1 Samuel 27:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ದಾವೀದನು, “ಸೌಲನು ಎಂದಾದರೂ ಒಂದು ದಿನ ನನ್ನನ್ನು ಹಿಡಿದುಕೊಳ್ಳುವನು. ಈಗ ಫಿಲಿಷ್ಟಿಯರ ರಾಜ್ಯಕ್ಕೆ ತಪ್ಪಿಸಿಕೊಂಡು ಹೋಗುವುದೇ ನಾನು ಮಾಡಬಹುದಾದ ಒಳ್ಳೆಯ ಕೆಲಸ. ಆಗ ಸೌಲನು ಇಸ್ರೇಲಿನಲ್ಲಿ ನನ್ನನ್ನು ಹುಡುಕುವುದನ್ನು ಬಿಟ್ಟುಬಿಡುತ್ತಾನೆ. ಸೌಲನಿಂದ ತಪ್ಪಿಸಿಕೊಳ್ಳಲು ಇದೇ ಸರಿಯಾದ ಮಾರ್ಗ” ಎಂದು ತನ್ನಲ್ಲೇ ಯೋಚಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದಾವೀದನು ತನ್ನ ಮನಸ್ಸಿನಲ್ಲಿ, “ನಾನು ಇಲ್ಲೇ ಇದ್ದರೆ ಹೇಗೂ ಒಂದು ದಿನ ಸೌಲನ ಕೈಯಿಂದ ಸಾಯಲೇಬೇಕು ಆದ್ದರಿಂದ ಫಿಲಿಷ್ಟಿಯರ ದೇಶಕ್ಕೆ ಹೋಗಿ ತಪ್ಪಿಸಿಕೊಳ್ಳುವುದೇ ಉತ್ತಮ. ಆ ಮೇಲೆ ಸೌಲನು ಇಸ್ರಾಯೇಲ್ಯರ ಪ್ರಾಂತ್ಯಗಳಲ್ಲಿ ನನ್ನನ್ನು ಹುಡುಕದೆ ಬಿಟ್ಟುಬಿಡುವನು. ನಾನು ಅವನ ಕೈಗೆ ತಪ್ಪಿಸಿಕೊಂಡವನಾಗಿರುವೆನು” ಅಂದುಕೊಂಡನು.
Kannada BSI Bible 2016
ದಾವೀದನು ತನ್ನ ಹೃದಯದಲ್ಲಿ--ನಾನು ಎಂದಿಗಾದರೂ ಒಂದು ದಿನ ಸೌಲನ ಕೈಯಿಂದ ಮಡಿದುಹೋಗುತ್ತೇನೆ. ನಾನು ತ್ವರೆಯಾಗಿ ಫಿಲಿಷ್ಟಿಯರ ದೇಶಕ್ಕೆ ತಪ್ಪಿಸಿಕೊಂಡು ಓಡಿಹೋಗುವ ದಕ್ಕಿಂತ ನನಗೆ ಉತ್ತಮವಾದ ಕಾರ್ಯವಿಲ್ಲ. ಸೌಲನು ನನ್ನನ್ನು ಇಸ್ರಾಯೇಲಿನಲ್ಲಿ ಇನ್ನು ಹುಡುಕಲು ದಿಕ್ಕು ಕಾಣದೆ ಹೋಗುವನು. ಈ ಪ್ರಕಾರ ನಾನು ಅವನ ಕೈಯಿಂದ ತಪ್ಪಿಸಿಕೊಂಡು ಹೋಗುವೆನು ಅಂದು ಕೊಂಡನು.
Kannada BSI JV (ಕನ್ನಡ ಸತ್ಯವೇದವು J.V. (BSI))
ದಾವೀದನು ತನ್ನ ಮನಸ್ಸಿನಲ್ಲಿ - ನಾನು ಇಲ್ಲಿದ್ದರೆ ಹೇಗೂ ಒಂದು ದಿನ ಸೌಲನ ಕೈಯಿಂದ ಮಡಿಯಲೇಬೇಕು. ಆದದರಿಂದ ಫಿಲಿಷ್ಟಿಯರ ದೇಶಕ್ಕೆ ಹೋಗಿ ತಪ್ಪಿಸಿಕೊಳ್ಳುವದೇ ಉತ್ತಮ. ಆಮೇಲೆ ಸೌಲನು ಇಸ್ರಾಯೇಲ್‍ಪ್ರಾಂತಗಳಲ್ಲಿ ನನ್ನನ್ನು ಹುಡುಕದೆ ಬಿಟ್ಟುಬಿಡುವನು, ನಾನು ಅವನ ಕೈಗೆ ತಪ್ಪಿಸಿಕೊಂಡವನಾಗಿರುವೆನು ಅಂದುಕೊಂಡು
Kannada Bible (KNCL) BSI 2016
ದಾವೀದನು ತನ್ನ ಮನಸ್ಸಿನಲ್ಲೇ, “ನಾನು ಇಲ್ಲಿದ್ದರೆ ಹೇಗೂ ಒಂದು ದಿನ ಸೌಲನ ಕೈಯಿಂದ ಮಡಿಯಲೇ ಬೇಕು. ಆದುದರಿಂದ ಫಿಲಿಷ್ಟಿಯರ ದೇಶಕ್ಕೆ ಹೋಗಿ ತಪ್ಪಿಸಿಕೊಳ್ಳುವುದೇ ಉತ್ತಮ. ಆಮೇಲೆ ಸೌಲನು ಇಸ್ರಯೇಲ್ ಪ್ರಾಂತ್ಯಗಳಲ್ಲಿ ನನ್ನನ್ನು ಹುಡುಕುವುದನ್ನು ಬಿಟ್ಟುಬಿಡುವನು. ನಾನು ಅವನ ಕೈಯಿಂದ ತಪ್ಪಿಸಿಕೊಂಡು ಸುರಕ್ಷಿತನಾಗಿರುವೆನು,” ಎಂದುಕೊಂಡನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ದಾವೀದನು ತನ್ನ ಹೃದಯದಲ್ಲಿ, “ನಾನು ಎಂದಿಗಾದರೂ ಒಂದು ದಿನ ಸೌಲನ ಕೈಯಿಂದ ಸಾಯುತ್ತೇನೆ. ನಾನು ತ್ವರೆಯಾಗಿ ಫಿಲಿಷ್ಟಿಯರ ದೇಶಕ್ಕೆ ತಪ್ಪಿಸಿಕೊಂಡು ಓಡಿ ಹೋಗುವುದಕ್ಕಿಂತ ನನಗೆ ಉತ್ತಮವಾದ ಕಾರ್ಯವಿಲ್ಲ. ಸೌಲನು ನನ್ನನ್ನು ಇಸ್ರಾಯೇಲಿನಲ್ಲಿ ಇನ್ನು ಹುಡುಕಲು ದಿಕ್ಕು ಕಾಣದೆ ಹೋಗುವನು. ಈ ಪ್ರಕಾರ ನಾನು ಅವನ ಕೈಯಿಂದ ತಪ್ಪಿಸಿಕೊಂಡು ಹೋಗುವೆನು,” ಎಂದುಕೊಂಡನು.