1 Samuel 26:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸೌಲನು ಹಕೀಲಾ ಬೆಟ್ಟದ ಮೇಲೆ ತನ್ನ ಪಾಳೆಯವನ್ನು ಮಾಡಿಕೊಂಡನು. ಈ ಪಾಳೆಯವು ಜೆಸಿಮೋನ್ ಅರಣ್ಯಕ್ಕೆ ಎದುರಿನಲ್ಲಿರುವ ರಸ್ತೆಯ ಅಂಚಿನಲ್ಲಿತ್ತು. ದಾವೀದನು ಅರಣ್ಯದಲ್ಲಿ ನೆಲೆಸಿದ್ದನು. ಸೌಲನು ತನ್ನನ್ನು ಹಿಂಬಾಲಿಸಿಕೊಂಡು ಅಲ್ಲಿಗೆ ಬಂದಿರುವುದು ದಾವೀದನಿಗೆ ತಿಳಿಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದಾರಿಯ ಬಳಿಯಲ್ಲಿರುವ ಹಕೀಲಾ ಬೆಟ್ಟದಲ್ಲಿ ಪಾಳೆಯಮಾಡಿಕೊಂಡರು. ಸೌಲನು ತನ್ನನ್ನು ಹಿಡಿಯುವುದಕ್ಕೋಸ್ಕರ ಅರಣ್ಯಕ್ಕೆ ಬಂದಿದ್ದಾನೆಂಬ ವರ್ತಮಾನವು ಅಲ್ಲಿಯೇ ಇದ್ದ ದಾವೀದನಿಗೆ ತಲುಪಲು
Kannada BSI Bible 2016
ಆದರೆ ಸೌಲನು ತನ್ನನ್ನು ಹಿಂದಟ್ಟಿ ಅರಣ್ಯಕ್ಕೆ ಬಂದ ದ್ದನ್ನು ನೋಡಿ ದಾವೀದನು ಅರಣ್ಯದಲ್ಲಿ ನಿಂತನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದರ ಮೂಡಣದಿಕ್ಕಿನಲ್ಲಿ ದಾರಿಯ ಬಳಿಯಲ್ಲಿರುವ ಹಕೀಲಾ ಬೆಟ್ಟದಲ್ಲಿ ಪಾಳೆಯಮಾಡಿಕೊಂಡನು. ಸೌಲನು ತನ್ನನ್ನು ಹಿಡಿಯುವದಕ್ಕೋಸ್ಕರ ಅರಣ್ಯಕ್ಕೆ ಬಂದಿದ್ದಾನೆಂಬ ವರ್ತಮಾನವು ಅಲ್ಲಿಯೇ ಇದ್ದ ದಾವೀದನಿಗೆ ಮುಟ್ಟಲು
Kannada Bible (KNCL) BSI 2016
ಅದರ ಪೂರ್ವದಿಕ್ಕಿನಲ್ಲಿ ದಾರಿಯ ಬಳಿಯಲ್ಲಿರುವ ಹಕೀಲಾ ಬೆಟ್ಟದಲ್ಲಿ ಪಾಳೆಯ ಮಾಡಿಕೊಂಡನು. ಸೌಲನು ತನ್ನನ್ನು ಹಿಡಿಯುವುದಕ್ಕಾಗಿ ಮರುಭೂಮಿಗೆ ಬಂದಿದ್ದಾನೆಂಬ ಸುದ್ದಿ ಅಲ್ಲಿಯೇ ಇದ್ದ ದಾವೀದನಿಗೆ ಮುಟ್ಟಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಷಿಮೋನಿಗೆ ಎದುರಾದ ಮಾರ್ಗದಲ್ಲಿರುವ ಹಕೀಲಾ ಬೆಟ್ಟದಲ್ಲಿ ದಂಡಿಳಿಸಿದನು. ದಾವೀದನು ಸೌಲನು ತನ್ನ ಹಿಂದೆ ಮರುಭೂಮಿಗೆ ಬಂದದ್ದನ್ನು ನೋಡಿ, ಮರುಭೂಮಿಯಲ್ಲಿ ನಿಂತನು.