1 Samuel 26:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಬೀಷೈಯು, “ಯೆಹೋವನು ಈ ದಿನ ನಿನ್ನ ಶತ್ರುವನ್ನು ಸೋಲಿಸಲು ನಿನಗೆ ಒಪ್ಪಿಸಿದ್ದಾನೆ. ಸೌಲನನ್ನು ಅವನ ಭರ್ಜಿಯಿಂದಲೇ ಅವನನ್ನು ನೆಲಕ್ಕೆ ಹತ್ತಿಕೊಳ್ಳುವಂತೆ ತಿವಿಯಲು ನನಗೆ ಅವಕಾಶಕೊಡು. ನಾನು ಒಂದೇ ಸಲಕ್ಕೆ ಆ ಕಾರ್ಯವನ್ನು ಮುಗಿಸಿಬಿಡುತ್ತೇನೆ!” ಎಂದು ದಾವೀದನನ್ನು ಕೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಬೀಷೈಯು ದಾವೀದನಿಗೆ, “ದೇವರು ಈ ಹೊತ್ತು ನಿನ್ನ ವೈರಿಯನ್ನು ನಿನ್ನ ಕೈಗೆ ಒಪ್ಪಿಸಿದ್ದಾನೆ, ಅಪ್ಪಣೆಯಾಗಲಿ ನಾನು ಬರ್ಜಿಯಿಂದ ಒಂದೇ ಪೆಟ್ಟಿನಲ್ಲಿ ಅವನನ್ನು ನೆಲಕ್ಕೆ ಹತ್ತಿಕೊಳ್ಳುವಂತೆ ತಿವಿಯುವೆನು. ಎರಡನೆಯ ಸಾರಿ ಹೊಡೆಯುವಂತ ಅವಕಾಶವಿರುವುದಿಲ್ಲ” ಎಂದು ಹೇಳಿದನು.
Kannada BSI Bible 2016
ಆಗ ಅಬೀಷೈಯು ದಾವೀ ದನಿಗೆ--ಈ ಹೊತ್ತು ದೇವರು ನಿನ್ನ ಶತ್ರುವನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಟ್ಟಿದ್ದಾನೆ; ಈಗ ನಾನು ಅವನನ್ನು ಈಟಿಯಿಂದ ಒಂದೇ ಪೆಟ್ಟಿನಲ್ಲಿ ನೆಲಕ್ಕೆ ಹತ್ತುವಂತೆ ಹೊಡೆಯಲು ಅಪ್ಪಣೆ ಕೊಡಬೇಕು; ಎರಡು ಸಾರಿ ಹೊಡೆಯುವದಿಲ್ಲ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಬೀಷೈಯು ದಾವೀದನಿಗೆ - ದೇವರು ಈ ಹೊತ್ತು ನಿನ್ನ ವೈರಿಯನ್ನು ನಿನ್ನ ಕೈಗೆ ಒಪ್ಪಿಸಿಕೊಟ್ಟಿದ್ದಾನೆ; ಅಪ್ಪಣೆಯಾಗಲಿ, ನಾನು ಬರ್ಜಿಯಿಂದ ಒಂದೇ ಪೆಟ್ಟಿನಲ್ಲಿ ಅವನನ್ನು ನೆಲಕ್ಕೆ ಹತ್ತಿಕೊಳ್ಳುವಂತೆ ತಿವಿಯುವೆನು; ಎರಡನೆಯ ಸಾರಿ ಹೊಡೆಯುವದು ಅವಶ್ಯವಿಲ್ಲ ಎಂದು ಹೇಳಿದನು.
Kannada Bible (KNCL) BSI 2016
ಅಬೀಷೈಯು ದಾವೀದನಿಗೆ, “ದೇವರು ಈ ದಿನ ನಿನ್ನ ವೈರಿಯನ್ನು ನಿನ್ನ ಕೈಗೆ ಒಪ್ಪಿಸಿಕೊಟ್ಟಿದ್ದಾರೆ; ಅಪ್ಪಣೆಯಾಗಲಿ, ನಾನು ಭರ್ಜಿಯಿಂದ ಒಂದೇ ಪೆಟ್ಟಿನಲ್ಲಿ ಅವನನ್ನು ನೆಲಕ್ಕೆ ಕಚ್ಚಿಕೊಳ್ಳುವಂತೆ ತಿವಿಯುತ್ತೇನೆ. ಎರಡನೆಯ ಸಾರಿ ಹೊಡೆಯುವ ಅವಶ್ಯಕತೆ ಇರುವುದಿಲ್ಲ,” ಎಂದು ಹೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅಬೀಷೈಯನು ದಾವೀದನಿಗೆ, “ಈ ಹೊತ್ತು ದೇವರು ನಿನ್ನ ಶತ್ರುವನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಟ್ಟಿದ್ದಾರೆ; ಈಗ ನಾನು ಅವನನ್ನು ಈಟಿಯಿಂದ ಒಂದೇ ಪೆಟ್ಟಿನಿಂದ ನೆಲಕ್ಕೆ ಹತ್ತುವಂತೆ ತಿವಿಯಲು ಅಪ್ಪಣೆಕೊಡಬೇಕು; ಎರಡು ಸಾರಿ ಹೊಡೆಯುವುದಿಲ್ಲ,” ಎಂದನು.