1 Samuel 26:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದಾವೀದನು ಹಿತ್ತಿಯನಾದ ಅಹೀಮೆಲೆಕನ ಮತ್ತು ಚೆರೂಯಳ ಮಗನೂ ಯೋವಾಬನ ಸಹೋದರನೂ ಆದ ಅಬೀಷೈರೊಡನೆ ಮಾತನಾಡಿದನು. ಅವನು ಅವರಿಗೆ, “ನನ್ನೊಡನೆ ಸೌಲನ ಪಾಳೆಯಕ್ಕೆ ಯಾರು ಬರುತ್ತೀರಿ?” ಎಂದು ಕೇಳಿದನು. “ನಾನು ಬರುತ್ತೇನೆ” ಎಂದು ಅಬೀಷೈ ಉತ್ತರಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ದಾವೀದನು ಹಿತ್ತಿಯನ ಮಗನಾದ ಅಹೀಮೆಲೆಕನಿಗೂ, ಚೆರೂಯಳ ಮಗನೂ ಯೋವಾಬನ ತಮ್ಮನೂ ಆದ ಅಬೀಷೈಗೂ, “ನಿಮ್ಮಲ್ಲಿ ನನ್ನ ಸಂಗಡ ಸೌಲನ ಪಾಳೆಯಕ್ಕೆ ಯಾರು ಬರುವಿರಿ?” ಎಂದು ಕೇಳಿದ್ದಕ್ಕೆ ಅಬೀಷೈಯು, “ನಾನು ಬರುತ್ತೇನೆ” ಎಂದು ಉತ್ತರ ಕೊಟ್ಟನು.
Kannada BSI Bible 2016
ಆಗ ದಾವೀದನು ಹಿತ್ತಿಯನಾದ ಅಹೀಮೆಲೆಕನನ್ನೂ ಚೆರೂಯಳ ಮಗ ನಾಗಿರುವ ಯೋವಾಬನ ಸಹೋದರನಾದ ಅಬೀಷೈ ಯನ್ನೂ ನೋಡಿ--ನನ್ನ ಸಂಗಡ ದಂಡಿನಲ್ಲಿ ಪ್ರವೇಶಿ ಸಲು ಬರುವವನು ಯಾರೆಂದು ಕೇಳಿದನು; ಅದಕ್ಕೆ ಅಬೀಷೈಯು--ನಾನು ನಿನ್ನ ಸಂಗಡ ಬರುವೆನು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ದಾವೀದನು ಹಿತ್ತಿಯನಾದ ಅಹೀಮೆಲೆಕನನ್ನೂ ಚೆರೂಯಳ ಮಗನೂ ಯೋವಾಬನ ತಮ್ಮನೂ ಆದ ಅಬೀಷೈಯನ್ನೂ ಕುರಿತು - ನಿಮ್ಮಲ್ಲಿ ನನ್ನ ಸಂಗಡ ಸೌಲನ ಪಾಳೆಯಕ್ಕೆ ಯಾರು ಬರುವಿರಿ ಎಂದು ಕೇಳಿದ್ದಕ್ಕೆ ಅಬೀಷೈಯು - ನಾನು ಬರುತ್ತೇನೆ ಎಂದು ಉತ್ತರಕೊಟ್ಟನು.
Kannada Bible (KNCL) BSI 2016
ಆಗ ದಾವೀದನು ಹಿತ್ತಿಯನಾದ ಅಹೀಮೆಲೆಕನನ್ನು ಹಾಗು ಚೆರೂಯಳ ಮಗನೂ ಯೋವಾಬನ ತಮ್ಮನೂ ಆದ ಅಬೀಷೈಯನ್ನು ಉದ್ದೇಶಿಸಿ, “ನಿಮ್ಮಲ್ಲಿ ನನ್ನ ಸಂಗಡ ಸೌಲನ ಪಾಳೆಯಕ್ಕೆ ಯಾರು ಬರುವಿರಿ?” ಎಂದು ಕೇಳಿದನು. ಅದಕ್ಕೆ ಅಬೀಷೈಯು, “ನಾನು ಬರುತ್ತೇನೆ,” ಎಂದು ಉತ್ತರಕೊಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ದಾವೀದನು ಹಿತ್ತಿಯನಾದ ಅಹೀಮೆಲೆಕನನ್ನು ಮತ್ತು ಚೆರೂಯಳ ಮಗನಾಗಿರುವ ಯೋವಾಬನ ಸಹೋದರ ಅಬೀಷೈಯನ್ನು ನೋಡಿ, “ನನ್ನ ಸಂಗಡ ಸೌಲನ ದಂಡಿನಲ್ಲಿ ಪ್ರವೇಶಿಸಲು ಬರುವವರು ಯಾರು?” ಎಂದು ಕೇಳಿದನು. ಅದಕ್ಕೆ ಅಬೀಷೈಯನು, “ನಾನು ನಿನ್ನ ಸಂಗಡ ಬರುವೆನು,” ಎಂದನು.