1 Samuel 26:25 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಂತರ ಸೌಲನು ದಾವೀದನಿಗೆ, “ದೇವರು ನಿನ್ನನ್ನು ಆಶೀರ್ವದಿಸಲಿ, ನನ್ನ ಮಗನಾದ ದಾವೀದನೇ, ನೀನು ದೊಡ್ಡ ಕಾರ್ಯಗಳನ್ನು ಮಾಡುವೆ; ನೀನು ಯಶಸ್ವಿಯಾಗುವೆ” ಎಂದನು. ದಾವೀದನು ತನ್ನ ಮಾರ್ಗದಲ್ಲಿ ಹೊರಟುಹೋದನು. ಸೌಲನು ಮನೆಗೆ ಹಿಂದಿರುಗಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಸೌಲನು ದಾವೀದನಿಗೆ, “ನನ್ನ ಮಗನೇ ದಾವೀದನೇ ನೀನು ಆಶೀರ್ವಾದ ಹೊಂದು. ನೀನು ಹೇಗೂ ಮಹಾಕಾರ್ಯಗಳನ್ನು ನಡಿಸಿ ಸಫಲನಾಗುವಿ” ಎಂದು ಹೇಳಿ ತನ್ನ ಊರಿಗೆ ಹೊರಟನು. ದಾವೀದನು ತನ್ನ ದಾರಿಯನ್ನು ಹಿಡಿದನು.
Kannada BSI Bible 2016
ಆಗ ಸೌಲನು ದಾವೀದನಿಗೆ--ನನ್ನ ಮಗನಾದ ದಾವೀದನೇ, ನೀನು ಆಶೀರ್ವದಿಸಲ್ಪ ಡುವಿ; ನೀನು ಮಹತ್ಕಾರ್ಯಗಳನ್ನು ಮಾಡುವಿ, ಗೆದ್ದೇ ಗೆಲ್ಲುವಿ ಅಂದನು. ಹಾಗೆಯೇ ದಾವೀದನು ತನ್ನ ದಾರಿಹಿಡಿದು ಹೋದನು; ಸೌಲನು ತನ್ನ ಸ್ಥಳಕ್ಕೆ ಹಿಂತಿರುಗಿ ಹೋದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಸೌಲನು ದಾವೀದನಿಗೆ - ನನ್ನ ಮಗನೇ, ದಾವೀದನೇ, ನೀನು ಆಶೀರ್ವಾದ ಹೊಂದು; ನೀನು ಹೇಗೂ ಮಹಾಕಾರ್ಯಗಳನ್ನು ನಡಿಸಿ ಸಫಲನಾಗುವಿ ಎಂದು ಹೇಳಿ ತನ್ನ ಊರಿಗೆ ಹೊರಟನು; ದಾವೀದನು ತನ್ನ ದಾರಿ ಹಿಡಿದನು.
Kannada Bible (KNCL) BSI 2016
ಆಗ ಸೌಲನು ದಾವೀದನಿಗೆ, “ಪುತ್ರನೇ, ದಾವೀದನೇ, ದೇವರು ನಿನ್ನನ್ನು ಹರಸಲಿ! ನೀನು ಮಹಾಕಾರ್ಯಗಳನ್ನು ಸಾಧಿಸಿ ಯಶಸ್ವಿಯಾಗು,” ಎಂದು ಹೇಳಿ ತನ್ನ ಊರಿಗೆ ಹೊರಟನು; ದಾವೀದನು ತನ್ನ ದಾರಿ ಹಿಡಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಸೌಲನು ದಾವೀದನಿಗೆ, “ನನ್ನ ಮಗನಾದ ದಾವೀದನೇ, ದೇವರು ನಿನ್ನನ್ನು ಆಶೀರ್ವದಿಸಲಿ. ನೀನು ಮಹತ್ಕಾರ್ಯಗಳನ್ನು ಮಾಡುವೆ, ಗೆದ್ದೇ ಗೆಲ್ಲುವೆ,” ಎಂದನು. ಹಾಗೆಯೇ ದಾವೀದನು ತನ್ನ ಮಾರ್ಗವಾಗಿ ಹೋದನು. ಸೌಲನು ತನ್ನ ಸ್ಥಳಕ್ಕೆ ಹಿಂದಿರುಗಿ ಹೋದನು.