1 Samuel 26:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದಾವೀದನು, “ನೀನು ಶೂರನಲ್ಲವೇ? ಇಸ್ರೇಲಿನಲ್ಲಿನ ಇತರ ಶೂರರಿಗಿಂತಲೂ ನೀನು ಉತ್ತಮನಲ್ಲವೇ? ಹೀಗಿರುವಾಗ ನೀನು ನಿನ್ನ ಒಡೆಯನಾದ ರಾಜನನ್ನು ಏಕೆ ರಕ್ಷಿಸಲಿಲ್ಲ? ಒಬ್ಬ ಸಾಮಾನ್ಯ ಮನುಷ್ಯನು ನಿಮ್ಮ ಪಾಳೆಯಕ್ಕೆ ಬಂದಿದ್ದರೂ ನಿಮ್ಮ ಒಡೆಯನಾದ ರಾಜನನ್ನು ಕೊಲ್ಲುತ್ತಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದಾವೀದನು ಅಬ್ನೇರನಿಗೆ, “ನೀನು ಶೂರನಲ್ಲವೋ? ಇಸ್ರಾಯೇಲರಲ್ಲಿ ನಿನಗೆ ಸಮಾನನಾದವನು ಯಾರು? ನೀನು ನಿನ್ನ ಒಡೆಯನಾದ ಅರಸನನ್ನು ಯಾಕೆ ಕಾಯಲಿಲ್ಲ. ಜನರಲ್ಲೊಬ್ಬನು ಒಳಕ್ಕೆ ಹೊಕ್ಕು ನಿನ್ನ ಒಡೆಯನಾದ ಅರಸನನ್ನು ಕೊಲ್ಲಬೇಕೆಂದಿದ್ದನು.
Kannada BSI Bible 2016
ಆಗ ದಾವೀ ದನು ಅಬ್ನೇರನಿಗೆ ಹೇಳಿದ್ದೇನಂದರೆ -- ನೀನು ಪರಾಕ್ರಮಶಾಲಿ ಅಲ್ಲವೇ? ಇಸ್ರಾಯೇಲಿನಲ್ಲಿ ನಿನಗೆ ಸಮಾನನಾದವನು ಯಾರು? ಆದರೆ ನೀನು ನಿನ್ನ ಒಡೆಯನಾದ ಅರಸನನ್ನು ಕಾಯದೆ ಹೋದದ್ದೇನು? ಯಾಕಂದರೆ ಜನರಲ್ಲಿ ಒಬ್ಬನು ನಿನ್ನ ಒಡೆಯನಾದ ಅರಸನನ್ನು ಸಂಹರಿಸುವದಕ್ಕೆ ಬಂದಿದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ದಾವೀದನು ಅಬ್ನೇರನಿಗೆ - ನೀನು ಶೂರನಲ್ಲವೋ? ಇಸ್ರಾಯೇಲ್ಯರಲ್ಲಿ ನಿನಗೆ ಸಮಾನರಾರು! ನೀನು ನಿನ್ನ ಒಡೆಯನಾದ ಅರಸನನ್ನು ಯಾಕೆ ಕಾಯಲಿಲ್ಲ? ಜನರಲ್ಲೊಬ್ಬನು ಒಳಗೆ ಹೊಕ್ಕು ನಿನ್ನ ಒಡೆಯನಾದ ಅರಸನನ್ನು ಕೊಲ್ಲಬೇಕೆಂದಿದ್ದನು.
Kannada Bible (KNCL) BSI 2016
ದಾವೀದನು ಅಬ್ನೇರನಿಗೆ, “ನೀನು ಶೂರನಲ್ಲವೇ? ಇಸ್ರಯೇಲರಲ್ಲಿ ನಿನಗೆ ಸಮನಾರು? ನೀನು ನಿನ್ನ ಒಡೆಯನಾದ ಅರಸನನ್ನು ಏಕೆ ಕಾಯಲಿಲ್ಲ? ಜನರಲ್ಲಿ ಒಬ್ಬನು ಒಳಗೆ ಹೊಕ್ಕು ನಿನ್ನ ಒಡೆಯನಾದ ಅರಸನನ್ನು ಕೊಲ್ಲಬೇಕೆಂದಿದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ದಾವೀದನು ಅಬ್ನೇರನಿಗೆ, “ನೀನು ಪರಾಕ್ರಮಶಾಲಿಯಲ್ಲವೇ? ಇಸ್ರಾಯೇಲಿನಲ್ಲಿ ನಿನಗೆ ಸಮಾನನಾದವನು ಯಾರು? ಆದರೆ ನೀನು ನಿನ್ನ ಒಡೆಯನಾದ ಅರಸನನ್ನು ಕಾಯದೆ ಹೋದದ್ದೇನು? ಜನರಲ್ಲಿ ಒಬ್ಬನು ನಿನ್ನ ಒಡೆಯನಾದ ಅರಸನನ್ನು ಸಂಹರಿಸುವುದಕ್ಕೆ ಬಂದಿದ್ದನು.