1 Samuel 25:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮಾವೋನ್‌ನಲ್ಲಿ ಒಬ್ಬ ಮನುಷ್ಯನು ವಾಸಿಸುತ್ತಿದ್ದನು. ಈ ಮನುಷ್ಯನು ಬಹಳ ಶ್ರೀಮಂತನಾಗಿದ್ದನು. ಅವನು ಮೂರು ಸಾವಿರ ಕುರಿಗಳನ್ನೂ ಒಂದು ಸಾವಿರ ಆಡುಗಳನ್ನೂ ಹೊಂದಿದ್ದನು. ಅವನು ಕರ್ಮೆಲಿನಲ್ಲಿ ವ್ಯಾಪಾರ ಮಾಡುತ್ತಿದ್ದನು. ಒಮ್ಮೆ ಅವನು ಕುರಿಗಳ ತುಪ್ಪಟವನ್ನು ಕತ್ತರಿಸುವುದಕ್ಕಾಗಿ ಕರ್ಮೆಲಿಗೆ ಹೋಗಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕರ್ಮೆಲಿನಲ್ಲಿ ಸ್ವಂತ ಸೊತ್ತು ಹೊಂದಿದ್ದ ಒಬ್ಬ ಮನುಷ್ಯನಿದ್ದನು. ಅವನು ಮಾವೋನಿನಲ್ಲಿ ವಾಸಿಸುತ್ತಿದ್ದನು. ಅವನ ಹೆಸರು ನಾಬಾಲ್.
Kannada BSI Bible 2016
ಕರ್ಮೆಲಿನಲ್ಲಿ ಸ್ವಾಸ್ತ್ಯಗಳಿರುವ ಮಾವೋನಿನ ವನಾದ ಒಬ್ಬ ಮನುಷ್ಯನಿದ್ದನು. ಆ ಮನುಷ್ಯನು ಬಹು ದೊಡ್ಡವನಾಗಿದ್ದನು; ಅವನಿಗೆ ಮೂರು ಸಾವಿರ ಕುರಿಗಳೂ ಸಾವಿರ ಮೇಕೆಗಳೂ ಇದ್ದವು. ಅವನು ಕರ್ಮೆಲಿನಲ್ಲಿ ತನ್ನ ಕುರಿಗಳ ಉಣ್ಣೆಯನ್ನು ಕತ್ತರಿಸುತ್ತಿ ದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕರ್ಮೆಲಿನಲ್ಲಿ ಸ್ವಾಸ್ತ್ಯವಿದ್ದಂಥ ಒಬ್ಬ ಮನುಷ್ಯನು ಮಾವೋನಿನಲ್ಲಿ ವಾಸಿಸುತ್ತಿದ್ದನು; ಅವನ ಹೆಸರು ನಾಬಾಲ;
Kannada Bible (KNCL) BSI 2016
ಕರ್ಮೆಲಿನಲ್ಲಿ ಸ್ವಂತ ಸೊತ್ತು ಪಡೆದಿದ್ದ ಒಬ್ಬ ಮನುಷ್ಯ ಮಾವೋನಿನಲ್ಲಿ ವಾಸಿಸುತ್ತಿದ್ದನು. ಅವನ ಹೆಸರು ನಾಬಾಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಕರ್ಮೆಲಿನಲ್ಲಿ ಸೊತ್ತುಗಳಿರುವ ಮಾವೋನಿನ ಒಬ್ಬ ಮನುಷ್ಯನಿದ್ದನು. ಅವನು ಬಹು ಸಿರಿವಂತನಾಗಿದ್ದನು. ಅವನಿಗೆ ಮೂರು ಸಾವಿರ ಕುರಿಗಳೂ ಸಾವಿರ ಮೇಕೆಗಳೂ ಇದ್ದವು.