1 Samuel 27:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಕೀಷನು ದಾವೀದನಲ್ಲಿ ಭರವಸೆ ಇಡತೊಡಗಿದನು. ಆಕೀಷನು ತನ್ನೊಳಗೆ, “ಈಗ ದಾವೀದನ ಸ್ವಂತ ಜನರೇ ಅವನನ್ನು ದ್ವೇಷಿಸುವರು. ಇಸ್ರೇಲರು ದಾವೀದನನ್ನು ಬಹಳವಾಗಿ ದ್ವೇಷಿಸುತ್ತಾರೆ. ಈಗ ದಾವೀದನು ಶಾಶ್ವತವಾಗಿ ನನ್ನ ಸೇವೆಮಾಡುವನು” ಎಂದುಕೊಂಡನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದಾವೀದನ ಹೆಸರು ಸ್ವಜನರಾದ ಇಸ್ರಾಯೇಲರಲ್ಲಿ ತನ್ನ ಹೆಸರನ್ನು ಕೆಡಿಸಿಕೊಂಡಿದ್ದರಿಂದ ಇವನು ತನ್ನ ನಿತ್ಯ ದಾಸನಾಗಿರುವನೆಂದು ಆಕೀಷನು ನಂಬಿಕೊಂಡನು.
Kannada BSI Bible 2016
ಆಕೀಷನು ದಾವೀದನನ್ನು ನಂಬಿ--ಇವನು ತನ್ನ ಜನರಾದ ಇಸ್ರಾಯೇಲ್ಯರಿಗೆ ಅಸಹ್ಯವಾದನು. ಆದದರಿಂದ ಇವನು ಎಂದೆಂದಿಗೂ ನನ್ನ ದಾಸನಾಗಿ ರುವನು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ದಾವೀದನ ಹೆಸರು ಸ್ವಜನರಾದ ಇಸ್ರಾಯೇಲ್ಯರಲ್ಲಿ ಅಸಹ್ಯವಾದದರಿಂದ ಇವನು ತನ್ನ ನಿತ್ಯ ದಾಸನಾಗಿರುವನೆಂದು ಆಕೀಷನು ನಂಬಿಕೊಂಡನು.
Kannada Bible (KNCL) BSI 2016
“ದಾವೀದನ ಹೆಸರು ಸ್ವಜನರಾದ ಇಸ್ರಯೇಲರಲ್ಲೇ ತಿರಸ್ಕೃತವಾಗಿದೆ. ಆದುದರಿಂದ ಇವನು ಎಂದೆಂದಿಗೂ ತನ್ನ ಅಧೀನನಾಗಿಯೇ ಇರುವನು,” ಎಂದು ಆಕೀಷನು ನಂಬಿದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಕೀಷನು ದಾವೀದನನ್ನು ನಂಬಿ, “ಇವನು ತನ್ನ ಜನರಾದ ಇಸ್ರಾಯೇಲರಿಗೆ ಅಸಹ್ಯವಾದನು, ಆದ್ದರಿಂದ ಇವನು ಎಂದೆಂದಿಗೂ ನನ್ನ ದಾಸನಾಗಿರುವನು,” ಎಂದನು.