1 Samuel 27:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದಾವೀದನೂ ಅವನ ಜನರೂ ಅವರ ಕುಟುಂಬಗಳವರೂ ಆಕೀಷನೊಂದಿಗೆ ಗತ್‌ನಲ್ಲಿ ನೆಲೆಸಿದರು. ದಾವೀದನ ಜೊತೆಯಲ್ಲಿ ಅವನ ಇಬ್ಬರು ಹೆಂಡತಿಯರೂ ಇದ್ದರು. ಅವರು ಯಾರೆಂದರೆ, ಇಜ್ರೇಲ್ಯಳಾದ ಅಹೀನೋವಮಳು ಮತ್ತು ಕರ್ಮೆಲಿನ ಅಬೀಗೈಲಳು. ಅಬೀಗೈಲಳು ನಾಬಾಲನ ವಿಧವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನೂ, ಅವನ ಜನರೂ ತಮ್ಮ ತಮ್ಮ ಕುಟುಂಬ ಸಹಿತವಾಗಿ ಆಕೀಷನ ಊರಾದ ಗತ್ ಊರಿನಲ್ಲಿ ವಾಸಮಾಡಿದರು. ದಾವೀದನ ಹೆಂಡತಿಯರಾಗಿರುವ ಇಜ್ರೇಲ್ಯಳಾದ ಅಹೀನೋವಮಳೂ, ಕರ್ಮೇಲ್ಯನಾದ ನಾಬಾಲನ ಹೆಂಡತಿಯಾಗಿದ್ದ ಅಬೀಗೈಲಳೂ ಅವನ ಸಂಗಡ ಇದ್ದರು.
Kannada BSI Bible 2016
ದಾವೀದನು ಗತ್ ಊರಿನವ ನಾದ ಆಕೀಷನ ಬಳಿಯಲ್ಲಿ ತಾನೂ ತನ್ನ ಜನರೂ ವಾಸವಾಗಿದ್ದರು. ಪ್ರತಿ ಮನುಷ್ಯನು ತನ್ನ ಮನೆಯವರ ಸಹಿತವಾಗಿಯೂ ದಾವೀದನು ತನ್ನ ಇಬ್ಬರು ಹೆಂಡತಿ ಯರಾದ ಇಜ್ರೇಲಿಯಳಾದ ಅಹೀನೋವಮಳೂ ಕರ್ಮೆಲಿಯಳಾದ ನಾಬಾಲನ ಹೆಂಡತಿಯಾಗಿದ್ದ ಅಬೀಗೈಲಳೂ ಸಹಿತವಾಗಿಯೂ ಇದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನೂ ಅವನ ಜನರೂ ತಮ್ಮತಮ್ಮ ಕುಟುಂಬ ಸಹಿತವಾಗಿ ಆಕೀಷನ ಊರಾದ ಗತ್ ಊರಿನಲ್ಲಿ ವಾಸಿಸಿದರು. ದಾವೀದನ ಹೆಂಡತಿಯರಾಗಿರುವ ಇಜ್ರೇಲ್ಯಳಾದ ಅಹೀನೋವಮಳೂ ಕರ್ಮೆಲ್ಯನಾದ ನಾಬಾಲನ ಹೆಂಡತಿಯಾಗಿದ್ದ ಅಬೀಗೈಲಳೂ ಅವನ ಸಂಗಡ ಇದ್ದರು.
Kannada Bible (KNCL) BSI 2016
ಅವನೂ ಅವನ ಜನರೂ ತಮ್ಮ ತಮ್ಮ ಕುಟುಂಬಸಹಿತವಾಗಿ ಆಕೀಷನ ಊರಾದ ಗತ್ ಊರಿನಲ್ಲಿ ನೆಲೆಸಿದರು. ದಾವೀದನ ಹೆಂಡತಿಯರಾಗಿದ್ದ ಜೆಸ್ರೀಲಿನವಳಾದ ಅಹೀನೋವಮಳು ಹಾಗು ಕರ್ಮೇಲ್ಯನಾದ ನಾಬಾಲನ ಹೆಂಡತಿ ಆಗಿದ್ದ ಅಬೀಗೈಲಳು ಅವನ ಸಂಗಡ ಇದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದಾವೀದನು ಗತ್ ಊರಿನಲ್ಲಿ ಆಕೀಷನ ಬಳಿಯಲ್ಲಿ ತಾನೂ, ತನ್ನ ಜನರೂ ವಾಸವಾಗಿದ್ದರು. ಪ್ರತಿ ಮನುಷ್ಯನು ತನ್ನ ಮನೆಯವರ ಸಹಿತವಾಗಿಯೂ, ದಾವೀದನು ತನ್ನ ಇಬ್ಬರು ಹೆಂಡತಿಯರಾದ ಇಜ್ರೆಯೇಲಿನವಳಾದ ಅಹೀನೋವಮಳು, ಕರ್ಮೇಲ್ಯನಾದ ನಾಬಾಲನ ಹೆಂಡತಿಯಾಗಿದ್ದ ಅಬೀಗೈಲಳು ಸಹಿತವಾಗಿಯೂ ಇದ್ದರು.