1 Samuel 25:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾಬಾಲನ ಸೇವಕನೊಬ್ಬನು ನಾಬಾಲನ ಹೆಂಡತಿಯಾದ ಅಬೀಗೈಲಳಿಗೆ, “ನಮ್ಮ ಒಡೆಯನನ್ನು ವಂದಿಸಲು ದಾವೀದನು ಅರಣ್ಯದಿಂದ ಸಂದೇಶಕರನ್ನು ಕಳುಹಿಸಿದ್ದನು. ಆದರೆ ನಾಬಾಲನು ದಾವೀದನ ಸಂದೇಶಕರೊಂದಿಗೆ ಕೀಳಾಗಿ ನಡೆದುಕೊಂಡನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾಬಾಲನ ಸೇವಕರಲ್ಲಿ ಒಬ್ಬನು ಅವನ ಹೆಂಡತಿಯಾದ ಅಬೀಗೈಲಳಿಗೆ, “ಮರುಭೂಮಿಯಲ್ಲಿರುವ ದಾವೀದನು ನಮ್ಮ ಧಣಿಯ ಕ್ಷೇಮವಿಚಾರಕ್ಕಾಗಿ ದೂತರನ್ನು ಕಳುಹಿಸಲು, ಧಣಿಯು ಬಂದವರನ್ನು ಬೈದನು ಕಳುಹಿಸಿದನು.
Kannada BSI Bible 2016
ಆಗ ಕೆಲಸದವರಲ್ಲಿ ಯೌವನಸ್ಥನೊಬ್ಬನು ನಾಬಾಲನ ಹೆಂಡತಿಯಾದ ಅಬೀಗೈಲಳಿಗೆ--ಇಗೋ, ನಮ್ಮ ಯಜಮಾನನನ್ನು ವಂದಿಸಲು ದಾವೀದನು ಅರಣ್ಯದಿಂದ ದೂತರನ್ನು ಕಳುಹಿಸಿದನು; ಆದರೆ ಅವನು ಅವರನ್ನು ನಿಂದಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾಬಾಲನ ಸೇವಕರಲ್ಲೊಬ್ಬನು ಅವನ ಹೆಂಡತಿಯಾದ ಅಬೀಗೈಲಳಿಗೆ - ಅರಣ್ಯದಲ್ಲಿರುವ ದಾವೀದನು ನಮ್ಮ ದಣಿಯ ಕ್ಷೇಮವಿಚಾರಕ್ಕಾಗಿ ದೂತರನ್ನು ಕಳುಹಿಸಲು ದಣಿಯು ಬಂದವರ ಮೇಲೆ ಬಿದ್ದು ಬೈದನು.
Kannada Bible (KNCL) BSI 2016
ನಾಬಾಲನ ಸೇವಕರಲ್ಲೊಬ್ಬನು ಅವನ ಹೆಂಡತಿಯಾದ ಅಬೀಗೈಲಳಿಗೆ, “ಮರುಭೂಮಿಯಲ್ಲಿರುವ ದಾವೀದನು ನಮ್ಮ ದಣಿಯ ಕ್ಷೇಮ ವಿಚಾರಕ್ಕಾಗಿ ದೂತರನ್ನು ಕಳುಹಿಸಿದ್ದನು. ದಣಿಯವರು ಬಂದವರನ್ನು ಚೆನ್ನಾಗಿ ಬೈದು ಕಳಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಕೆಲಸದವರಲ್ಲಿ ಯುವಕನಾದವನೊಬ್ಬನು ನಾಬಾಲನ ಹೆಂಡತಿಯಾದ ಅಬೀಗೈಲಳಿಗೆ, “ನಮ್ಮ ಯಜಮಾನನನ್ನು ವಂದಿಸಲು ದಾವೀದನು ಮರುಭೂಮಿಯಿಂದ ದೂತರನ್ನು ಕಳುಹಿಸಿದನು.