1 Samuel 25:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಿನ್ನ ಸೇವಕರನ್ನು ಕೇಳು, ಇದು ನಿಜವೆಂಬುದನ್ನು ಅವರು ನಿನಗೆ ತಿಳಿಸುತ್ತಾರೆ. ನನ್ನ ಯುವಕರ ಬಗ್ಗೆ ದಯವಿಟ್ಟು ದಯಾಳುವಾಗಿರು. ಈ ಶುಭಸಂದರ್ಭದಲ್ಲಿ ನಾವು ನಿಮ್ಮ ಹತ್ತಿರಕ್ಕೆ ಬರುತ್ತೇವೆ. ಸ್ನೇಹಿತನಾದ ದಾವೀದನಿಗಾಗಿ ನಿನಗೆ ಸಾಧ್ಯವಿದ್ದಷ್ಟನ್ನು ದಯವಿಟ್ಟು ಈ ಯುವಕರಿಗೆ ಕೊಡು” ಎಂದು ಹೇಳಿ ಕಳುಹಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನ ಆಳುಗಳನ್ನು ಕೇಳು, ಅವರೇ ಹೇಳುವರು. ಹೀಗಿರುವುದರಿಂದ ಶುಭಕಾಲದಲ್ಲಿ ನಿನ್ನ ಬಳಿಗೆ ಬಂದಿರುವ ನನ್ನ ಸೇವಕರಿಗೆ ನಿನ್ನ ದೃಷ್ಟಿಯಲ್ಲಿ ದಯೆದೊರಕಲಿ. ಕೃಪೆಮಾಡಿ ನಿನ್ನ ಸೇವಕರಿಗೂ ಮಗನಾದ ದಾವೀದನಿಗೂ ನಿನಗಿರುವುದರಲ್ಲಿ ಕೊಡು’ ಎಂದು ಹೇಳಿರಿ” ಎಂದು ಅವರನ್ನು ಕಳುಹಿಸಿದನು.
Kannada BSI Bible 2016
ನಿನ್ನ ಯೌವನಸ್ಥರನ್ನು ಕೇಳು, ಅವರೇ ನಿನಗೆ ಹೇಳುವರು. ಆದದರಿಂದ ಈಗ ಈ ಯುವಕರಿಗೆ ನಿನ್ನ ದೃಷ್ಟಿಯಲ್ಲಿ ದಯೆದೊರಕಲಿ; ಒಳ್ಳೇ ದಿವಸದಲ್ಲಿ ನಾವು ಬಂದೆವು. ನಿನ್ನ ಕೈಯಲ್ಲಿ ದೊರಕುವದನ್ನು ನಿನ್ನ ಸೇವಕರಿಗೂ ನಿನ್ನ ಕುಮಾರನಾದ ದಾವೀದನಿಗೂ ದಯಪಾಲಿಸು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನ ಆಳುಗಳನ್ನು ಕೇಳು, ಅವರೇ ಹೇಳುವರು. ಹೀಗಿರುವದರಿಂದ ಶುಭಕಾಲದಲ್ಲಿ ನಿನ್ನ ಬಳಿಗೆ ಬಂದಿರುವ ನನ್ನ ಸೇವಕರಿಗೆ ನಿನ್ನ ದೃಷ್ಟಿಯಲ್ಲಿ ದಯೆದೊರಕಲಿ. ಕೃಪೆಮಾಡಿ ನಿನ್ನ ಸೇವಕರಿಗೂ ಮಗನಾದ ದಾವೀದನಿಗೂ ನಿನಗಿರುವದರಲ್ಲಿ ಕೊಡು ಎಂದು ಹೇಳಿರಿ ಅಂದು ಅವರನ್ನು ಕಳುಹಿಸಿದನು.
Kannada Bible (KNCL) BSI 2016
ನಿನ್ನ ಆಳುಗ಼ಳನ್ನೇ ಕೇಳು, ಅವರೇ ಹೇಳುವರು. ಹೀಗಿರುವುದರಿಂದ ಶುಭಕಾಲದಲ್ಲಿ ನಿನ್ನ ಬಳಿಗೆ ಬಂದಿರುವ ನನ್ನ ಸೇವಕರಿಗೆ ನಿನ್ನ ದೃಷ್ಟಿಯಲ್ಲಿ ದಯೆ ದೊರಕಲಿ. ಕೃಪೆಮಾಡಿ ನಿನ್ನ ಸೇವಕರಿಗೂ ಮಗನಾದ ದಾವೀದನಿಗೂ ನಿನಗಿರುವುದರಲ್ಲಿ ಸಾಧ್ಯವಾದುದ್ದನ್ನು ಕೊಡು,’ ಎಂದು ಅವನಿಗೆ ಹೇಳಿರಿ,” ಎಂದು ಅವರನ್ನು ಕಳುಹಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿನ್ನ ಸೇವಕರನ್ನು ಕೇಳು. ಅವರು ನಿನಗೆ ಹೇಳುವರು. ಆದ್ದರಿಂದ ಈಗ ಈ ಯುವಕರಿಗೆ ನಿನ್ನ ದೃಷ್ಟಿಯಲ್ಲಿ ದಯೆ ದೊರಕಲಿ. ಏಕೆಂದರೆ ಒಳ್ಳೆಯ ದಿವಸದಲ್ಲಿ ಬಂದೆವು. ನಿನ್ನ ಕೈಯಲ್ಲಿ ದೊರಕುವುದನ್ನು ನಿನ್ನ ಸೇವಕರಿಗೂ, ನಿನ್ನ ಪುತ್ರನಾದ ದಾವೀದನಿಗೂ ದಯಪಾಲಿಸು ಎಂದು ಅವನಿಗೆ ಹೇಳಿರಿ,’ ” ಎಂದು ಅವರನ್ನು ಕಳುಹಿಸಿದನು.