1 Samuel 25:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀನು ನಿನ್ನ ಕುರಿಗಳ ತುಪ್ಪಟವನ್ನು ಕತ್ತರಿಸುತ್ತಿರುವುದು ನನಗೆ ತಿಳಿಯಿತು. ನಿನ್ನ ಕುರುಬರು ನಮ್ಮೊಡನೆ ಸ್ವಲ್ಪ ಸಮಯವಿದ್ದರು. ನಾವು ಅವರಿಗೆ ಕೆಟ್ಟದ್ದೇನನ್ನೂ ಮಾಡಲಿಲ್ಲ. ಅವರು ಕರ್ಮೆಲಿನಲ್ಲಿ ಸ್ವಲ್ಪ ಸಮಯವಿದ್ದಾಗ ನಾವು ಅವರಿಂದ ಏನನ್ನೂ ತೆಗೆದುಕೊಳ್ಳಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನ ಕುರಿಗಳ ಉಣ್ಣೆಯನ್ನು ಕತ್ತರಿಸುವ ಕೆಲಸವು ನಡೆಯುತ್ತದೆಂಬ ವರ್ತಮಾನವನ್ನು ಕೇಳಿದ್ದೇನೆ. ನಿನ್ನ ಕುರುಬರು ನಮ್ಮೊಡನೆ ಕರ್ಮೆಲಿನಲ್ಲಿದ್ದ ಕಾಲವೆಲ್ಲಾ ನಾವು ಅವರನ್ನು ತೊಂದರೆಪಡಿಸಲಿಲ್ಲ. ಅವರಿಗೇನೂ ನಷ್ಟವಾಗಲಿಲ್ಲ.
Kannada BSI Bible 2016
ನಿನಗೆ ಕುರಿಗಳ ಉಣ್ಣೆಯನ್ನು ಕತ್ತರಿಸುವವರು ಇದ್ದಾರೆಂದು ನಾನು ಕೇಳಿದ್ದೇನೆ. ಆದರೆ ನಮ್ಮ ಸಂಗಡವಿದ್ದ ನಿನ್ನ ಕುರಿ ಕಾಯುವವರು ಕರ್ಮೆಲಿ ನಲ್ಲಿ ಇದ್ದ ದಿವಸಗಳೆಲ್ಲಾ ನಾವು ಅವರನ್ನು ತೊಂದರೆ ಪಡಿಸಲಿಲ್ಲ; ಅವರು ಒಂದನ್ನಾದರೂ ಕಳಕೊಳ್ಳಲಿಲ್ಲ;
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನ ಕುರಿಗಳ ಉಣ್ಣೆಯನ್ನು ಕತ್ತರಿಸುವ ಕೆಲಸವು ನಡೆಯುತ್ತದೆಂಬ ವರ್ತಮಾನವನ್ನು ಕೇಳಿದ್ದೇನೆ. ನಿನ್ನ ಕುರುಬರು ನಮ್ಮೊಡನೆ ಕರ್ಮೆಲಿನಲ್ಲಿದ್ದ ಕಾಲವೆಲ್ಲಾ ನಾವು ಅವರನ್ನು ತೊಂದರೆಪಡಿಸಲಿಲ್ಲ; ಅವರಿಗೇನೂ ನಷ್ಟವಾಗಲಿಲ್ಲ.
Kannada Bible (KNCL) BSI 2016
ನಿನ್ನ ಕುರಿಗಳ ಉಣ್ಣೆಯನ್ನು ಕತ್ತರಿಸುವ ಕೆಲಸ ನಡೆಯುತ್ತಿದೆಯೆಂಬ ಸುದ್ದಿಯನ್ನು ಕೇಳಿದ್ದೇನೆ. ನಿನ್ನ ಕುರುಬರು ನಮ್ಮೊಡನೆ ಕರ್ಮೆಲಿನಲ್ಲಿದ್ದ ಕಾಲವೆಲ್ಲಾ ನಾವು ಅವರನ್ನು ತೊಂದರೆಪಡಿಸಲಿಲ್ಲ; ಅವರಿಗೇನೂ ನಷ್ಟಮಾಡಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಈಗ ನಿನಗೆ ಕುರಿಗಳ ಉಣ್ಣೆ ಕತ್ತರಿಸುವವರು ಉಂಟೆಂದು ಕೇಳಿದ್ದೇನೆ. ಆದರೆ ನಮ್ಮ ಸಂಗಡವಿದ್ದ ನಿನ್ನ ಕುರಿಕಾಯುವವರು ಕರ್ಮೆಲಿನಲ್ಲಿದ್ದ ದಿವಸಗಳೆಲ್ಲಾ ನಾವು ಅವರಿಗೆ ತೊಂದರೆಪಡಿಸಲಿಲ್ಲ. ಅವರು ಒಂದಾದರೂ ಕಳೆದುಕೊಳ್ಳಲಿಲ್ಲ.