1 Samuel 26:23 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಪ್ರತಿಯೊಬ್ಬನಿಗೂ ಅವನ ಕಾರ್ಯಗಳಿಗೆ ಮತ್ತು ನಂಬಿಗಸ್ತಿಕೆಗೆ ತಕ್ಕಂತೆ ಯೆಹೋವನು ಪ್ರತಿಫಲ ಕೊಡುವನು. ಇಂದು ಯೆಹೋವನು ನಿನ್ನನ್ನು ನನ್ನ ಕೈಗೆ ಒಪ್ಪಿಸಿಕೊಟ್ಟಿದ್ದರೂ ಯೆಹೋವನಿಂದ ಅಭಿಷೇಕಿಸಲ್ಪಟ್ಟ ರಾಜನಾಗಿರುವ ನಿನಗೆ ನಾನು ಕೇಡನ್ನು ಮಾಡುವುದಿಲ್ಲ!
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಪ್ರತಿಯೊಬ್ಬನಿಗೂ ಅವನವನ ನೀತಿಸತ್ಯತೆಗಳಿಗೆ ಅನುಸಾರವಾಗಿ ಪ್ರತಿಫಲವನ್ನು ಕೊಡುವನು. ಆತನು ಈ ಹೊತ್ತು ನಿನ್ನನ್ನು ನನ್ನ ಕೈಗೆ ಒಪ್ಪಿಸಿಕೊಟ್ಟಿದ್ದರೂ, ನೀನು ಯೆಹೋವನ ಅಭಿಷಿಕ್ತನೆಂದು ನಾನು ನಿನ್ನ ಮೇಲೆ ಕೈಹಾಕಲಿಲ್ಲ.
Kannada BSI Bible 2016
ಆದರೆ ಕರ್ತನು ಪ್ರತಿಯೊ ಬ್ಬನಿಗೆ ಅವನ ನೀತಿಗೂ ಅವನ ನಂಬಿಗಸ್ತಿಕೆಗೂ ತಕ್ಕ ಫಲವನ್ನು ಕೊಡಲಿ. ಕರ್ತನು ಈ ಹೊತ್ತು ನಿನ್ನನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಟ್ಟನು. ಆದರೆ ನಾನು ಕರ್ತನ ಅಭಿಷಿಕ್ತನ ಮೇಲೆ ನನ್ನ ಕೈಚಾಚಲು ಮನಸ್ಸಿ ಲ್ಲದೆ ಇದ್ದೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಪ್ರತಿಯೊಬ್ಬನಿಗೂ ಅವನವನ ನೀತಿಸತ್ಯತೆಗಳಿಗನುಸಾರವಾದ ಫಲವನ್ನು ಕೊಡುವನು. ಆತನು ಈಹೊತ್ತು ನಿನ್ನನ್ನು ನನ್ನ ಕೈಗೆ ಒಪ್ಪಿಸಿ ಕೊಟ್ಟಿದ್ದರೂ ನೀನು ಯೆಹೋವನ ಅಭಿಷಿಕ್ತನೆಂದು ನಾನು ನಿನ್ನ ಮೇಲೆ ಕೈಹಾಕಲಿಲ್ಲ.
Kannada Bible (KNCL) BSI 2016
ಸರ್ವೇಶ್ವರ ಪ್ರತಿಯೊಬ್ಬನಿಗೂ ಅವನವನ ನೀತಿಸತ್ಯತೆಗಳಿಗೆ ಅನುಸಾರ ಫಲವನ್ನು ಕೊಡುವರು. ಅವರು ಈ ದಿನ ನಿಮ್ಮನ್ನು ನನ್ನ ಕೈಗೆ ಒಪ್ಪಿಸಿಕೊಟ್ಟಿದ್ದರೂ ನೀವು ಸರ್ವೇಶ್ವರನ ಅಭಿಷಿಕ್ತರೆಂದು ನಾನು ನಿಮ್ಮ ಮೇಲೆ ಕೈಹಾಕಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಯೆಹೋವ ದೇವರು ಪ್ರತಿಯೊಬ್ಬನಿಗೆ ಅವನ ನೀತಿಗೂ, ಅವನ ನಂಬಿಗಸ್ತಿಕೆಗೂ ತಕ್ಕ ಫಲವನ್ನು ಕೊಡಲಿ. ಯೆಹೋವ ದೇವರು ಈ ಹೊತ್ತು ನಿನ್ನನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಟ್ಟರು. ಆದರೆ ನಾನು ಯೆಹೋವ ದೇವರ ಅಭಿಷಿಕ್ತನ ಮೇಲೆ ನನ್ನ ಕೈ ಚಾಚಲು ಮನಸ್ಸಿಲ್ಲದೆ ಇದ್ದೆನು.