1 Samuel 27:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದಾವೀದನು ಒಬ್ಬ ಗಂಡಸನ್ನಾಗಲಿ ಹೆಂಗಸನ್ನಾಗಲಿ ಗತ್ ಊರಿಗೆ ಜೀವಸಹಿತ ಎಂದೂ ತರಲಿಲ್ಲ. ದಾವೀದನು, “ನಾವು ಒಬ್ಬ ಮನುಷ್ಯನನ್ನು ಜೀವಸಹಿತ ಬಿಟ್ಟರೆ, ನಾನು ನಿಜವಾಗಿ ಮಾಡುತ್ತಿರುವುದನ್ನು ಅವನು ಆಕೀಷನಿಗೆ ತಿಳಿಸಬಹುದು” ಎಂದು ಯೋಚಿಸಿದನು. ದಾವೀದನು ಫಿಲಿಷ್ಟಿಯರ ದೇಶದಲ್ಲಿ ವಾಸವಾಗಿದ್ದ ಕಾಲದಲ್ಲೆಲ್ಲಾ ಹೀಗೆಯೇ ಮಾಡುತ್ತಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದಾವೀದನು ತನ್ನ ಕೃತ್ಯವನ್ನು ಜನರು ಹೇಳಾರೆಂದು ನೆನಸಿ, ಅವನು ಯಾರನ್ನೂ ಗತ್ ಊರಿಗೆ ತಾರದೆ, ಎಲ್ಲಾ ಸ್ತ್ರೀಪುರುಷರನ್ನು ಅಲ್ಲೇ ಕೊಂದುಹಾಕುತ್ತಿದ್ದನು. ಅವನು ಫಿಲಿಷ್ಟಿಯರ ದೇಶದಲ್ಲಿ ವಾಸವಾಗಿದ್ದ ಕಾಲದಲ್ಲೆಲ್ಲಾ ಇದೇ ರೀತಿ ಮಾಡುತ್ತಿದ್ದನು.
Kannada BSI Bible 2016
ದಾವೀದನು ಹೀಗೇಕೆ ಮಾಡಿದ ನೆಂದೂ ಅವನು ಫಿಲಿಷ್ಟಿಯರ ಸೀಮೆಯಲ್ಲಿ ವಾಸ ವಾಗಿರುವ ದಿನಗಳೆಲ್ಲಾ ಇದು ಅವನ ಮರ್ಯಾದೆ ಎಂದೂ ಅವರು ತನಗೆ ವಿರೋಧವಾಗಿ ಗತ್ ಪಟ್ಟಣಕ್ಕೆ ವರ್ತಮಾನವನ್ನು ತಕ್ಕೊಂಡು ಬಾರದ ಹಾಗೆ ಒಬ್ಬ ಪುರುಷನನ್ನಾದರೂ ಸ್ತ್ರೀಯನ್ನಾದರೂ ಬದುಕಗೊಡಿ ಸಲಿಲ್ಲ.ಆಕೀಷನು ದಾವೀದನನ್ನು ನಂಬಿ--ಇವನು ತನ್ನ ಜನರಾದ ಇಸ್ರಾಯೇಲ್ಯರಿಗೆ ಅಸಹ್ಯವಾದನು. ಆದದರಿಂದ ಇವನು ಎಂದೆಂದಿಗೂ ನನ್ನ ದಾಸನಾಗಿ ರುವನು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ದಾವೀದನು ತನ್ನ ಕೃತ್ಯವನ್ನು ಜನರು ಹೇಳಾರೆಂದು ನೆನಸಿ ಅವನು ಯಾರನ್ನೂ ಗತ್ ಊರಿಗೆ ತಾರದೆ ಎಲ್ಲಾ ಸ್ತ್ರೀಪುರುಷರನ್ನು ಅಲ್ಲೇ ಕೊಂದುಹಾಕುತ್ತಿದ್ದನು. ಅವನು ಫಿಲಿಷ್ಟಿಯರ ದೇಶದಲ್ಲಿ ವಾಸವಾಗಿದ್ದ ಕಾಲದಲ್ಲೆಲ್ಲಾ ಇದೇ ರೀತಿ ಮಾಡುತ್ತಿದ್ದನು.
Kannada Bible (KNCL) BSI 2016
ದಾವೀದನು ತನ್ನ ಕೃತ್ಯವನ್ನು ಜನರು ಹರಡಬಹುದೆಂದು ನೆನೆಸಿ ಅವನು ಯಾರನ್ನೂ ಗತ್ ಊರಿಗೆ ತಾರದೆ ಸ್ತ್ರೀಪುರುಷರನ್ನೆಲ್ಲ ಅಲ್ಲೇ ಕೊಂದುಹಾಕುತ್ತಿದ್ದನು. ಅವನು ಫಿಲಿಷ್ಟಿಯರ ದೇಶದಲ್ಲಿ ವಾಸವಾಗಿದ್ದ ಅವಧಿಯಲ್ಲಿ ಇದೇ ರೀತಿ ಮಾಡುತ್ತಿದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದಾವೀದನು ಗತ್ ಪಟ್ಟಣಕ್ಕೆ ಒಬ್ಬ ಪುರುಷನನ್ನಾದರೂ ಸ್ತ್ರೀಯನನ್ನಾದರೂ ಜೀವಂತವಾಗಿ ತರಲಿಲ್ಲ. ಏಕೆಂದರೆ ಯಾರಾದರೂ ಹೋಗಿ ರಾಜನಾದ ಆಕೀಷನಿಗೆ ಸತ್ಯವನ್ನು ತಿಳಿಸಬಹುದೆಂದು ದಾವೀದನು ಯೋಚಿಸಿದನು. ಅವನು ಫಿಲಿಷ್ಟಿಯರ ಸೀಮೆಯಲ್ಲಿ ವಾಸವಾಗಿದ್ದ ಕಾಲದಲ್ಲೆಲ್ಲಾ ಇದೇ ರೀತಿ ಮಾಡುತ್ತಿದ್ದನು.