1 Samuel 25:40 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದಾವೀದನ ಸೈನಿಕರು ಕರ್ಮೆಲಿಗೆ ಹೋಗಿ ಅಬೀಗೈಲಳಿಗೆ, “ದಾವೀದನು ನಿನ್ನನ್ನು ಕರೆತರಲು ಹೇಳಿದ್ದಾನೆ. ನಿನ್ನನ್ನು ತನ್ನ ಹೆಂಡತಿಯನ್ನಾಗಿ ಸ್ವೀಕರಿಸಿಕೊಳ್ಳಬೇಕೆಂಬುದು ದಾವೀದನ ಅಪೇಕ್ಷೆ” ಎಂದು ಹೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಕರ್ಮೆಲಿನಲ್ಲಿದ್ದ ಅಬೀಗೈಲಳ ಬಳಿಗೆ ಹೋಗಿ ಆಕೆಗೆ, “ದಾವೀದನು ನಿನ್ನನ್ನು ತನಗೆ ಹೆಂಡತಿಯಾಗಿರುವುದಕ್ಕೆ ಕರೆದುಕೊಂಡು ಬರಬೇಕೆಂದು ನಮ್ಮನ್ನು ಕಳುಹಿಸಿದ್ದಾನೆ” ಅಂದರು.
Kannada BSI Bible 2016
ದಾವೀದನ ಸೇವಕರು ಕರ್ಮೆಲಿನಲ್ಲಿರುವ ಅಬೀಗೈಲಳ ಬಳಿಗೆ ಬಂದಾಗ ಅವಳಿಗೆ--ದಾವೀದನು ನಿನ್ನನ್ನು ತನಗೆ ಹೆಂಡತಿಯಾಗಿ ತಕ್ಕೊಳ್ಳುವದಕ್ಕಾಗಿ ನಮ್ಮನ್ನು ನಿನ್ನ ಬಳಿಗೆ ಕಳುಹಿಸಿದನೆಂದು ಹೇಳಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಕರ್ಮೆಲಿನಲ್ಲಿದ್ದ ಅಬೀಗೈಲಳ ಬಳಿಗೆ ಹೋಗಿ ಆಕೆಗೆ - ದಾವೀದನು ನಿನ್ನನ್ನು ತನಗೆ ಹೆಂಡತಿಯಾಗುವದಕ್ಕೆ ಕರಕೊಂಡು ಬರಬೇಕೆಂದು ನಮ್ಮನ್ನು ಕಳುಹಿಸಿದ್ದಾನೆ ಅಂದಾಗ
Kannada Bible (KNCL) BSI 2016
ಅವರು ಕರ್ಮೆಲಿನಲ್ಲಿದ್ದ ಅಬೀಗೈಲಳ ಬಳಿಗೆ ಹೋಗಿ ಆಕೆಗೆ, “ದಾವೀದ ಅವರು ನಿನ್ನನ್ನು ತಮಗೆ ಹೆಂಡತಿಯಾಗುವುದಕ್ಕೆ ಕರೆದುಕೊಂಡು ಬರಬೇಕೆಂದು ನಮ್ಮನ್ನು ಕಳುಹಿಸಿದ್ದಾರೆ,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದಾವೀದನ ಸೇವಕರು ಕರ್ಮೆಲಿನಲ್ಲಿರುವ ಅಬೀಗೈಲಳ ಬಳಿಗೆ ಬಂದಾಗ ಅವಳಿಗೆ, “ದಾವೀದನು ನಿನ್ನನ್ನು ತನಗೆ ಹೆಂಡತಿಯಾಗಿ ತೆಗೆದುಕೊಳ್ಳುವುದಕ್ಕಾಗಿ ನಮ್ಮನ್ನು ನಿನ್ನ ಬಳಿಗೆ ಕಳುಹಿಸಿದನು,” ಎಂದು ಹೇಳಿದರು.