1 Samuel 25:35 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಂತರ ದಾವೀದನು ಅಬೀಗೈಲಳ ಕೊಡುಗೆಗಳನ್ನು ಸ್ವೀಕರಿಸಿ ಆಕೆಗೆ, “ಶಾಂತಿಯಿಂದ ಮನೆಗೆ ಹಿಂದಿರುಗು. ನಾನು ನಿನ್ನ ಮಾತುಗಳನ್ನು ಆಲಿಸಿದ್ದೇನೆ ಮತ್ತು ನೀನು ಕೇಳಿಕೊಂಡಿರುವುದನ್ನು ನೆರವೇರಿಸುತ್ತೇನೆ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಆಕೆ ತಂದ ಪದಾರ್ಥಗಳನ್ನು ತೆಗೆದುಕೊಂಡು ಆಕೆಗೆ “ಸಮಾಧಾನದಿಂದ ಮನೆಗೆ ಹೋಗು, ನಿನ್ನನ್ನು ನೋಡಿ ನಿನ್ನ ವಿಜ್ಞಾಪನೆಯನ್ನು ಲಾಲಿಸಿದ್ದೇನೆ” ಅಂದನು.
Kannada BSI Bible 2016
ಅವಳು ತನಗೆ ತಂದ ದ್ದನ್ನು ದಾವೀದನು ಅವಳ ಕೈಯಿಂದ ತಕ್ಕೊಂಡು ಅವಳಿಗೆ--ನೀನು ಸಮಾಧಾನವಾಗಿ ನಿನ್ನ ಮನೆಗೆ ಹೋಗು; ಇಗೋ, ನಾನು ನಿನ್ನ ಮಾತನ್ನು ಕೇಳಿ ನಿನ್ನ ವಿಜ್ಞಾಪನೆಯನ್ನು ಅಂಗೀಕರಿಸಿದೆನು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಕೆ ತಂದ ಪದಾರ್ಥಗಳನ್ನು ತೆಗೆದುಕೊಂಡು ಆಕೆಗೆ - ಸಮಾಧಾನದಿಂದ ಮನೆಗೆ ಹೋಗು; ನಿನ್ನನ್ನು ನೋಡಿ ನಿನ್ನ ವಿಜ್ಞಾಪನೆಯನ್ನು ಲಾಲಿಸಿದ್ದೇನೆ ಅಂದನು.
Kannada Bible (KNCL) BSI 2016
ಆಕೆ ತಂದ ಪದಾರ್ಥಗಳನ್ನು ತೆಗೆದುಕೊಂಡು ಆಕೆಗೆ, “ಸಮಾಧಾನದಿಂದ ಮನೆಗೆ ಹೋಗು; ನಿನ್ನನ್ನು ಕಟಾಕ್ಷಿಸಿ, ನಿನ್ನ ವಿಜ್ಞಾಪನೆಯನ್ನು ಆಲಿಸಿದ್ದೇನೆ,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವಳು ತನಗೆ ತಂದದ್ದನ್ನು ದಾವೀದನು ತೆಗೆದುಕೊಂಡು ಅವಳಿಗೆ, “ನೀನು ಸಮಾಧಾನವಾಗಿ ನಿನ್ನ ಮನೆಗೆ ಹೋಗು; ನಾನು ನಿನ್ನ ಮಾತನ್ನು ಕೇಳಿ ನಿನ್ನ ಮುಖ ದಾಕ್ಷಿಣ್ಯವನ್ನು ನೋಡಿದೆನು,” ಎಂದನು.