1 Samuel 26:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಂತೆಯೇ, ಸೌಲನ ತಲೆಯ ಹತ್ತಿರವಿದ್ದ ಭರ್ಜಿಯನ್ನೂ ನೀರಿನ ತಂಬಿಗೆಯನ್ನೂ ದಾವೀದನು ತೆಗೆದುಕೊಂಡನು. ನಂತರ ದಾವೀದ ಮತ್ತು ಅಬೀಷೈ ಸೌಲನ ಪಾಳೆಯನ್ನು ಬಿಟ್ಟು ಹೋದರು. ಇದನ್ನು ಯಾರೂ ನೋಡಲಿಲ್ಲ. ಇದರ ಬಗ್ಗೆ ಯಾರಿಗೂ ತಿಳಿಯಲಿಲ್ಲ. ಒಬ್ಬನಾದರೂ ನಿದ್ರೆಯಿಂದ ಎಚ್ಚರಗೊಳ್ಳಲಿಲ್ಲ! ಸೌಲನು ಮತ್ತು ಅವನ ಸೈನಿಕರೆಲ್ಲರೂ ನಿದ್ರಿಸುತ್ತಿದ್ದರು. ಏಕೆಂದರೆ ಯೆಹೋವನು ಅವರಿಗೆ ಗಾಢನಿದ್ರೆಯನ್ನು ಬರಮಾಡಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸೌಲನ ತಲೆದಿಂಬಿನ ಬಳಿಯಲ್ಲಿದ್ದ ಬರ್ಜಿ ಮತ್ತು ನೀರಿನ ತಂಬಿಗೆಯನ್ನು ತೆಗೆದುಕೊಂಡು ಹೋದರು. ಯಾರೂ ನೋಡಲಿಲ್ಲ, ಯಾರಿಗೂ ಗೊತ್ತಾಗಲಿಲ್ಲ, ಯಾರೂ ಎಚ್ಚರವಾಗಲಿಲ್ಲ. ಏಕೆಂದರೆ ಯೆಹೋವನು ಅವರಿಗೆ ಗಾಢನಿದ್ರೆಯನ್ನು ಬರಮಾಡಿದ್ದನು. ಒಬ್ಬರಿಗೂ ಎಚ್ಚರವಿಲ್ಲದೆ ಎಲ್ಲರೂ ನಿದ್ರೆಮಾಡುತ್ತಿದ್ದರು.
Kannada BSI Bible 2016
ನಾವು ಹೋಗೋಣ ಅಂದನು. ದಾವೀದನು ಸೌಲನ ತಲೆ ದಿಂಬಿನ ಬಳಿಯಲ್ಲಿದ್ದ ಈಟಿಯನ್ನೂ ನೀರಿನ ತಂಬಿಗೆ ಯನ್ನೂ ತೆಗೆದುಕೊಂಡ ಮೇಲೆ ಅವರು ಹೊರಟು ಹೋದರು. ಒಬ್ಬರಾದರೂ ನೋಡಿದ್ದಿಲ್ಲ; ಅರಿತಿದ್ದಿಲ್ಲ; ಯಾರೂ ಎಚ್ಚತ್ತಿರಲಿಲ್ಲ. ಯಾಕಂದರೆ ಕರ್ತನಿಂದ ಅಗಾಧ ನಿದ್ರೆಯು ಅವರ ಮೇಲೆ ಇಳಿದ ಕಾರಣ ಅವರೆಲ್ಲರೂ ನಿದ್ರೆ ಮಾಡುತ್ತಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸೌಲನ ತಲೆಗಿಂಬಿನ ಬಳಿಯಲ್ಲಿದ್ದ ಬರ್ಜಿ ತಂಬಿಗೆಗಳನ್ನು ತೆಗೆದುಕೊಂಡು ಹೋದನು. ಯಾರೂ ಕಾಣಲಿಲ್ಲ, ಯಾರಿಗೂ ಗೊತ್ತಾಗಲಿಲ್ಲ; ಯಾರೂ ಎಚ್ಚರವಾಗಲಿಲ್ಲ. ಯಾಕಂದರೆ ಯೆಹೋವನು ಅವರಿಗೆ ಗಾಢನಿದ್ರೆಯನ್ನು ಬರಮಾಡಿದ್ದನು; ಒಬ್ಬರಿಗೂ ಎಚ್ಚರವಿಲ್ಲದೆ ಎಲ್ಲರೂ ನಿದ್ರೆಮಾಡುತ್ತಿದ್ದರು.
Kannada Bible (KNCL) BSI 2016
ಸೌಲನ ತಲೆದಿಂಬಿನ ಬಳಿಯಲ್ಲಿದ್ದ ಭರ್ಜಿ ಹಾಗೂ ತಂಬಿಗೆಗಳನ್ನು ತೆಗೆದುಕೊಂಡು ಹೋದರು. ಯಾರೂ ಕಾಣಲಿಲ್ಲ; ಯಾರಿಗೂ ಗೊತ್ತಾಗಲಿಲ್ಲ, ಯಾರಿಗೂ ಎಚ್ಚರವಾಗಲಿಲ್ಲ. ಏಕೆಂದರೆ ಸರ್ವೇಶ್ವರ ಅವರಿಗೆ ಗಾಢನಿದ್ರೆಯನ್ನು ಬರಮಾಡಿದ್ದರು; ಒಬ್ಬರಿಗೂ ಎಚ್ಚರವಿಲ್ಲದೆ ಎಲ್ಲರು ಮೈಮರೆತು ನಿದ್ರೆಯಲ್ಲಿ ಮಗ್ನರಾಗಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದಾವೀದನು ಸೌಲನ ತಲೆದಿಂಬಿನ ಬಳಿಯಲ್ಲಿದ್ದ ಈಟಿಯನ್ನೂ, ನೀರಿನ ತಂಬಿಗೆಯನ್ನೂ ತೆಗೆದುಕೊಂಡನು. ಅವರು ಹೊರಟು ಹೋದರು. ಒಬ್ಬರಾದರೂ ನೋಡಲಿಲ್ಲ ಇಲ್ಲವೆ ತಿಳಿದುಕೊಳ್ಳಲಿಲ್ಲ, ಅರಿತಿದ್ದಿಲ್ಲ, ಯಾರೂ ಎಚ್ಚೆತ್ತಿರಲಿಲ್ಲ. ಏಕೆಂದರೆ ಯೆಹೋವ ದೇವರಿಂದ ಗಾಢನಿದ್ರೆಯು ಅವರ ಮೇಲೆ ಇಳಿದ ಕಾರಣ ಅವರೆಲ್ಲರು ಗಾಢ ನಿದ್ರೆಯಲ್ಲಿದ್ದರು.