕಡಿಮೆ ನಾನೂರು ಮಂದಿ ದಾವೀದನ ಜೊತೆಯಲ್ಲಿ ಹೋದರು; ಇನ್ನೂರು ಮಂದಿ ಸಾಮಾನುಗಳ ಬಳಿಯಲ್ಲಿ ಇದ್ದರು.
Kannada Bible (KNCL) BSI 2016
ಆಗ ದಾವೀದನು ತನ್ನ ಜನರಿಗೆ, “ಕತ್ತಿಯನ್ನು ಸೊಂಟಕ್ಕೆ ಕಟ್ಟಿಕೊಳ್ಳಿ,” ಎಂದು ಆಜ್ಞಾಪಿಸಿದನು; ಅವರೆಲ್ಲರೂ ಕಟ್ಟಿಕೊಂಡರು. ದಾವೀದನೂ ಕಟ್ಟಿಕೊಂಡನು. ಹೆಚ್ಚುಕಡಿಮೆ ನಾನೂರುಮಂದಿ ದಾವೀದನ ಜೊತೆಯಲ್ಲಿ ಹೋದರು; ಇನ್ನೂರುಮಂದಿ ಸಾಮಾಗ್ರಿಗಳನ್ನು ಕಾಯುತ್ತಾ ಅಲ್ಲೇ ಇದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ದಾವೀದನು ತನ್ನ ಜನರಿಗೆ, “ನಿಮ್ಮಲ್ಲಿ ಒಬ್ಬೊಬ್ಬನೂ ನಿಮ್ಮ ಖಡ್ಗವನ್ನು ಸೊಂಟಕ್ಕೆ ಕಟ್ಟಿಕೊಳ್ಳಿರಿ,” ಎಂದನು. ಪ್ರತಿಯೊಬ್ಬನೂ ತನ್ನ ಖಡ್ಗವನ್ನು ಸೊಂಟಕ್ಕೆ ಕಟ್ಟಿಕೊಂಡನು. ಹಾಗೆಯೇ ದಾವೀದನೂ ತನ್ನ ಖಡ್ಗವನ್ನು ಸೊಂಟಕ್ಕೆ ಕಟ್ಟಿಕೊಂಡನು. ದಾವೀದನ ಹಿಂದೆ ಹೆಚ್ಚು ಕಡಿಮೆ ನಾನೂರು ಮಂದಿ ಹೋದರು. ಇನ್ನೂರು ಮಂದಿ ಸಲಕರಣೆಗಳ ಬಳಿಯಲ್ಲಿ ನಿಂತರು.