1 Samuel 26:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ದಾವೀದನು ಅಬೀಷೈಗೆ, “ಸೌಲನನ್ನು ಕೊಲ್ಲಬೇಡ! ಯೆಹೋವನಿಂದ ಅಭಿಷೇಕಿಸಲ್ಪಟ್ಟ ರಾಜನಿಗೆ ಯಾರೇ ಕೇಡುಮಾಡಿದರೂ ಅವರನ್ನು ದಂಡಿಸಲೇಬೇಕು!
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ದಾವೀದನು, “ಅವನನ್ನು ಕೊಲ್ಲಬೇಡ, ಯೆಹೋವನ ಅಭಿಷಿಕ್ತನಿಗೆ ವಿರೋಧವಾಗಿ ಕೈಯೆತ್ತುವ ಯಾವನಾದರೂ ನಿರಪರಾಧಿಯೆಂದು ಪರಿಗಣಿಸಲ್ಪಡುವುದಿಲ್ಲ?” ಅಂದನು.
Kannada BSI Bible 2016
ಆದರೆ ದಾವೀದನು ಅಬೀಷೈಯನಿಗೆ -- ಅವನನ್ನು ಸಂಹರಿಸಬೇಡ; ಯಾಕಂದರೆ ಕರ್ತನ ಅಭಿಷಿಕ್ತನಿಗೆ ವಿರೋಧವಾಗಿ ಕೈ ಹಾಕುವವನು ನಿರಪರಾಧಿಯಾಗುವದಿಲ್ಲ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ದಾವೀದನು - ಅವನನ್ನು ಕೊಲ್ಲಬೇಡ; ಯೆಹೋವನ ಅಭಿಷಿಕ್ತನಿಗೆ ವಿರೋಧವಾಗಿ ಕೈಯೆತ್ತುವ ಯಾವನಾದರೂ ನಿರಪರಾಧಿಯೆಂದು ಎಣಿಸಲ್ಪಡುವನೋ ಅಂದನು.
Kannada Bible (KNCL) BSI 2016
ಆದರೆ ದಾವೀದನು, “ಅವನನ್ನು ಕೊಲ್ಲಬೇಡ; ಸರ್ವೇಶ್ವರನ ಅಭಿಷಿಕ್ತನಿಗೆ ವಿರೋಧವಾಗಿ ಕೈಯೆತ್ತುವ ಯಾವನೂ ನಿರಪರಾಧಿ ಎಂದು ಎಣಿಸಲ್ಪಡನು,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ದಾವೀದನು ಅಬೀಷೈಯನಿಗೆ, “ಅವನನ್ನು ಸಂಹರಿಸಬೇಡ. ಏಕೆಂದರೆ ಅಪರಾಧವಿಲ್ಲದೆ ಯೆಹೋವ ದೇವರ ಅಭಿಷಿಕ್ತನ ವಿರೋಧವಾಗಿ ಕೈ ಹಾಕುವವನು ಯಾರು?” ಎಂದನು.

Recommended Reading