1 Samuel 26:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ರಾತ್ರಿಯಾಯಿತು. ದಾವೀದ ಮತ್ತು ಅಬೀಷೈ ಸೌಲನ ಪಾಳೆಯಕ್ಕೆ ಹೋದರು. ಪಾಳೆಯದ ಮಧ್ಯದಲ್ಲಿ ಸೌಲನು ನಿದ್ರಿಸುತ್ತಿದ್ದನು. ಅವನ ಭರ್ಜಿಯು ಅವನ ತಲೆಯ ಹತ್ತಿರ ನೆಲದಲ್ಲಿ ನೆಡಲ್ಪಟ್ಟಿತ್ತು. ಸೌಲನ ಸುತ್ತಲೂ ಅಬ್ನೇರನು ಸೈನ್ಯದೊಡನೆ ನಿದ್ರಿಸುತ್ತಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದಾವೀದನೂ ಮತ್ತು ಅಬೀಷೈಯೂ ರಾತ್ರಿಯಲ್ಲಿ ಆ ಪಾಳೆಯಕ್ಕೆ ಹೋದಾಗ ಸೌಲನು ಬಂಡಿಗಳ ಗುಂಪಿನ ಮಧ್ಯದಲ್ಲಿ ಮಲಗಿಕೊಂಡು ನಿದ್ರೆಮಾಡುತ್ತಿದ್ದನು. ಅವನ ಬರ್ಜಿಯು ಅವನ ತಲೆಯ ಹತ್ತಿರ ನೆಲದಲ್ಲಿ ನೆಡಲ್ಪಟ್ಟಿತ್ತು. ಅಬ್ನೇರನೂ, ಸೈನಿಕರೂ ಅವನ ಸುತ್ತಲೂ ಮಲಗಿದ್ದರು.
Kannada BSI Bible 2016
ಹಾಗೆಯೇ ದಾವೀದನೂ ಅಬೀಷೈಯೂ ರಾತ್ರಿಯಲ್ಲಿ ಆ ಜನರ ಬಳಿಗೆ ಬಂದರು. ಇಗೋ, ಸೌಲನು ಕಂದಕದೊಳಗೆ ಮಲಗಿ ನಿದ್ರೆಮಾಡು ತ್ತಿದ್ದನು; ಅವನ ಈಟಿಯು ಅವನ ತಲೆದಿಂಬಿನ ಬಳಿ ಯಲ್ಲಿ ನೆಟ್ಟಿತ್ತು. ಆದರೆ ಅವನ ಸುತ್ತಲೂ ಅಬ್ನೇರನೂ ಜನರೂ ಮಲಗಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ದಾವೀದನೂ ಅಬೀಷೈಯೂ ರಾತ್ರಿಯಲ್ಲಿ ಆ ಪಾಳೆಯಕ್ಕೆ ಹೋದಾಗ ಸೌಲನು ಬಂಡಿಗಳ ಗುಂಪಿನ ಮಧ್ಯದಲ್ಲಿ ಮಲಗಿಕೊಂಡು ನಿದ್ರೆಮಾಡುತ್ತಿದ್ದನು. ಅವನ ಬರ್ಜಿಯು ಅವನ ತಲೆಯ ಹತ್ತಿರ ನೆಲದಲ್ಲಿ ನೆಡಲ್ಪಟ್ಟಿತ್ತು. ಅಬ್ನೇರನೂ ಸೈನಿಕರೂ ಅವನ ಸುತ್ತಲೂ ಮಲಗಿದ್ದರು.
Kannada Bible (KNCL) BSI 2016
ದಾವೀದನು ಮತ್ತು ಅಬೀಷೈಯು, ರಾತ್ರಿಯಲ್ಲಿ ಆ ಪಾಳೆಯಕ್ಕೆ ಹೋದಾಗ ಸೌಲನು ಬಂಡಿಗಳ ಗುಂಪಿನ ಮಧ್ಯೆ ಮಲಗಿಕೊಂಡು ನಿದ್ರೆಮಾಡುತ್ತಿದ್ದನು. ಅವನ ಭರ್ಜಿಯನ್ನು ಅವನ ತಲೆಯ ಹತ್ತಿರ ನೆಲಕ್ಕೆ ತಿವಿದು ನಿಲ್ಲಿಸಲಾಗಿತ್ತು. ಅಬ್ನೇರನೂ ಸೈನಿಕರೂ ಅವನ ಸುತ್ತಲೂ ಮಲಗಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದಾವೀದನೂ, ಅಬೀಷೈಯನೂ ರಾತ್ರಿಯಲ್ಲಿ ಆ ಜನರ ಬಳಿಗೆ ಬಂದರು. ಸೌಲನು ಕಂದಕದೊಳಗೆ ಮಲಗಿ ನಿದ್ರೆ ಮಾಡುತ್ತಿದ್ದನು. ಅವನ ಈಟಿಯು ಅವನ ತಲೆದಿಂಬಿನ ಬಳಿಯಲ್ಲಿ ನೆಟ್ಟಿತ್ತು. ಆದರೆ ಅವನ ಸುತ್ತಲು ಅಬ್ನೇರನೂ, ಜನರೂ ಮಲಗಿದ್ದರು.