1 Samuel 25:21 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಬೀಗೈಲಳನ್ನು ಸಂಧಿಸುವುದಕ್ಕೆ ಮುಂಚೆ ದಾವೀದನು, “ನಾಬಾಲನ ಆಸ್ತಿಯನ್ನು ನಾನು ಅರಣ್ಯದಲ್ಲಿ ಕಾಪಾಡಿದೆನು. ಅವನ ಕುರಿಗಳಲ್ಲಿ ಒಂದೂ ತಪ್ಪಿಸಿಕೊಳ್ಳದಂತೆ ನಾನು ನೋಡಿಕೊಂಡೆನು. ನಾನು ಅವನಿಂದ ಏನನ್ನೂ ಅಪೇಕ್ಷಿಸದೆ ಇದನ್ನೆಲ್ಲ ಮಾಡಿದೆ! ನಾನು ಅವನಿಗೆ ಒಳ್ಳೆಯದನ್ನು ಮಾಡಿದೆ; ಆದರೆ ಅವನು ನನಗೆ ಕೆಟ್ಟವನಾದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಷ್ಟರಲ್ಲಿ ದಾವೀದನು, “ನಾನು ಮರುಭೂಮಿಯಲ್ಲಿ ಈ ಮನುಷ್ಯನ ಆಸ್ತಿಯಲ್ಲಿ ಏನೂ ನಷ್ಟವಾಗದಂತೆ ಕಾಪಾಡಿದ್ದು ವ್ಯರ್ಥವಾಯಿತು. ಅವನು ಉಪಕಾರಕ್ಕೆ ಅಪಕಾರ ಮಾಡಿದನು.
Kannada BSI Bible 2016
ಆದರೆ ದಾವೀದನು--ಅಡವಿ ಯಲ್ಲಿದ್ದ ಇವನ ಎಲ್ಲಾದರಲ್ಲಿ ಒಂದಾದರೂ ಕಳಕೊಳ್ಳದ ಹಾಗೆ ನಾನು ಕಾಪಾಡಿದ್ದು ವ್ಯರ್ಥವಾಯಿತು. ಆದರೆ ನಾನು ಮಾಡಿದ ಉಪಕಾರಕ್ಕೆ ಬದಲಾಗಿ ಈಗ ಅವನು ನನಗೆ ಅಪಕಾರ ಮಾಡಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಷ್ಟರಲ್ಲಿ ದಾವೀದನು - ನಾನು ಅಡವಿಯಲ್ಲಿ ಈ ಮನುಷ್ಯನ ಆಸ್ತಿಯಲ್ಲಿ ಏನೂ ನಷ್ಟವಾಗದಂತೆ ಕಾಪಾಡಿದ್ದು ವ್ಯರ್ಥವಾಯಿತು. ಅವನು ಉಪಕಾರಕ್ಕೆ ಅಪಕಾರಮಾಡಿದನು.
Kannada Bible (KNCL) BSI 2016
ಅಷ್ಟರಲ್ಲಿ ದಾವೀದನು, “ನಾನು ಅಡವಿಯಲ್ಲಿ ಈ ಮನುಷ್ಯನ ಆಸ್ತಿಯಲ್ಲಿ ಏನೂ ನಷ್ಟವಾಗದಂತೆ ಕಾಪಾಡಿದ್ದು ವ್ಯರ್ಥ ಆಯಿತು. ಅವನು ಉಪಕಾರಕ್ಕೆ ಅಪಕಾರ ಮಾಡಿದ್ದಾನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಷ್ಟರಲ್ಲಿ ದಾವೀದನು ತನ್ನ ಜನರಿಗೆ, “ಅಡವಿಯಲ್ಲಿದ್ದ ಇವನ ಆಸ್ತಿಯಲ್ಲಿ ಏನೂ ನಷ್ಟವಾಗದಂತೆ ನಾನು ಕಾಪಾಡಿದ್ದು ವ್ಯರ್ಥವಾಯಿತು. ಅವನು ನಾನು ಮಾಡಿದ ಉಪಕಾರಕ್ಕೆ ಅಪಕಾರ ಮಾಡಿದ್ದಾನೆ.