1 Samuel 25:42 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅಬೀಗೈಲಳು ಬೇಗನೆ ಒಂದು ಕತ್ತೆಯ ಮೇಲೇರಿ, ದಾವೀದನ ಸಂದೇಶಕರೊಂದಿಗೆ ಹೊರಟುಹೋದಳು. ಅಬೀಗೈಲಳು ಐದು ಜನ ಸೇವಕಿಯರನ್ನು ತನ್ನೊಂದಿಗೆ ಕರೆದುಕೊಂಡು ಹೋದಳು. ಅವಳು ದಾವೀದನ ಹೆಂಡತಿಯಾದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬೇಗನೇ ಒಂದು ಕತ್ತೆಯನ್ನು ಹತ್ತಿ, ತನ್ನ ಐದು ಮಂದಿ ದಾಸಿಯರ ಸಹಿತವಾಗಿ ದಾವೀದನ ಸೇವಕರ ಜೊತೆಯಲ್ಲಿ ಹೊರಟು ಹೋಗಿ ಅವನ ಹೆಂಡತಿಯಾದಳು.
Kannada BSI Bible 2016
ಅಬೀಗೈಲಳು ಬೇಗನೆ ಎದ್ದು ಕತ್ತೆಯ ಮೇಲೆ ಹತ್ತಿಕೊಂಡು ತನ್ನ ಸಂಗಡ ಇರುವ ಐದು ಮಂದಿ ದಾಸಿಯರನ್ನು ಕರಕೊಂಡು ದಾವೀದನ ಸೇವಕರ ಹಿಂದೆ ಹೋಗಿ ಅವನಿಗೆ ಹೆಂಡತಿ ಯಾದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬೇಗನೆ ಒಂದು ಕತ್ತೆಯನ್ನು ಹತ್ತಿ ತನ್ನ ಐದು ಮಂದಿ ದಾಸಿಯರ ಸಹಿತವಾಗಿ ದಾವೀದನ ಸೇವಕರ ಜೊತೆಯಲ್ಲಿ ಹೊರಟುಹೋಗಿ ಅವನ ಹೆಂಡತಿಯಾದಳು.
Kannada Bible (KNCL) BSI 2016
ಅಲ್ಲದೆ ಬೇಗನೆ ಒಂದು ಕತ್ತೆಯನ್ನು ಹತ್ತಿ ತನ್ನ ಐದುಮಂದಿ ದಾಸಿಯರ ಸಹಿತವಾಗಿ ದಾವೀದನ ಸೇವಕರ ಜೊತೆಯಲ್ಲೆ ಹೊರಟುಹೋಗಿ ಅವನ ಹೆಂಡತಿಯಾದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಬೀಗೈಲಳು ತ್ವರೆಯಾಗಿ ಎದ್ದು ಕತ್ತೆಯ ಮೇಲೆ ಹತ್ತಿಕೊಂಡು, ತನ್ನ ಸಂಗಡ ಇರುವ ಐದು ಮಂದಿ ದಾಸಿಯರನ್ನು ಕರೆದುಕೊಂಡು ದಾವೀದನ ಸೇವಕರ ಹಿಂದೆ ಹೋಗಿ, ಅವನಿಗೆ ಹೆಂಡತಿಯಾದಳು.