1 Samuel 25:39 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾಬಾಲನು ಸತ್ತನೆಂಬುದು ದಾವೀದನಿಗೆ ತಿಳಿಯಿತು. ದಾವೀದನು, “ಯೆಹೋವನಿಗೆ ಸ್ತೋತ್ರವಾಗಲಿ! ನಾಬಾಲನು ನನ್ನ ಬಗ್ಗೆ ಕೆಟ್ಟಮಾತುಗಳನ್ನು ಆಡಿದನು, ಆದರೆ ಯೆಹೋವನು ನನಗೆ ಸಹಾಯ ಮಾಡಿದನು. ನಾನು ತಪ್ಪುಮಾಡದಂತೆ ಯೆಹೋವನು ನನ್ನನ್ನು ತಡೆದನು. ನಾಬಾಲನು ಕೆಟ್ಟದನ್ನು ಮಾಡಿದ್ದರಿಂದ ಯೆಹೋವನು ಅವನಿಗೆ ಸಾವನ್ನು ಬರಮಾಡಿದನು” ಎಂದು ಹೇಳಿದನು. ನಂತರ ದಾವೀದನು ಅಬೀಗೈಲಳಿಗೆ ಒಂದು ಸಂದೇಶವನ್ನು ಕಳುಹಿಸಿ ತನ್ನ ಹೆಂಡತಿಯಾಗಬೇಕೆಂದು ಕೇಳಿಕೊಂಡನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾಬಾಲನು ಸತ್ತನೆಂಬ ವರ್ತಮಾನವು ದಾವೀದನು ಕೇಳಿ, “ನನಗೆ ಅಪಮಾನ ಮಾಡಿದ ನಾಬಾಲನಿಗೆ ಮುಯ್ಯಿತೀರಿಸಿದಂತ ಯೆಹೋವನಿಗೆ ಸ್ತೋತ್ರವಾಗಲಿ. ಆತನು ನನ್ನನ್ನು ಕೆಟ್ಟತನಕ್ಕೆ ದೂರಮಾಡಿ ನಾಬಾಲನ ಕೆಟ್ಟತನವನ್ನು ಅವನ ತಲೆಯ ಮೇಲೆಯೇ ಹೊರಿಸಿದನಲ್ಲಾ” ಎಂದು ಹೇಳಿದನು. ಅನಂತರ ಅವನು ಅಬೀಗೈಲಳನ್ನು ತನಗೆ ಹೆಂಡತಿಯಾಗಿರಬೇಕೆಂದು ದೂತರ ಮೂಲಕ ಹೇಳಿ ಕಳುಹಿಸಿದನು.
Kannada BSI Bible 2016
ನಾಬಾಲನು ಸತ್ತನೆಂದು ದಾವೀದನು ಕೇಳಿದಾಗ ನನ್ನ ನಿಂದೆಯ ವ್ಯಾಜ್ಯವನ್ನು ನಾಬಾಲನಿಂದ ವಿಚಾರಿಸಿ ತನ್ನ ಸೇವಕ ನನ್ನು ಕೇಡುಮಾಡಗೊಡದ ಹಾಗೆ ಆಟಂಕಿಸಿದ ಕರ್ತನು ಸ್ತುತಿ ಹೊಂದಲಿ; ಯಾಕಂದರೆ ಕರ್ತನು ನಾಬಾಲನ ಕೆಟ್ಟತನವನ್ನು ಅವನ ತಲೆಯ ಮೇಲೆ ಬರಮಾಡಿದನು ಅಂದನು. ದಾವೀದನು ಅಬೀಗೈಲ ಳನ್ನು ತನಗೆ ಹೆಂಡತಿಯಾಗಿ ತಕ್ಕೊಳ್ಳುವದಕ್ಕಾಗಿ ಅವಳ ಸಂಗಡ ಮಾತನಾಡ ಕಳುಹಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾಬಾಲನು ಸತ್ತನೆಂಬ ವರ್ತಮಾನವನ್ನು ದಾವೀದನು ಕೇಳಿ - ನನಗೆ ಅಪಮಾನ ಮಾಡಿದ ನಾಬಾಲನಿಗೆ ಮುಯ್ಯಿತೀರಿಸಿದಂಥ ಯೆಹೋವನಿಗೆ ಸ್ತೋತ್ರವಾಗಲಿ. ಆತನು ನನ್ನನ್ನು ಕೆಟ್ಟತನಕ್ಕೆ ದೂರಮಾಡಿ ನಾಬಾಲನ ಕೆಟ್ಟತನವನ್ನು ಅವನ ತಲೆಯ ಮೇಲೆಯೇ ಹೊರಿಸಿದನಲ್ಲಾ ಅಂದನು. ಅನಂತರ ಅವನು ಅಬೀಗೈಲಳು ತನಗೆ ಹೆಂಡತಿಯಾಗಬೇಕೆಂದು ದೂತರನ್ನು ಕಳುಹಿಸಿದನು;
Kannada Bible (KNCL) BSI 2016
ನಾಬಾಲನು ಸತ್ತನೆಂಬ ವರ್ತಮಾನವನ್ನು ದಾವೀದನು ಕೇಳಿದನು. “ನನಗೆ ಅಪಮಾನ ಮಾಡಿದ ನಾಬಾಲನಿಗೆ ಮುಯ್ಯಿ ತೀರಿಸಿದಂಥ ಸರ್ವೇಶ್ವರನಿಗೆ ಸ್ತೋತ್ರವಾಗಲಿ! ಅವರು ನನ್ನನ್ನು ಕೆಟ್ಟತನದಿಂದ ದೂರಮಾಡಿ ನಾಬಾಲನ ಕೆಟ್ಟತನವನ್ನು ಅವನ ತಲೆಯ ಮೇಲೆಯೇ ಹೊರಿಸಿದ್ದಾರೆ,” ಎಂದನು. ಅನಂತರ ಅವನು, ಅಬೀಗೈಲಳು ತನಗೆ ಹೆಂಡತಿಯಾಗಬೇಕೆಂದು ದೂತರನ್ನು ಕಳುಹಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾಬಾಲನು ಸತ್ತನೆಂದು ದಾವೀದನು ಕೇಳಿದಾಗ, “ನನ್ನ ನಿಂದೆಯ ವ್ಯಾಜ್ಯವನ್ನು ನಾಬಾಲನಿಂದ ವಿಚಾರಿಸಿ, ತನ್ನ ಸೇವಕನನ್ನು ಕೇಡು ಮಾಡಗೊಡದ ಹಾಗೆ ತಡೆದ ಯೆಹೋವ ದೇವರು ಸ್ತುತಿಹೊಂದಲಿ. ಏಕೆಂದರೆ ಯೆಹೋವ ದೇವರು ನಾಬಾಲನ ಕೆಟ್ಟತನವನ್ನು ಅವನ ತಲೆಯ ಮೇಲೆ ಬರಮಾಡಿದರು,” ಎಂದನು. ದಾವೀದನು ಅಬೀಗೈಲಳನ್ನು ತನಗೆ ಹೆಂಡತಿಯಾಗಿ ತೆಗೆದುಕೊಳ್ಳುವುದಕ್ಕಾಗಿ ಅವಳ ಸಂಗಡ ಮಾತನಾಡಲು ಸೇವಕರನ್ನು ಕಳುಹಿಸಿದನು.